×
Ad

ಯಾದಗಿರಿ | ಮೇ 25ರವರೆಗೆ ಪರಿಶಿಷ್ಟ ಜಾತಿ ಸಮೀಕ್ಷೆಯ ಅವಧಿ ವಿಸ್ತರಣೆ : ಚನ್ನಬಸಪ್ಪ

Update: 2025-05-17 23:01 IST

ಯಾದಗಿರಿ: ಪರಿಶಿಷ್ಟ ಜಾತಿ ಸಮೀಕ್ಷೆ 2025ರ ಸಮೀಕ್ಷೆಯನ್ನು ಮೇ 25ರವರೆಗೆ ವಿಸ್ತರಿಸಲಾಗಿದೆ ಎಂದು ಯಾದಗಿರಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಚನ್ನಬಸಪ್ಪ ಅವರು ತಿಳಿಸಿದ್ದಾರೆ.

ಡಾ.ಹೆಚ್.ಎನ್, ನಾಗಮೋಹನ ದಾಸ್ ಅವರ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಸಮೀಕ್ಷೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯಮಟ್ಟ, ಜಿಲ್ಲಾ ಮಟ್ಟ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಲಾಗಿದ್ದು, 2025ರ ಮೇ 5 ರಿಂದ ಸಮೀಕ್ಷೆ ಕಾರ್ಯಕ್ರಮವನ್ನು ಆರಂಭಿಸಿ 2025ರ ಮೇ 17 ರವರೆಗೆ ಪೂರ್ಣಗೊಳಿಸಬೇಕಾಗಿರುತ್ತದೆ. ಸಮೀಕ್ಷೆ ಕಾರ್ಯವನ್ನು ಶಿಕ್ಷಣ ಇಲಾಖೆಯ ಶಿಕ್ಷಕರನ್ನು ಗಣತೀದಾರನ್ನಾಗಿಸಿ ಮನೆ ಮನೆಗೆ ತೆರಳಿ ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆಯನ್ನು ನಡೆಸಿ ಮಾಹಿತಿಯನ್ನು ನಮೂದಿಸಲಾಗುತ್ತಿದೆ. ಮಾನ್ಯ ಶಾಸಕರುಗಳು, ಹಲವು ಸಂಘ ಸಂಸ್ಥೆಗಳು ಸಮೀಕ್ಷೆ ವೇಳೆ ಉದ್ಭವಿಸಿರುವ ಕೆಲವೊಂದು ಸಮಸ್ಯೆಗಳನ್ನು ಸರಿಪಡಿಸಲು ಸಮೀಕ್ಷಾ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿರುವ ಹಿನ್ನೆಲೆಯಲ್ಲಿ ಸಮೀಕ್ಷೆ ಅವಧಿಯನ್ನು ವಿಸ್ತರಿಸಲಾಗಿದೆ.

ವಿಶೇಷ ಶಿಬಿರ (ಸಮೀಕ್ಷೆ ಬ್ಲಾಕ್ ವ್ಯಾಪ್ತಿಯಲ್ಲಿ) 3 ದಿನಗಳ ಕಾಲ 2025ರ ಮೇ 26 ರಿಂದ 28ರ ವರೆಗೆ ಮರು ನಿಗದಿಪಡಿಸಲಾಗಿದೆ. ಆನ್‌ಲೈನ್ ಮೂಲಕ ಸ್ವಯಂ ಘೋಷಣೆಯನ್ನು 2025ರ ಮೇ 19 ರಿಂದ 28ರ ವರೆಗೆ ನಿಗದಿಪಡಿಸಲಾಗಿದೆ. 2025ರ ಮೇ 26 ರಿಂದ 28ರ ವರೆಗೆ ವಿಶೇಷ ಶಿಬಿರದಲ್ಲಿ ನಡೆಸಬೇಕಾದ ಸಮೀಕ್ಷೆಯಲ್ಲಿ ಗಣತಿದಾರರು ಘೋಷಿತ ಮತಗಟ್ಟೆಗಳಲ್ಲಿ ಖುದ್ದಾಗಿ ಉಪಸ್ಥಿತಿಯಲ್ಲಿ ಮನೆ ಮನೆ ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಶಿಬಿರಕ್ಕೆ ಆಗಮಿಸಿದಾಗ ಸುಸೂತ್ರವಾಗಿ ಸಮೀಕ್ಷೆ ನಡೆಸಲು ಕ್ರಮವಹಿಸಲಾವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News