×
Ad

ಯಾದಗಿರಿ | ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ ಕೊಟ್ಟರು ಅಲೆಮಾರಿ ಜನರಿಗೆ ಸಿಗದ ಮುಕ್ತಿ : ಗ್ರಾಮಸ್ಥರಿಂದ ಆಕ್ರೋಶ

Update: 2025-05-10 18:49 IST

ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದ ಅಲೆಮಾರಿ ‌ಕಾಲೋನಿಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ‌ ನಾಮಕಾವಸ್ತೆಗೆ ಭೇಟಿ ಕೊಟ್ಟಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೂಕ್ತವಾದ ಚರಂಡಿ, ಸಿಸಿರಸ್ತೆ ಇಲ್ಲದೇ ಜನರು ಸಾಂಕ್ರಾಮಿಕ ‌ರೋಗದ ಭೀತಿಯಲ್ಲಿ ಬದುಕುತ್ತಿದ್ದಾರೆ. ಈ ಹಿಂದೆ ಮಳೆಗಾಲದ ಸಂದರ್ಭದಲ್ಲಿ ಯಾದಗಿರಿ ಭೇಟಿ ವೇಳೆ ನಾಗಲಕ್ಷ್ಮಿ ಚೌಧರಿ ಅಲೆಮಾರಿ ಕಾಲೋನಿಗೆ ಭೇಟಿ ನೀಡಿದ್ದರು. ಅಲೆಮಾರಿ ಕಾಲೋನಿಗೆ ಭೇಟಿ ವೇಳೆ ಮಹಿಳಾ ಆಯೋಗದ ಅಧ್ಯಕ್ಷೆ ಅಧಿಕಾರಿಗಳ ಮೇಲೆ ರೋಷಾವೇಶ ತೋರಿದ್ದು, ಇದು ನಾಮಕಾವಸ್ತೆಗೆ ಅನ್ನೋ ಅನುಮಾನ ವ್ಯಕ್ತಪಡಿಸಿದ್ದಾರೆ.

ಈಗಲೂ ಅಲೆಮಾರಿ ಜನಾಂಗದವರು ಕಾಲೋನಿ ಜನರ ಸಮಸ್ಯೆಗೆ ಮುಕ್ತಿ ನೀಡುವ ಕೆಲಸವಾಗಿಲ್ಲ. ಹೀಗಾಗಿ ಮತ್ತೊಮ್ಮೆ ನಮ್ಮ ಗ್ರಾಮಕ್ಕೆ ಬಂದರೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರಿಗೆ ಬಹಿಷ್ಕಾರ ಹಾಕುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಅಲೆಮಾರಿ ಜನಾಂಗದ ಕಾಲೋನಿಗೆ ಭೇಟಿ ನೀಡಿ ಮಾತನಾಡಿರುವ ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್, ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ. ಅಧಿಕಾರಿಗಳು ಮಾಡುವ ತಪ್ಪಿನಿಂದ ಜನಪ್ರತಿನಿಧಿಗಳಿಗೆ ಕೆಟ್ಟ ಹೆಸರು ಬರುತ್ತದೆ. ಮಹಿಳಾ ಆಯೋಗದ ಅಧ್ಯಕ್ಷೆ ಅವರ ಮಾತಿಗೆ ಗೌರವಕೊಟ್ಟಾದರೂ ಅಧಿಕಾರಿಗಳು ಕೆಲಸ ಮಾಡಬೇಕಿತ್ತು. ಆದರೆ ಇಲ್ಲಿಯವರೆಗೂ ಮೂಲಭೂತ ಸೌಕರ್ಯಗಳ ಕೊಡದೆ ಇರೋದು ತೀರಾ ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News