ಯಾದಗಿರಿ | ಬೆಳೆ ಹಾನಿ ಪ್ರದೇಶಕ್ಕೆ ಉಮೇಶ್ ಮುದ್ನಾಳ್ ಭೇಟಿ : ಸೂಕ್ತ ಪರಿಹಾರಕ್ಕೆ ಆಗ್ರಹ
Update: 2025-05-02 16:32 IST
ಯಾದಗಿರಿ : ಕಳೆದ ಎರಡು ದಿನಗಳ ಹಿಂದೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಹಾನಿಗೀಡಾದ ಪ್ರದೇಶಕ್ಕೆ ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಮುದ್ನಾಳ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ತಾತಳಗೇರಾ ಸೇರಿ ಸುತ್ತಲಿನ ಹತ್ತಾರು ಗ್ರಾಮದಲ್ಲಿ ಅಕಾಲೊ ಮಳೆಗೆ ಭತ್ತ ನೆಲಕಚ್ಚಿ ಅಪಾರ ಪ್ರಮಾಣದ ಹಾನಿಯುಂಟಾಗಿದೆ.
ಅಧಿಕಾರಿಗಳು ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಭೇಟಿ ನೀಡದೆ ಕಾಲಹರಣ ಮಾಡುತ್ತಿದ್ದಾರೆ. ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ನೀಡುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ತಾತಳಗೇರಾ ಗ್ರಾಮದ ರೈತರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.