×
Ad

ಯಾದಗಿರಿ | ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ ಮದ್ಯದಂಗಡಿ ಮುಚ್ಚುವಂತೆ ನಿಷೇಧಾಜ್ಞೆ ಜಾರಿ : ಡಿಸಿ ಡಾ.ಸುಶೀಲಾ ಬಿ.

Update: 2025-07-02 19:20 IST

ಸಾಂದರ್ಭಿಕ ಚಿತ್ರ

ಯಾದಗಿರಿ: ಯಾದಗಿರಿ ಜಿಲ್ಲೆಯಾದ್ಯಂತ ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ 2025ರ ಜು.5ರ ಶನಿವಾರ ರಂದು ಬೆಳಿಗ್ಗೆ 8 ರಿಂದ 2025ರ ಜು.8ರ ಮಂಗಳವಾರ ಬೆಳಿಗ್ಗೆ 8 ಗಂಟೆಯ ವರೆಗೆ ಮದ್ಯಪಾನ ಹಾಗೂ ಮದ್ಯ ಮಾರಾಟ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶವನ್ನು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಹೊರಡಿಸಿದ್ದಾರೆ.

ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಮೊಹರಂ ಹಬ್ಬ ಆಚರಣೆಯ ಅಂಗವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯಾದ್ಯಂತ 2025ರ ಜುಲೈ 5ರ ಶನಿವಾರ ರಂದು ಬೆಳಿಗ್ಗೆ 8 ರಿಂದ 2025ರ ಜುಲೈ 8ರ ಮಂಗಳವಾರ ಬೆಳಿಗ್ಗೆ 8 ಗಂಟೆಯ ವರೆಗೆ ಎಲ್ಲಾ ವೈನ್‌ಶಾಪ್, ಬಾರ್‌ಗಳು ಸಗಟು ಮತ್ತು ಚಿಲ್ಲರೆ ಮಧ್ಯ ಮಾರಾಟ ನಿಷೇಧಿಸಿ ಆದೇಶಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News