ಯಾದಗಿರಿ | ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದಿದೆ : ಬಿಜೆಪಿ ಆರೋಪ
ಯಾದಗಿರಿ : ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಎಲ್ಲ ಪೊಲೀಸ್ ಠಾಣೆಗಳು ಕಾಂಗ್ರೆಸ್ ಪಕ್ಷದ ಕಚೇರಿಗಳಾಗಿವೆ. ಬಿಜೆಪಿ ಮುಖಂಡರ ಮತ್ತು ಕಾರ್ಯಕರ್ತರ ಮೇಲೆ ದೌರ್ಜನ್ಯ, ಸುಳ್ಳು ಕೇಸ್ ಹಾಕಲಾಗುತ್ತಿದೆ. ಇದು ಬಹಳ ದಿನಗಳ ನಡೆಯುವುದಿಲ್ಲ ಎಂಬುವುದನ್ನು ರಾಜ್ಯದಲ್ಲಿ ಆಳುತ್ತಿರುವ ಕಾಂಗ್ರೆಸ್ ಪಕ್ಷದ ಎಲ್ಲರೂ ಅರಿತುಕೊಳ್ಳಬೇಕು. ಬರುವ ದಿನಗಳಲ್ಲಿ ಜನರೇ ತಕ್ಕಪಾಠ ಕಲಿಸುತ್ತಾರೆಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪ ವಿಭೂತಿಹಳ್ಳಿ ಹೇಳಿದ್ದಾರೆ.
ಬುಧವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಗೃಹ ಸಚಿವರು ಆಟಕ್ಕುಂಟು ಲೆಕ್ಕಕಿಲ್ಲ ಎಂಬಂತೇ ಇದ್ದಾರೆ. ಏನೇ ಘಟನೆ ಜರುಗಿದರೂ ಗಂಭಿರವಾಗಿ ತೆಗೆದುಕೊಳ್ಳುವುದೇ ಇಲ್ಲ, ಇನ್ನೂ ಕಲಬುರಗಿ ಸೇರಿದಂತೆಯೇ ಆರು ಸಚಿವರು ತಮ್ಮ, ತಮ್ಮ ಜಿಲ್ಲೆಗಳನ್ನು ರಿಪಬ್ಲಿಕ್ ಜಿಲ್ಲೆಗಳನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದರು.
ಈ ವೇಳೆ ಯುವ ಮುಖಂಡ ಮಹೇಶ್ ರೆಡ್ಡಿ ಮುದ್ನಾಳ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮಾ ಮತ್ತು ಪರಶುರಾಮ ಕುರಕುಂದಾ, ಹಿರಿಯ ಮುಖಂಡ ದೇವೆಂದ್ರನಾಥ ನಾದ್, ಮೌನೇಶ ಬೇಳಿಗೇರಿ, ಜಿಲ್ಲಾ ಮಾಧ್ಯಮ ಸಂಚಾಲಕ ವೀರುಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಾ ಸೇರಿದಂತೆ ಇತರರಿದ್ದರು.