×
Ad

ಯಾದಗಿರಿ | ಬಾಲ್ಯ ವಿವಾಹ ನಿಷೇಧ ಕುರಿತು ಹಸನಾಪುರ ವಲಯ ಮಟ್ಟದ ಕಾರ್ಯಗಾರ

Update: 2025-06-30 21:14 IST

ಸುರಪುರ: ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಗ್ರಾಮೀಣ ಜನರಲ್ಲಿ ಹೆಚ್ಚಾಗಿ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಚಂದ್ರಲೀಲಾ ನಿಂಬೂರ ಹೇಳಿದರು.

ತಾಲೂಕಿನ  ಕೃಷ್ಣಾಪುರ ಗ್ರಾಮದ ಕರ್ನಾಟಕ ಪ್ರೌಢ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಮಹಿಳೆಯರ ಮತ್ತು ಮಕ್ಕಳ ಅಕ್ರಮ ಸಾಗಾಣಿಕೆ ತಡೆಗಟ್ಟುವಿಕೆ ಬಾಲ್ಯ ವಿವಾಹ ನಿಷೇಧ ಕುರಿತು ಹಸನಾಪುರ ವಲಯ ಮಟ್ಟದ ಕಾರ್ಯಗಾರದಲ್ಲಿ ಮಾತನಾಡಿದರು . 

ಶಿಕ್ಷಕಿಯಾದ ಮಂಜುಳಾ ಮಾತನಾಡಿ, ಮಹಿಳೆ ಮತ್ತು ಮಕ್ಕಳನ್ನು ಜೀತ ಪದ್ಧತಿ ಲೈಂಗಿಕ ಚಟುವಟಿಕೆಗಳಿಗೆ ಹಾಗೂ ದೇಹದ ಅಂಗಾಂಗಗಳ ಮಾರಾಟಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಇದನ್ನು ತಡೆಗಟ್ಟಲು ಸಾರ್ವಜನಿಕರು ಸರಕಾರದೊಂದಿಗೆ ಕೈಜೋಡಿಸಬೇಕು. ಇದು ಜಿಲ್ಲೆ ರಾಜ್ಯ ದೇಶದ ಸಮಸ್ಯೆ ಆಗಿರದೆ ಅಂತರರಾಷ್ಟ್ರೀಯ ಸಮಸ್ಯೆ ಆಗಿರುವುದರಿಂದ ಇಲಾಖೆ ಹಾಗೂ ಸ್ವಯಂ ಸೇವಾ ಸಂಘ ಸಂಸ್ಥೆಗಳು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. 

ಕರ್ನಾಟಕ ಪ್ರೌಢಶಾಲೆಯ ಶಿಕ್ಷಕರಾದ ವೆಂಕೋಬ ಅಂಗಡಿ, ಶಿಕ್ಷಕ ಮಹಾಂತೇಶ ಮಾತನಾಡಿದರು.

ಈ ವೇಳೆ ಶಾಲೆಯ ಶಿಕ್ಷಕರು,ಅಂಗನವಾಡಿ ಕಾರ್ಯಕರ್ತಿಯರಾದ ಜಯಶ್ರೀ, ಮುನಿರಾ ಬೇಗಂ ,ಸ್ನೇಹ ತೇಲ್ಕರ್ ಸೇರಿದಂತೆ ಶಾಲಾ ಮಕ್ಕಳು ಭಾಗವಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News