Yadgiri | ಅನವಾರದಲ್ಲಿ ಶಾಲಾ ಕೊಠಡಿ, ಕಂಪೌಂಡ್ ಕಾಮಗಾರಿಗೆ ಚಾಲನೆ; ಬಸ್ ನಿಲ್ದಾಣ ಉದ್ಘಾಟನೆ

Update: 2026-07-19 17:28 IST

ಯಾದಗಿರಿ: ಶಾಲಾ ಕೊಠಡಿ ಹಾಗೂ ಕಂಪೌಂಡ್ ನಿರ್ಮಾಣ ಕಾಮಗಾರಿಗಳನ್ನು ಗುಣಮಟ್ಟದಿಂದ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಉತ್ತಮ ಮೂಲಸೌಕರ್ಯ ಒದಗಿಸಬೇಕು ಎಂದು ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಅಧಿಕಾರಿಗಳಿಗೆ ಸೂಚಿಸಿದರು.

ವಡಗೇರಾ ತಾಲೂಕಿನ ಅನವಾರ ಗ್ರಾಮದಲ್ಲಿ ಕೆಕೆಆರ್‌ಡಿಬಿ ಅನುದಾನದಡಿ ನಿರ್ಮಿತಿ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಶಾಲಾ ಕೊಠಡಿ ಹಾಗೂ ಕಂಪೌಂಡ್ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ, ಗ್ರಾಮದಲ್ಲಿ ನಿರ್ಮಿಸಲಾದ ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಾಲೆಗೆ ಅಗತ್ಯವಿರುವ ಇತರೆ ಮೂಲಸೌಕರ್ಯಗಳನ್ನೂ ಹಂತ ಹಂತವಾಗಿ ಕಲ್ಪಿಸಲಾಗುವುದು. ಗ್ರಾಮದ ವಿವಿಧ ಸಮಸ್ಯೆಗಳಿಗೂ ಆದ್ಯತೆ ಮೇರೆಗೆ ಪರಿಹಾರ ಒದಗಿಸಲಾಗುವುದು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಮರೆಪ್ಪ ಬಿಳ್ಹಾರ, ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವಡಗೇರಾ ತಾಲೂಕು ಅಧ್ಯಕ್ಷ ಮೈನೋದ್ದಿನ್ ಮಿರ್ಚಿ, ನಿರ್ಮಿತಿ ಕೇಂದ್ರದ ಅಧಿಕಾರಿ ಮಂಜುನಾಥ, ಕಾಂಗ್ರೆಸ್ ಮುಖಂಡರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News