×
Ad

ಯಾದಗಿರಿ | ನಮ್ಮಲ್ಲಿ ಯಾರ ಬದಲಾವಣೆಯೂ ಇಲ್ಲ: ಛಲವಾದಿ ನಾರಾಯಣಸ್ವಾಮಿ

Update: 2025-06-26 16:37 IST

ಯಾದಗಿರಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ ಎಂಬ ವಿಶ್ವಾಸವಿದೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲುವಾದಿ ನಾರಾಯಣಸ್ವಾಮಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕನ ಬದಲಾವಣೆ ಸೇರಿದಂತೆಯೇ ಯಾರ ಬದಲಾವಣೆ ಇಲ್ಲ. ಈ ಬಗ್ಗೆ ಏನೇ ಇದ್ದರೂ ಪಕ್ಷದ ಹೈಕಮಾಂಡ್‌ ನೋಡಿಕೊಳ್ಳುತ್ತದೆ. ಪಕ್ಷದ ಸಂಘಟನೆ ವಿಚಾರವಾಗಿ ದೆಹಲಿಗೆ ರಾಜ್ಯಾಧ್ಯಕ್ಷರು ಹೋಗಿ ಬರುತ್ತಾರೆ. ಅದಕ್ಕೆ ಬೇರೆ ಕಲ್ಪನೆ ಕಟ್ಟುವುದು ಬೇಡ ಎಂದರು.

ಇನ್ನೂ 2-3 ತಿಂಗಳಲ್ಲಿ ಭಾರಿ ಬದಲಾವಣೆ ಆಗಲಿದೆ ಎಂಬ ಸಚಿವ ರಾಜಣ್ಣ ಹೇಳಿಕೆ ಬಗ್ಗೆ ಉತ್ತರಿಸಿದ ಅವರು, ರಾಜ್ಯ ಸರಕಾಠರ ಭ್ರಷ್ಟಾಚಾರದಲ್ಲಿ‌ ಮುಳುಗಿದೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದರು.

ಇಲ್ಲಿನ‌ ತಾಯಿ, ಮಕ್ಕ‌ಳ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಗುರುವಾರ ಮಧ್ಯಾಹ್ನ‌ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಕಂಡು ಆಕ್ರೋಶ ವ್ಯಕ್ತಪಡಿಸಿ, ಮೊದಲು ಸರಕಾರ ಈ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಿ ಎಂದು ವ್ಯಂಗ್ಯವಾಡಿದರು.

ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ತೆರಳಿ ಅಲ್ಲಿನ ವ್ಯವಸ್ಥೆ ಮತ್ತು ಸಮಸ್ಯೆ ಕುರಿತು ಸಿಬ್ಬಂದಿಯಿಂದ ಮಾಹಿತಿ ಪಡೆದರು. ನಂತರ ರೋಗಿಗಳನ್ನು ಭೇಟಿ ಮಾಡಿ ಚಿಕಿತ್ಸೆ ಮತ್ತು ಸೌಲಭ್ಯಗಳ ಮಾಹಿತಿ ಪಡೆದ ಅವರು, ಆಸ್ಪತ್ರೆಯನ್ನು ನಿಭಾಯಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ದೂರಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News