×
Ad

ಯಾದಗಿರಿ : ʼವಿಕಸಿತ ಭಾರತದ ಅಮೃತ ಕಾಲʼ ಹೆಸರಲ್ಲಿ ಹಲವಾರು ಕಾರ್ಯಕ್ರಮಗಳ ಆಯೋಜನೆ

Update: 2025-06-11 17:52 IST

ಯಾದಗಿರಿ: ಕಳೆದ 11ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಹಲವು ದಶಕಗಳ ಜಡತ್ವ ಮುರಿದು ದಿಟ್ಟ ನಿರ್ಧಾರಗಳ ಮೂಲಕ ವಿಕಸಿತ ಭಾರತಕ್ಕೆ ಭದ್ರ ಬುನಾದಿ ಹಾಕಿದ ಹಿನ್ನಲೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬರಿಗೂ ಕೇಂದ್ರ ಸರ್ಕಾರದ ಸಾಧನೆ, ಅಭಿವೃದ್ಧಿ ಕೆಲಸಗಳ ಬಗ್ಗೆ ತಿಳಿಹೇಳಲು ಜೂ.23 ರವರೆಗೆ ವಿವಿಧ ಕಾರ್ಯಕ್ರಮಗಳು ಜಿಲ್ಲಾ, ತಾಲೂಕು, ಮಂಡಲ ಮತ್ತು ಬೂತ್‌ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಂಸದ ಉಮೇಶ ಜಾದವ್, ಮಾಜಿ ಎಂಎಲ್ ಸಿ ಅಮರನಾಥ ಪಾಟೀಲ್ ತಿಳಿಸಿದ್ದಾರೆ.

ಬುಧವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಕಸಿತ ಭಾರತದ ಅಮೃತ ಕಾಲ ಮತ್ತು ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣಕ್ಕೆ 11ವರ್ಷ ಎಂಬ ಘೋಷಣೆಯಡಿ ಕಳೆದ ಜೂ.9ರಿಂದಲೇ ಎಲ್ಲಡೆ ಕಾರ್ಯಕ್ರಮಗಳು ಆರಂಭಗೊಂಡಿವೆ. ಅದೇ ತೆರನಾಗಿ ಜಿಲ್ಲೆಯಲ್ಲಿ ಮಾಡಬೇಕಾದ ಕೆಲಸ, ಕಾರ್ಯಗಳ ಬಗ್ಗೆ ಇಂದು ಪಕ್ಷದ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರ ಸಮ್ಮುಖದಲ್ಲಿ ಪದಾಧಿಕಾರಿಗಳ, ಮುಖಂಡರ, ಪ್ರಮುಖರ ಜೊತೆ ಸಮಗ್ರ ಚರ್ಚೆ ನಡೆಸಿ ನಿಗದಿ ಪಡಿಸಿರುವ ದಿನಾಂಕಗಳಂದು ಕಾರ್ಯಕ್ರಮಗಳು ನಡೆಸುವ ಮೂಲಕ‌ ಕೇಂದ್ರ ಸರ್ಕಾರದ ಪ್ರತಿಯೊಂದು ಸಾಧನೆ ಮತ್ತು ಅಭಿವೃದ್ಧಿ ಕೆಲಸಗಳ ಬಗ್ಗೆ ಜನತೆಗೆ ತಿಳಿಸುವ ಯಶಸ್ಸಿಗೊಳಿಸಲಾಗುವುದೆಂದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 11 ವರ್ಷಗಳ ಸಮಗ್ರ ಸಾಧನೆ ಮತ್ತು ಅಭಿವೃದ್ಧಿ ಕೆಲಸಗಳ ಮಾಹಿತಿಯನ್ನು ಮಾಜಿ ಸಂಸದ ಉಮೇಶ್ ಜಾಧವ್ ಸುದ್ಧಿಗೋಷ್ಠಿಯಲ್ಲಿ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ಮಾಜಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ, ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ್, ಯುವ‌ ಮುಖಂಡ ಮಹೇಶರಡ್ಡಿ ಮುದ್ನಾಳ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗುರು ಕಾಮಾ, ಪರಶುರಾಂ ಕುರಕುಂದಾ, ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ದೇವೆಂದ್ರನಾಥ ನಾದ್, ಜಿಪಂ ಮಾಜಿ ಸದಸ್ಯ ದೇವರಾಜ್ ನಾಯಕ್, ಮಾಜಿ ರಾಜ್ಯ ಕಾರ್ಯದರ್ಶಿ ನಾಗರತ್ನ ಕುಪ್ಪಿ, ಜಿಲ್ಲಾ ಸಂಯೋಜಕ ರಾಜುಗೌಡ ಉಕ್ಕಿನಾಳ್, ಜಿಲ್ಲಾ ಬಿಜೆಪಿ ವಕ್ತಾರ ಹಣಮಂತ ಇಟಗಿ, ಜಿಲ್ಲಾ ಮಾಧ್ಯಮ ಸಂಚಾಲಕ ವಿರುಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಾ ಸೇರಿದಂತೆಯೇ ಇತರರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News