×
Ad

ಯಾದಗಿರಿ | ಪ್ರತಿಭಾನ್ವಿತ ಮಕ್ಕಳಿಗೆ ಸರಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ

Update: 2025-05-27 21:22 IST

ಸುರಪುರ : ಎಸೆಸೆಲ್ಸಿ ಮತ್ತು ಪಿಯುಸಿ ನಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದಿರುವ ರಾಜ್ಯ ಸರಕಾರಿ ನೌಕರರ ಮಕ್ಕಳಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಿಂದ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ರಾಮಕೃಷ್ಣ ಕಲಬುರಗಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಭಾ ಪುರಸ್ಕಾರಕ್ಕೆ ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತಂದೆ ಅಥವಾ ತಾಯಿ ಕರ್ನಾಟಕ ರಾಜ್ಯ ಸರಕಾರಿ ನೌಕರರು ಆಗಿರಬೇಕು, ಸಂಘವು ನಿಗದಿಪಡಿಸಿದ ನಮೂನೆಯಲ್ಲಿ ಕ.ರಾ.ಸ.ನೌ ಸಂಘದ ಸಂಬಂಧಿಸಿದ ತಾಲೂಕು ಶಾಖೆಯ ನೌಕರರ ಸಂಘದ ಅಧ್ಯಕ್ಷರ ರುಜು ಮೊಹರಿನೊಂದಿಗೆ ದೃಢಿಕರಿಸಿ ಆನ್‌ಲೈನ್ ನಲ್ಲಿ ಅಪ್ಲೋಡ್ ಮಾಡಬೇಕೆಂದು ತಿಳಿಸಿದ್ದು, ಅರ್ಜಿ ಸಲ್ಲಿಸಲು https:// ksgeanews.blogspot,com ಲಿಂಕ್ ಮೂಲಕ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದ್ದು, ತಾಲೂಕಿನ ಸರಕಾರಿ ನೌಕರರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News