Yadgiri | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ
Update: 2026-03-03 12:37 IST
ಸಾಂದರ್ಭಿಕ ಚಿತ್ರ | PC : freepik
ಯಾದಗಿರಿ : ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಗುತ್ತಿಬಸವಣ್ಣ ಕ್ರಾಸ್ ಬಳಿ ಕುಡಿದಮತ್ತಿನಲ್ಲಿ ಸ್ನೇಹಿತರಿಬ್ಬರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಬಸನಗೌಡ (30) ಎಂಬ ಯುವಕ ಕೊಲೆಯಾದ ವ್ಯಕ್ತಿ. ಇಬ್ಬರೂ ಟಿಪ್ಪರ್ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ವಾದ ಆರಂಭವಾಗಿ, ಅದು ತೀವ್ರ ಸ್ವರೂಪ ಪಡೆದು ಹಲ್ಲೆಗೆ ತಿರುಗಿದ ಪರಿಣಾಮ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹಾಗೂ ಡಿವೈಎಸ್ಪಿ ಜಾವೇದ್ ಇನಾಮ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿಯಾದ ಬಸನಗೌಡನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
ಈ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.