×
Ad

Yadgiri | ಎಸ್‌ಐಆರ್ ಕುರಿತು ಗ್ರಾಮಗಳಲ್ಲಿ ಜಾಗೃತಿ ಮೂಡಿಸಿದ ಡಾ.ಭೀಮಣ್ಣ ಮೇಟಿ

ಬಿಎಲ್‌ಒಗಳಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸುವಂತೆ ಮತದಾರರಿಗೆ ಮನವಿ

Update: 2026-07-05 19:05 IST

ಯಾದಗಿರಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಮತದಾರರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟಿ ಅವರು ಯಾದಗಿರಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಜಾಗೃತಿ ಕಾರ್ಯಕ್ರಮ ನಡೆಸಿದರು.

ಅಶೋಕ ನಗರ ತಾಂಡಾ, ಮುಂಡರಗಿ, ವರ್ಕನಳ್ಳಿ ಹಾಗೂ ವರ್ಕನಳ್ಳಿ ತಾಂಡಾ ಗ್ರಾಮಗಳಿಗೆ ಭೇಟಿ ನೀಡಿ ಮತದಾರರಿಗೆ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರರೂ ಸಕ್ರಿಯವಾಗಿ ಭಾಗವಹಿಸಿ, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಕೇಳುವ ಅಗತ್ಯ ಮಾಹಿತಿಯನ್ನು ಒದಗಿಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಬಿಎಲ್‌ಒಗಳು ಮನೆಮನೆಗೆ ಭೇಟಿ ನೀಡಿ ಗಣತಿ ನಮೂನೆ ಅರ್ಜಿಗಳನ್ನು ವಿತರಿಸುತ್ತಿದ್ದು, ಮತದಾರರು ಅವುಗಳನ್ನು ಸರಿಯಾಗಿ ಭರ್ತಿ ಮಾಡಿ ನಿಗದಿತ ಸಮಯದಲ್ಲಿ ಹಿಂತಿರುಗಿಸಬೇಕು ಎಂದು ತಿಳಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಸುದರ್ಶನ ನಾಯಕ ಅವರು ವರ್ಕನಳ್ಳಿ ಗ್ರಾಮದಲ್ಲಿ ಎಸ್‌ಐಆರ್ ಅರ್ಜಿ ಭರ್ತಿ ಮಾಡಿ ಸಲ್ಲಿಸುವ ಮೂಲಕ ಸಾರ್ವಜನಿಕರಿಗೆ ಮಾದರಿಯಾದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News