×
Ad

ಯಾದಗಿರಿ | ರಕ್ತದಾನ ಮಾಡಿ ಜೀವ ಉಳಿಸಿ : ಪಂಪನಗೌಡ

Update: 2025-07-21 19:55 IST

ಯಾದಗಿರಿ: ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಬೇಕೆಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡ ಪಂಪನಗೌಡ ಚನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನವನ್ನು ಆಚರಿಸಿ, ರಕ್ತದಾನ ಶಿಬಿರಕ್ಕೆ‌ ಚಾಲನೆ ನೀಡಿ ಅವರು ಮಾತನಾಡಿದರು.

ಇಂದು ರಕ್ತ ಹೀನತೆಯಿಂದ ಬಳಲುವವರ ಸಂಖ್ಯೆ ಅಧಿಕವಾಗಿದೆ. ಅನಾರೋಗ್ಯದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ರೋಗಿಗಳಿಗೂ ರಕ್ತದ ಕೊರತೆ ಇದ್ದು, ಈ ಮೂಲಕ ರಕ್ತದಾನ ಶಿಬಿರ ಆಯೋಜಿಸಿ ಅನುಕೂಲ ಮಾಡಿಕೊಡಲಾಗುವುದೆಂದರು.

ಈ‌ ಸಂದರ್ಭದಲ್ಲಿ ಕಾಂಗ್ರೆಸ್‌ ಮುಖಂಡರಾದ ಬಸ್ಸುಗೌಡ ಬಿಳ್ಹಾರ್, ಮಲ್ಲಣ್ಣ ದಾಸನಕೇರಿ, ಅನೀಲ್ ಹೆಡಗಿಮದ್ರಿ, ಮರೆಪ್ಪ ಬಿಳ್ಹಾರ್, ಮಲ್ಲಿಕಾರ್ಜುನ ಈಟೆ,ಸುರೇಶ ಮಡ್ಡಿ, ತಿಮ್ಮಣ್ಣ ನಾಯಕ, ಸಾಬಣ್ಣ ಬಾಡಿಯಾಳ್,ಮಲ್ಲಯ್ಯ ಕಸಬಿ, ಬಸವರಾಜ ಬುಡಯಿ,ಗುರುನಾಥ ರೆಡ್ಡಿ,ಬಾಪು ಗೌಡ ಮಾಚನೂರ್, ಮೈನುದ್ದೀನ್ ಮಿರ್ಚಿ, ಸೋಮಶೇಖರ ಮಸಕನಳ್ಳಿ ಶರಣಗೌಡ ಮಾಲಿಪಾಟೀಲ್. ಅಮರೇಶ ಜಾಕಾ, ಜಿಲ್ಲಾ‌ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಸಂಜೀವಕುಮಾರ ರಾಯಚೂರಕರ್, ತಾಲೂಕು‌ ಆರೋಗ್ಯ ಅಧಿಕಾರಿ ಡಾ. ಹಣಮಂತರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು‌.

ಈ ವೇಳೆ ಸುಮಾರು 25 ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News