ಯಾದಗಿರಿ | ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಬೆಂಬಲಿಸಿ ವಿವಿಧ ಸಂಘಟನೆಗಳಿಂದ ತಿರಂಗಾ ಯಾತ್ರೆ
ಯಾದಗಿರಿ : ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಬೆಂಬಲಿಸಿ ಜಿಲ್ಲಾ ಬಿಜೆಪಿ ಸೇರಿದಂತೆ ನಗರದಲ್ಲಿ ವಿವಿಧ ಸಂಘಟನೆಗಳಿಂದ ಶನಿವಾರ ಸಂಜೆ ಮೈಲಾಪುರ ಬೇಸ್ ನಿಂದ ಗಾಂಧಿ ವೃತ್ತದ ವರೆಗೆ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು.
ಗಾಂಧಿ ವೃತದಲ್ಲಿ ಸಮಾವೇಶಗೊಂಡ ಯಾತ್ರೆಯಲ್ಲಿ ನಾಗರಿಕರು ಭಾರತ್ ಮಾತಾ ಕೀ ಜೈ, ಭಾರತೀಯ ಸೈನಿಕರಿಗೆ ಜಯವಾಗಲಿ ಎಂಬ ಘೋಷಣೆ ಕೂಗಿದರು.
ಭಾರತೀಯ ಮಾಜಿ ಯೋಧರ ಸಂಘದ ಜಿಲ್ಲಾಧ್ಯಕ್ಷ ಲಿಂಗನಗೌಡ ಮಾಲೀಪಾಟೀಲ್ ಮಾತನಾಡಿದರು. ದಾಸಬಾಳ ಮಠದ ವೀರೇಶ್ವರ ಸ್ವಾಮಿಗಳು ಯಾತ್ರೆಗೆ ಚಾಲನೆ ನೀಡಿದರು. 20ಕ್ಕೂ ಹೆಚ್ಚು ಮಾಜಿ ಯೋಧರು ಪಾಲ್ಗೊಂಡಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ,ಯುಡ ಅಧ್ಯಕ್ಷ ವಿನಾಯಕ ಮಾಲಿಪಾಟೀಲ, ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ, ನಾಗರತ್ನ ಕುಪ್ಪಿ, ಡಾ.ಶರಣಭೂಪಾಲರಡ್ಡಿ, ಚೇಂಬರ್ಸ್ ಆಫ್ ಕಾಮರ್ಸ್ ಜಿಲ್ಲಾಧ್ಯಕ್ಷ ದೀನೇಶ ದೋಕಾ, ಅಕ್ಕಿ ಗಿರಣಿ ಮಾಲಕ ಸಂಘದ ಜಿಲ್ಲಾಧ್ಯಕ್ಷ ಹನಮಾನ ದಾಸ ಮುಂಡಸು, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ ಎನ್ ಭೀಮನು ನಾಯಕ, ಬಂಗಾರ ವರ್ತಕರು ಅಧ್ಯಕ್ಷ ವಿಜಯ್ ಬಟಡ, ವಿಶ್ವ ಹಿಂದೂ ಪರಿಷತ್, ಭಜರಂಗ ದಳದ ಶಿವು ಸಂಕೂಲರ, ಭಾರತೀಯ ವೈದ್ಯ ಸಂಘದ ಜಿಲ್ಲಾಧ್ಯಕ್ಷ ಡಾ. ಪದಾಧಿಕಾರಿಗಳು, ಯಿಮ್ಸ ವೈದ್ಯಕೀಯ ವಿದ್ಯಾರ್ಥಿಗಳು, ಲಿಂಗಪ್ಪ ಹತ್ತಿಮನಿ, ಮಾಜಿ ಯೋಧ ರಾಜಶೇಖರಬಾಪುರೆ, ತೀಪ್ಪಣ್ಣಗೌಡ,ಮಡಿವಾಳಪ್ಪ, ವಿಶ್ವರಾಜ ಬಿರಾದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.