ಯಾದಗಿರಿ | ಸಹಕಾರ ಆಡಳಿತ ಮಂಡಳಿ ಸದಸ್ಯರಿಗೆ ತರಬೇತಿ ಕಾರ್ಯಕ್ರಮ
ಸುರಪುರ: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿಯಮಿತ ಬೆಂಗಳೂರು ಹಾಗೂ ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ಯಾದಗಿರಿ ಸಹಕಾರ ಇಲಾಖೆ ಯಾದಗಿರಿ ಹಾಗೂ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘ ನಿ, ಸುರಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಆಡಳಿತ ಮಂಡಳಿ ಸದಸ್ಯರ ಕ್ಲಸ್ಟರ್ ಮಟ್ಟದ ತರಬೇತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ್ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಎಲ್ಲರಿಗೂ ಸಹಕಾರ ಜ್ಞಾನ ಮುಖ್ಯವಾಗಿದೆ. ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರೂ ಈ ಒಂದು ಕಾರ್ಯಕ್ರಮಕ್ಕೆ ಭಾಗಿಯಾಗಿ ಜಿಲ್ಲಾ ಸಹಕಾರ ಯೂನಿಯನ್ ಮುಖಾಂತರ ನೀಡುವಂತಹ ತರಬೇತಿಗೆ ಹಾಜರಾಗಿ ಇಲಾಖೆಯಿಂದ ಸಿಗುವ ಯೋಜನೆಗಳ ಕುರಿತು ಮಾಹಿತಿಯನ್ನು ಪಡೆದು ಕೊಂಡಾಗ ಮಾತ್ರ ಸಂಘದ ಏಳಿಗೆಗೆ ಹಾಗೂ ಸಂಘದ ಅಭಿವೃದ್ಧಿ ಸಾಧ್ಯ ಸುಸ್ತಿ ಸಾಲ ವಸೂಲಾತಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಎಲ್ಲರೂ ಶ್ರಮಿಸೋಣ ಹಾಗೂ ಯೂನಿಯನ್ ಮುಖಾಂತರ ತರಬೇತಿ ಪಡೆದುಕೊಳ್ಳೋಣ ಎಂದು ಮಾತನಾಡಿದರು.
ಸೇಡಂ ಗೋವಿಂದಪ್ಪ ನಿವೃತ್ತ ಉಪ ನಿರ್ದೇಶಕರು ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆ ಯಾದಗಿರಿ ಮಾತನಾಡಿದರು.
ಮುಖ್ಯ ಅತಿಥಿಗಳಾದ ವೀರೇಶ ನಿಷ್ಠಿ ದೇಶಮುಖ ಸಂಘದ ಉಪಾಧ್ಯಕ್ಷ ಭಾಗವಹಿಸಿದ್ದರು. ಯಾದಗಿರಿ ಜಿಲ್ಲಾ ಸಹಕಾರಿ ಒಕ್ಕೂಟದ ವೃತ್ತಿಪರ ನಿರ್ದೇಶಕ ಪ್ರಕಾಶ್ ಅಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಅಧ್ಯಕ್ಷ ಹೆಚ್.ಸಿ.ಪಾಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಸಹಕಾರಿ ಶಿಕ್ಷಕಿ ಸುಜಾತಾ ಮಠ್ ನಿರೂಪಿಸಿ ಸ್ವಾಗತಿಸಿದರು, ಸಂಘದ ಕಾರ್ಯದರ್ಶಿ ಅನ್ನಪೂರ್ಣ ಕಾರ್ಯಕ್ರಮವನ್ನು ವಂದಿಸಿದರು ಹಾಗೂ ಸಂಘದ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಹಿರಿಯ ಸಹಕಾರಿಗಳು ಸಂಘದ ಸಿಬ್ಬಂದಿಗಳು ಭಾಗವಹಿಸಿದ್ದರು.