ಯಾದಗಿರಿ | ವರ್ಗಾವಣೆಗೊಂಡ ಡಿಸಿ ಡಾ.ಸುಶೀಲಾ ಬಿ. ಅವರಿಗೆ ಜಿಲ್ಲಾಡಳಿತದ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ
ಯಾದಗಿರಿ: ಜಿಲ್ಲೆಯಲ್ಲಿ ಸೇವೆ ಸಲ್ಲಿಸಿ, ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆಗೊಂಡಿರುವ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರಿಗೆ ಹಾಗೂ ರಾಯಚೂರಗೆ ವರ್ಗಾವಣೆಗೊಂಡಿರುವ ಈ ಹಿಂದಿನ ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೋಳ ಅವರಿಗೆ ಜಿಲ್ಲಾಡಳಿತದ ವತಿಯಿಂದ ಇಂದು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಇದೇ ಸಂದರ್ಭದಲ್ಲಿ ನೂತನ ಜಿಲ್ಲಾಧಿಕಾರಿಗಳಾಗಿ ಪ್ರಭಾರವಹಿಸಿಕೊಂಡಿರುವ ಶ್ರೀ ಹರ್ಷಲ್ ಬೋಯರ್ ಹಾಗೂ ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ್ ಅವರಿಗೆ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ಗಮಿತ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು, ತಮ್ಮ ಸೇವಾವಧಿಯಲ್ಲಿ ರೈತ ಸಂಘ, ಭಾವೈಕ್ಯತಾ ಸಮಿತಿ, ದೌರ್ಜನ್ಯ ಸಮಿತಿ ಸದಸ್ಯರು, ಮಾಧ್ಯಮ ಸ್ನೇಹಿತರು ಅಪಾರ ಸಹಕಾರ ನೀಡಿರುವುದಕ್ಕೆ ಅಭಿನಂದಿಸಿದರು.
ನೂತನ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಎಸ್.ಪಿ.ಪೃಥ್ವಿಕ್ ಶಂಕರ್ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರ ಆಡಳಿತ ವೈಖರಿ ಬಗ್ಗೆ ಸ್ಮರಿಸಿದರು.
ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ರೈತ ಸಂಘದ ಅಧ್ಯಕ್ಷ ಕಾಂತು ಪಾಟೀಲ್, ತಹಶೀಲ್ದಾರ್ ಸುರೇಶ್ ಅಂಕಲಗಿ, ಡಿಡಿಪಿಐ ಚನ್ನಬಸಪ್ಪ ಮುಧೋಳ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಚನ್ನಬಸವ ಹಾಗೂ ಇತರರು ಮಾತನಾಡಿದರು.
ಪದವಿ ಕಾಲೇಜು ಪ್ರಾಂಶುಪಾಲ ಸುಭಾಷ್ ಚಂದ್ರ ಕೌಲಗಿ ಕಾರ್ಯಕ್ರಮ ನಿರೂಪಿಸಿದರು.