×
Ad

ಯಾದಗಿರಿ | ನೀರನ್ನು ಕಾಯಿಸಿ, ಸೋಸಿ ಕುಡಿಯಲು ನಗರಸಭೆ ಪೌರಾಯುಕ್ತರಿಂದ ಮನವಿ

Update: 2025-07-21 19:57 IST

ಯಾದಗಿರಿ: ಯಾದಗಿರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾರ್ಡ್ ಗಳ ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ ಸೋಸಿ ಕುಡಿಯಬೇಕು ಎಂದು ಯಾದಗಿರಿ ನಗರಸಭೆ ಪೌರಾಯುಕ್ತರು ಉಮೇಶ ಚವ್ಹಾಣ್‌ ಅವರು ತಿಳಿಸಿದ್ದಾರೆ.

ಈಗಾಗಲೇ ಮಳೆಗಾಲ ಪ್ರಾರಂಭದ ಹಿನ್ನೆಲೆ ಗುರುಸುಣಗಿ ಬ್ಯಾರೇಜ್‌ನಿಂದ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡುತ್ತಿರುವುದರಿಂದ ಹೊಂಡು ಮಿಶ್ರಿತ ನೀರು ನದಿಗೆ ಬರುತ್ತಿದ್ದು, ಯಾದಗಿರಿ ನಗರಸಭೆಯ ನೀರು ಶುದ್ಧೀಕರಣ ಘಟಕದಿಂದ ಕುಡಿಯುವ ನೀರನ್ನು ಪ್ರತಿದಿನ ಮೂರು ಬಾರಿ ನೀರಿನ ತಪಾಸಣೆ ಮಾಡಿ ಶುದ್ಧೀಕರಿಸಿದ ನೀರನ್ನು ನಗರಕ್ಕೆ ಸರಬರಾಜು ಮಾಡಲಾಗುತ್ತಿದ್ದು, ನಗರದ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಮುಂಜಾಗೃತ ಕ್ರಮವಾಗಿ ಕುಡಿಯುವ ನೀರನ್ನು ಕಾಯಿಸಿ ಸೋಸಿ ಕುಡಿಯಲು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

ಕುಡಿಯುವ ನೀರನ್ನು ಮಿತವಾಗಿ ಬಳಸಿ ನೀರನ್ನು ಪೋಲಾಗದಂತೆ ಮತ್ತು ನಗರಸಭೆಯೊಂದಿಗೆ ಸಹಕರಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News