×
Ad

ಯಾದಗಿರಿ| ಹಿರಿಯ ದಲಿತ ಮುಖಂಡ ಮಾನಪ್ಪ ಕಟ್ಟಿಮನಿ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

Update: 2025-11-29 16:51 IST

ಯಾದಗಿರಿ: ಸುರಪುರದ ಹಿರಿಯ ದಲಿತ ಮುಖಂಡ ಮಾನಪ್ಪ ಕಟ್ಟಿಮನಿ ಅವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಶಾಸಕರ ಬೆಂಬಲಿಗರ ವಿರುದ್ಧ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದೆ.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್ ಮಾತನಾಡಿ, ಅಂಬೇಡ್ಕರ್ ಗ್ರಂಥಾಲಯಕ್ಕೆ ಸರಕಾರಿ ಜಾಗ ಮಂಜೂರು ಮಾಡುವಂತೆ ಕಳೆದ 100 ದಿನಗಳಿಂದ ನಡೆಯುತ್ತಿರುವ ಹೋರಾಟದಲ್ಲಿ ಸಕ್ರಿಯವಾಗಿದ್ದ ಮಾನಪ್ಪ ಕಟ್ಟಿಮನಿ ಅವರನ್ನು ಸಾರ್ವಜನಿಕ ಸ್ಥಳದಲ್ಲಿ ಅವಮಾನ ಮಾಡಿ ಹಲ್ಲೆ ನಡೆಸಿರುವುದು ಸಮಾಜಕ್ಕೆ ಮಾಡಿದ ಅವಮಾನವಾಗಿದೆ. ಆದ್ದರಿಂದ ಶಾಸಕರ ಬೆಂಬಲಿಗರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.   

ಈ ವೇಳೆ ಗೋಪಾಲ ತೆಳಗೇರಿ, ಬಸವರಾಜ ಗುಡಿಮನಿ, ಸೈದಪ್ಪ ಕೂಲೂರ, ಭೀಮರಾಯ ಹೊಸ್ಮನಿ, ಬಾಲರಾಜ ಖಾನಪೂರ, ಪರಶುರಾಮ ಒಡೆಯರ್, ವಿಜಯಕುಮಾರ್ ಶಿರಗೋಳಕರ್, ಅಂಬ್ರೇಶ ಚಟ್ಟೇರಕರ್, ಸಂಪತ್ ಚಿನ್ನಾಕಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News