×
Ad

Yadgiri | ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ಪರಶುರಾಮ ಚೌವಾಣ್ ನೇಮಕ

Update: 2026-06-29 19:44 IST

ಯಾದಗಿರಿ : ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷರಾಗಿ ಪಕ್ಷದ ಹಿರಿಯ ಮುಖಂಡ ಪರಶುರಾಮ ಚೌವಾಣ್ ಚಾಮನಳ್ಲಿ ತಾಂಡಾ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಮರೆಪ್ಪ ಬಿಳ್ಹಾರ ತಿಳಿಸಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯ ಕುಮಾರ ಸೊರಕೆ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಬಸರೆಡ್ಡಿ ಅನಪೂರ್ ಅವರ ಸೂಚನೆ ಮೇರೆಗೆ ಈ ನೇಮಕಾತಿ ಆದೇಶ ಹೊರಡಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೂತನವಾಗಿ ನೇಮಕಗೊಂಡಿರುವ ಪರಶುರಾಮ ಚೌವಾಣ್ ಅವರು ಕೂಡಲೇ ಜವಾಬ್ದಾರಿ ವಹಿಸಿಕೊಂಡು ಜಿಲ್ಲಾದ್ಯಂತ ಪಕ್ಷ ಸಂಘಟನೆ ಹಾಗೂ ಪ್ರಚಾರ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News