×
Ad

ಯಾದಗಿರಿ: ಜೆಸ್ಕಾಂ ಸಹಾಯಕ ಅಭಿಯಂತರರ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Update: 2026-03-05 11:06 IST

ಯಾದಗಿರಿ: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಯಾದಗಿರಿ ಜೆಸ್ಕಾಂ ಸಹಾಯಕ ಅಭಿಯಂತರ (ಎಇ) ವಿರೇಶ್ ಹಿರೇಮಠ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಮುಂಜಾನೆ ದಾಳಿ ಮಾಡಿದ್ದಾರೆ.

ನಗರದ ಮಾತಾಮಾಣಿಕೇಶ್ವರಿ ನಗರದಲ್ಲಿರುವ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ವಿರೇಶ್ ಹಿರೇಮಠ ಮನೆಯಲ್ಲಿ ಇದ್ದರು ಎನ್ನಲಾಗಿದೆ.

ಲೋಕಾಯುಕ್ತ ಎಸ್ಪಿ ಸಿದ್ದರಾಯ ಬಳರಗಿ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News