×
Ad

ಯಾದಗಿರಿ | ಶಾಸಕ ಚೆನ್ನಾರೆಡ್ಡಿ ಪಾಟೀಲ್ ಗೆ ಸಚಿವ ಸ್ಥಾನ ನೀಡುವಂತೆ ತೇಕರಾಳ ಮನವಿ

Update: 2025-08-07 20:09 IST

ಯಾದಗಿರಿ: ಯಾದಗಿರಿಯ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಯುವ ಮುಖಂಡ ಹಣಮಂತರಾಯಗೌಡ ಮಾಲಿ ಪಾಟೀಲ್ ತೇಕರಾಳ ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹುಟ್ಟಿನಿಂದಲೂ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಈಗಲೂ ಪ್ರಸ್ತುತ 75ನೇ ಇಳಿಯ ವಯಸ್ಸಿನಲ್ಲಿಯು ಕಾಂಗ್ರೆಸ್ ಪಕ್ಷದ ಏಳಿಗೆಗಾಗಿ ಹಗಲು ಇರುಳು ಎನ್ನದೆ ಶ್ರಮಿಸುತ್ತಿದ್ದಾರೆ. ಅವರು ಎಪಿಎಂಸಿಯ ನಿರ್ದೇಶಕರಾಗಿ ಜಿಲ್ಲಾ ಪಂಚಾಯತಿಯ ಸದಸ್ಯರಾಗಿ, ಯಾದಗಿರಿ ವಿಧಾನ ಪರಿಷತ್ತಿನ ಸದಸ್ಯರಾಗಿ, ಅತ್ಯುತ್ತಮವಾಗಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಅತ್ಯಂತ ಆಪ್ತ ಬಳಗದ ಪ್ರಮುಖರಾಗಿದ್ದು, ‌ಅವರು ಸರಳ ಸಜ್ಜನಿಕೆಯ ಅಭಿವೃದ್ಧಿಯ ಹರಿಕಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಮುಂದಿನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಯುವ ಮುಖಂಡ ‌ ಹಣಮಂತರಾಯಗೌಡ ಮಾಲಿ ಪಾಟೀಲ್ ತೇಕರಾಳ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಮನವಿ ಮಾಡಿಕೊಂಡಿದ್ದಾರೆ.

ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ರೈತರಿಗೆ ಮತ್ತು ಸಾರ್ವಜನಿಕರಿಗೆ ಜನ ನಾಯಕರಾಗುವ ಮೂಲಕ ಜಿಲ್ಲೆಗೆ ಮಾದರಿಯಾಗಿದ್ದಾರೆ. ಮುಂಬರುವ ದಿನಗಳಲ್ಲಿ ಅವರ ಸೇವೆಯನ್ನು ಹಾಗೂ ಅವರ ಹಿರಿತನವನ್ನು ಆದರಿಸಿ ಅವರಿಗೆ ಸಚಿವ ಸ್ಥಾನ ನೀಡುವಂತೆ ರಾಷ್ಟ್ರೀಯ ಅಧ್ಯಕ್ಷರಲ್ಲಿ ಹಾಗೂ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News