×
Ad

ಯಾದಗಿರಿ | ಪರಿಶಿಷ್ಟ ಜಾತಿ ಸಮೀಕ್ಷಾ ಅವಧಿ ಜೂ.30 ರಂದು ಮುಕ್ತಾಯ : ಚನ್ನಬಸಪ್ಪ

Update: 2025-06-29 22:00 IST

ಯಾದಗಿರಿ: ಪರಿಶಿಷ್ಟ ಜಾತಿ ಸಮೀಕ್ಷೆ-2025ರ ಸಮೀಕ್ಷಾ ಅವಧಿ ಜೂನ್ 30 ರಂದು ಮುಕ್ತಾಯಗೊಳ್ಳುತ್ತಿದೆ ಎಂದು ಯಾದಗಿರಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಚನ್ನಬಸಪ್ಪ ಅವರು ತಿಳಿಸಿದ್ದಾರೆ.

ಡಾ.ಹೆಚ್.ಎನ್.ನಾಗಮೋಹನ ದಾಸ್ ಅವರ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಸಮೀಕ್ಷೆ ನಡೆಸುವ ಹಿನ್ನಲೆಯಲ್ಲಿ ರಾಜ್ಯಮಟ್ಟ, ಜಿಲ್ಲಾ ಮಟ್ಟ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಲಾಗಿದ್ದು, ಸಮೀಕ್ಷೆ ಕಾರ್ಯವನ್ನು ಶಿಕ್ಷಣ ಇಲಾಖೆಯ ಶಿಕ್ಷಕರನ್ನು ಗಣತೀದಾರನ್ನಾಗಿಸಿ ಮನೆ ಮನೆಗೆ ತೆರಳಿ ಮೊಬೈಲ್ ಆಪ್ ಮೂಲಕ ಸಮೀಕ್ಷೆಯನ್ನು ನಡೆಸಿ ಮಾಹಿತಿಯನ್ನು ನಮೂದಿಸಲಾಗುತ್ತಿದೆ. ಸದರಿವರೆಗೂ ರಾಜ್ಯಾದ್ಯಂತ ಸಮೀಕ್ಷೆಯಲ್ಲಿ ಶೇ.91 ರಷ್ಟು ಪ್ರಗತಿಯನ್ನು ಸಾಧಿಸಲಾಗಿದ್ದು, ಸಮೀಕ್ಷೆಯಲ್ಲಿ ಭಾಗವಹಿಸದೇ ಇರುವ ಪರಿಶಿಷ್ಟ ಜಾತಿ ಕುಟುಂಬದವರಿಗೆ ಅಂತಿಮ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸಮೀಕ್ಷಾ ಅವಧಿ ವಿಸ್ತರಿಸಿದೆ.

ಈ ಸಮೀಕ್ಷೆಯಲ್ಲಿ ನೋದಣಿಯಾಗದೇ ಇರುವ ಪರಿಶಿಷ್ಟ ಜಾತಿ ಜಾತಿಗಳ ಒಳ ಮೀಸಲಾತಿಯಲ್ಲಿ ಆನ್‌ಲೈನ್ schedulecastesurvey.karnataka.gov.in/selfdeclaration ನಲ್ಲಿ ಲಿಂಕ್ ಮೂಲಕ ಸ್ವಯಂಘೋಷಣೆ 2025ರ ಜೂ.30ರ ಒಳಗೆ ಮಾಡಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News