ಯಾದಗಿರಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಾದ್ಯಾಪುರ ಗ್ರಾ.ಪಂ ಮುಂದೆ ಪ್ರತಿಭಟನೆ
ಸುರಪುರ: ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕು ಸಮಿತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲೂಕಿನ ಬಾದ್ಯಾಪುರ ಗ್ರಾಮ ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಲಾಗಿದೆ.
ಹೋರಾಟದ ನೆತೃತ್ವ ವಹಿಸಿ ಮಾತನಾಡಿದ ತಾಲೂಕು ಅಧ್ಯಕ್ಷ ಧರ್ಮಣ್ಣ ದೊರಿ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು, ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕು ಮತ್ತು ಜಾಬ್ ಕಾರ್ಡ್ ನೀಡಬೇಕು. ಎಲ್ಲಾ ಗ್ರಾಮಗಳಲ್ಲಿ ಸಿಸಿ ರಸ್ತೆ ಚರಂಡಿ ವ್ಯವಸ್ಥೆ ಕಲ್ಪಿಸಬೇಕು, ಕುಡಿಯುವ ನೀರಿನ ಬಾವಿಗಳಿಗೆ ಗಿರಾಕಿ ಅಳವಡಿಸಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಪ್ರಧಾನ ಕಾರ್ಯದರ್ಶಿ ರಾಮಯ್ಯ ಆಲ್ಹಾಳ ,ಸಹ ಕಾರ್ಯದರ್ಶಿ ಮಲ್ಲನಗೌಡ ಮಾ ಪಾಟೀಲ ಮಾತನಾಡಿದರು.
ಬೆಳಿಗ್ಗೆ ಯಿಂದ ಮಧ್ಯಾಹ್ನದ ವರೆಗೆ ಪ್ರತಿಭಟನೆ ನಡೆಸಲಾಯಿತು. ನಂತರ ತಾಲೂಕು ಪಂಚಾಯತ್ ಅಧಿಕಾರಿಗಳು ಬಂದು ಮನವಿ ಸ್ವೀಕರಿಸಿ ಬೇಡಿಕೆಗಳ ಈಡೇರಿಸುವ ಲಿಖಿತ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ದಾವಲ್ ಸಾಬ್ ನದಾಫ್ ಭಾಗವಹಿಸಿ ಮಾತನಾಡಿದರು. ಪ್ರಾಂತ ರೈತ ಸಂಘದ ಶಹಪುರ ತಾಲೂಕು ಅಧ್ಯಕ್ಷ ಭಿಮಣ್ಣ ಟಪ್ಪೆದಾರ್,ಪ್ರಕಾಶ್ ಆಲ್ಹಾಳ, ಭೀಮಣ್ಣ ದೊರಿ ಸೇರಿದಂತೆ ನೂರಾರು ಜನ ಕೂಲಿ ಕಾರ್ಮಿಕರು ಭಾಗವಹಿಸಿದ್ದರು.