×
Ad

ಯಾದಗಿರಿ | ಜು.23 ರಂದು ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆ : ಡಿಸಿ ಹರ್ಷಲ್ ಭೋಯರ್

Update: 2025-07-21 19:59 IST

ಯಾದಗಿರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಅನುಷ್ಟಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯನ್ನು 2025ರ ಜುಲೈ 23 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ತಿಳಿಸಿದ್ದಾರೆ.

ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿಗಳ ಸಭೆಗಳು :

ಐ.ಸಿ.ಡಿ.ಎಸ್ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ  (independent spacial task force committee) ರಾಷ್ಟ್ರೀಯ ಪೋಷಣ್ ಅಭಿಯಾನ ಸಮನ್ವಯ ಸಮಿತಿ, ಮಿಷನ್ ಶಕ್ತಿ ಯೋಜನೆ ಜಿಲ್ಲಾ ಮಟ್ಟದ ಸಮಿತಿ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಶಕ್ತಿ ಸದನಾ), ಬಾಲ್ಯ ವಿವಾಹ ತಡೆಯುವ ಮತ್ತು ಮಹಿಳೆಯರ ಮತ್ತು ಮಕ್ಕಳ ಅನೈತಿಕ ಕಳ್ಳ ಸಾಗಾಣಿಕೆ ತಡೆ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ತಡೆ ಸಮಿತಿ, ಭಾಗ್ಯಲಕ್ಷ್ಮಿ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ, ಲಿಂಗತ್ವ ಅಲ್ಪಸಂಖ್ಯಾತರು, (ಟಾನ್ಸ್ಜಂಡರ್) ಸಮನ್ವಯ ಮತ್ತು ಉಸ್ತುವಾರಿ ಕೋಶ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿಗಳ ಸಭೆಗೆ ಅಂದು ಸಂಬಂಧಪಟ್ಟ ಅಧಿಕಾರಿಗಳು ಖುದ್ದಾಗಿ ಹಾಗೂ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News