×
Ad

ಯಾದಗಿರಿ | ಕಾಂಗ್ರೆಸ್ ಸರಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ : ಅವ್ವಣ್ಣ ಮ್ಯಾಕೇರಿ

Update: 2025-07-08 17:57 IST

ಯಾದಗಿರಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾ‌ಕೇರಿ ಆರೋಪಿಸಿದರು.

ಬೆಂಗಳೂರಿನ ತೈಲೇಶ್ವತ ಗಾಣಿಗೇರ ಮಹಾ ಸಂಸ್ಥಾನ ಮಠದ‌ ಅಭಿವೃದ್ಧಿಗೆ ಸರಕಾರ ಕಳೆದ 2012 ರಲ್ಲಿ 3.30 ಕೋಟಿ ರೂ.ಗಳನ್ನು ಮಂಜೂರು ಮಾಡಿತ್ತು. ಇದರಲ್ಲಿ ಒಂದುವರೆ ಕೋಟಿ ಬಿಡುಗಡೆಯಾಗಿತ್ತು. ಉಳಿದ ಒಂದುವರೆ ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಮಠದ ಪೀಠಾಧಿಪತಿಗಳು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಮಂಗಳವಾರ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.

ಜಾತಿ ಜನಗಣತಿ ಹಿನ್ನಲೆ ಹಾಗೂ ಮುನ್ನಲೆ ಕುರಿತು ಹಾಗೂ ಈ ಸರ್ಕಾರ ಹಿಂದುಳಿದ ವರ್ಗಗಳಿಗೆ ಮಾಡುತ್ತಿರುವ ಅನ್ಯಾಯದ ಕುರಿತು ಜು.13ರಂದು ಕಲಬುರಗಿಯಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ.‌‌ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸೇರಿ ಪ್ರಮುಖ ಗಣ್ಯರು ಆಗಮಿಸಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರುಶುರಾಮ ಕುರಕುಂದಿ, ಸಿದ್ದಣ್ಣಗೌಡ ಕಾಡಂನೋರ, ಓಬಿಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕುರಕುಂದಿ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ವಿರೂಪಾಕ್ಷ ಸ್ವಾಮಿ ಹೇಡಗಿಮದ್ರಿ, ಚಂದ್ರಶೇಖರ ಕಡೆಚೂರ್, ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News