Yadgiri | ಸಂಚಾರ ನಿಯಮ ಉಲ್ಲಂಘನೆ ಕಂಡರೆ ವಾಟ್ಸ್ ಆಪ್ ಮೂಲಕ ಪೊಲೀಸರಿಗೆ ಮಾಹಿತಿ ನೀಡಲು ಸೂಚನೆ

Update: 2026-08-19 18:44 IST

ಸಾಂದರ್ಭಿಕ ಚಿತ್ರ | Photo credit : PTI

ಯಾದಗಿರಿ: ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ತಡೆಗಟ್ಟಲು ಸಾರ್ವಜನಿಕರಿಗೆ ಹಲವು ಬಾರಿ ಜಾಗೃತಿ ಮೂಡಿಸಲಾಗಿದ್ದು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಗೂ ನಾಲ್ಕುಚಕ್ರ ವಾಹನ ಚಾಲಕರು ಸೀಟ್‌ಬೆಲ್ಟ್ ಧರಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ಸೂಚಿಸಿದೆ.

ಜಿಲ್ಲೆಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳ ಮೂಲಕ ಸಂಚಾರ ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಿ, ನೋಟಿಸ್ ಹಾಗೂ ದಂಡ ವಿಧಿಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಸಾರ್ವಜನಿಕರ ಗಮನಕ್ಕೆ ಬರುವ ಸಂಚಾರ ನಿಯಮ ಉಲ್ಲಂಘನೆಯ ದೃಶ್ಯಗಳನ್ನು ಭಾವಚಿತ್ರದೊಂದಿಗೆ ಸಂಕ್ಷಿಪ್ತ ವಿವರ ಸೇರಿಸಿ ಜಿಲ್ಲಾ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ರೂಮ್‌ನ ವಾಟ್ಸ್‌ಆಪ್ ಸಂಖ್ಯೆ 9480803668ಕ್ಕೆ ಕಳುಹಿಸುವಂತೆ ಮನವಿ ಮಾಡಲಾಗಿದೆ.

ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ಸುರಕ್ಷಿತ ಸಂಚಾರಕ್ಕೆ ಆದ್ಯತೆ ನೀಡಬೇಕು. ನಿಯಮ ಉಲ್ಲಂಘನೆ ತಡೆಗಟ್ಟುವಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಯಾದಗಿರಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News