×
Ad

Yadgiri | ಭೀಮಾ ನದಿಯಲ್ಲಿ ಮೃತಪಟ್ಟ ಮೀನುಗಾರನ ಮನೆಗೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಭೇಟಿ; ಪರಿಹಾರದ ಭರವಸೆ

Update: 2026-07-12 18:32 IST

ಯಾದಗಿರಿ: ತಾಲೂಕಿನ ತಳಕ ಗ್ರಾಮದ ಮೀನುಗಾರ ಹಣಮಂತ ಚಂದಪ್ಪ ಸಗರ ಅವರು ಇತ್ತೀಚೆಗೆ ಭೀಮಾ ನದಿಯಲ್ಲಿ ಬಿದ್ದು ಅಕಾಲಿಕವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ, ಯಾದಗಿರಿ ಕ್ಷೇತ್ರದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಘಟನೆಯಿಂದ ದುಃಖಿತಗೊಂಡಿರುವ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಶಾಸಕರು, ಹಣಮಂತ ಸಗರ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದರು.

ಮೀನುಗಾರಿಕೆಗೆ ತೆರಳಿದ್ದ ವೇಳೆ ಸಂಭವಿಸಿದ ಈ ದುರ್ಘಟನೆ ಬೇಸರದ ಸಂಗತಿಯಾಗಿದೆ. ಕುಟುಂಬದ ಆಧಾರಸ್ತಂಭವನ್ನು ಕಳೆದುಕೊಂಡಿರುವ ಸಗರ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾದ ಎಲ್ಲಾ ಕಾನೂನುಬದ್ಧ ಪರಿಹಾರ ಹಾಗೂ ಸೌಲಭ್ಯಗಳನ್ನು ಶೀಘ್ರದಲ್ಲಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಉಮೇಶ ಮುದ್ನಾಳ, ಗ್ರಾಮದ ಪ್ರಮುಖರು, ಸ್ಥಳೀಯ ಮುಖಂಡರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News