ಯಾದಗಿರಿ | ದುಷ್ಕರ್ಮಿಗಳಿಂದ ಕಾಂಗ್ರೆಸ್ ಕಚೇರಿಗೆ ಬೆಂಕಿ
Update: 2025-05-24 16:20 IST
ಯಾದಗಿರಿ : ಜಿಲ್ಲಾ ಕಾಂಗ್ರೆಸ್ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹಾಕಿರುವ ಘಟನೆ ನಗರದ ಕನಕ ವೃತ್ತದ ಬಳಿ ನಡೆದಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.
ಶುಕ್ರವಾರ ಮಧ್ಯ ರಾತ್ರಿ ದುಷ್ಕರ್ಮಿಗಳು ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟು, ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವುದು ಅಲ್ಲಿರುವ ಪೆಟ್ರೋಲ್ ಕ್ಯಾನ್‌ನಿಂದ ತಿಳಿದು ಬಂದಿದೆ.
ಕಾಂಗ್ರೆಸ್ ಕಚೇರಿಯಲ್ಲಿದ್ದ ಸೋಫಾ, ಎಸಿ ಎಲ್ಲವೂ ಬೆಂಕಿಗೆ ಅಹುತಿಯಾಗಿದ್ದು, ಘಟನಾ ಸ್ಥಳಕ್ಕೆ ನಗರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.