×
Ad

ಯಾದಗಿರಿ | ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಸಾಂತ್ವನ ಹೇಳಿದ ಉಮೇಶ್ ಮುದ್ನಾಳ್

Update: 2025-04-22 20:02 IST

ಯಾದಗಿರಿ : ಕಳೆದ ವಾರ ಶಹಾಪೂರ ತಾಲೂಕಿನ ಮದ್ದರಕಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಮನೆಗೆ ಭೇಟಿ ನೀಡಿದ ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಮುದ್ನಾಳ್ ಸಾಂತ್ವನ ಹೇಳಿದರು.

ಮದ್ದರಕಿ ಬಳಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಗ್ರಾಮದ ಏಳು ಜನರು ಮೃತಪಟ್ಟಿದು ತೀವ್ರ ಬೇಸರದ ಸಂಗತಿ ಎಂದು ಬೇಸರ ಹೊರ ಹಾಕಿದರು.

ಈ ವೇಳೆ ಸರ್ಕಾರ ರಸ್ತೆ ಅಪಘಾತದಲ್ಲಿ ‌ಮೃತಪಟ್ಟ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಬೇಕು ಜೊತೆಗೆ ‌ಅವರ ಕುಟುಂಬದಲ್ಲಿ ವಿದ್ಯಾವಂತರಿಗೆ ಹೊರಗುತ್ತಿಗೆ ಆಧಾರದ ಮೇಲಾದರೂ ನೌಕರಿ ಕೊಡಬೇಕು. ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ಸರ್ಕಾರವೇ ಹೊರಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದರು.

ಈ ಸಂದರ್ಭದಲ್ಲಿ ಊರಿನ ಮುಖಂಡರು ಹಾಗೂ ಮೃತರ ಕುಟುಂಬದ ಸದಸ್ಯರು ಇದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News