ಯಾದಗಿರಿ | ಶಾಸಕರಿಂದ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ
ಸುರಪುರ: ನಗರದ ಹೊರವಲಯಲ್ಲಿರುವ ಗುಡಿಹಾಳ (ಜೆ) ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನಾ ಸಮಾರಂಭ ಹಾಗೂ 6 ನೇ ತರಗತಿ ಮಕ್ಕಳಿಗೆ ಸ್ವಾಗತ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಕ್ಕೆ ಸುರಪುರ ಮತ ಕ್ಷೇತ್ರದ ಶಾಸಕರಾದ ರಾಜಾ ವೇಣುಗೋಪಾಲ ನಾಯಕ ರವರು ರಿಬ್ಬನ್ ಕಟ್ ಮಾಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಲವೀಶ್ ಓರಡಿಯಾ, ಸುರಪುರ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಬಸವರಾಜ ಸಜ್ಜನ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಚೆನ್ನಬಸವ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಿದ್ದಣ್ಣ ಅಣಬಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಎಂ.ಡಿ. ಸಲೀಂ ಸಾಬ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಿರಿಯ ಅಭಿಯಂತರಾದ ಹನುಮಂತಪ್ಪ, ಕಾಂಗ್ರೆಸ್ ಮುಖಂಡರಾದ ವೆಂಕೋಬ ಯಾದವ್, ರಮೇಶ ದೊರೆ ಅಲ್ದಾಳ, ನಿಂಗರಾಜ್ ಬಾಚಿಮಟ್ಟಿ, ವೆಂಕಟೇಶ ಬೇಟೆಗಾರ, ಶಾಲೆ ಪ್ರಾಂಶುಪಾಲರಾದ ಜಯಶ್ರೀ ಗಣಾಚಾರಿ ಸೇರಿದಂತೆ ಶಾಲಾ ಸಿಬ್ಬಂದಿಗಳು ಹಾಗೂ ವಿಧ್ಯಾರ್ಥಿಗಳು ಹಾಜರಿದ್ದರು.