ಯಾದಗಿರಿ | ಆರೋಗ್ಯ ಇಲಾಖೆಯಿಂದ ವಿಶ್ವ ಡೆಂಗ್ಯೂ ದಿನಾಚರಣೆ
ಸುರಪುರ: ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಲ್ಲಿ ಡೆಂಗ್ಯೂ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ನಗರ ಸಭೆಯ ಪೌರಕಾರ್ಮಿಕರು ಮತ್ತು ಸಿಬ್ಬಂದಿಗಳು ಹಾಗೂ ನಗರ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದರು. ನಗರ ಪ್ರಾಥಮಿಕ ಆರೊಗ್ಯ ಕೇಂದ್ರ ದಿಂದ ಮಹಾತ್ಮ ಗಾಂಧಿ ವೃತ್ತದ ವರೆಗೆ ಜಾಥಾ ನಡೆಸಿ ಮಾನವ ಸರಪಳಿ ನಿರ್ಮಸಿ, ಸಾರ್ವಜನಿಕರಿಗೆ ಡೆಂಗ್ಯೂ ರೋಗದ ಬಗ್ಗೆ ಅರಿವು ಮೂಡಿಸುವ ಕರಪತ್ರಗಳನ್ನು ಹಂಚಲಾಯಿತು.
ತಾಲೂಕು ಆರೋಗ್ಯ ಅಧಿಕಾರಿಗಳ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಆರ್.ವಿ.ನಾಯಕ ಮಾತನಾಡಿ, ಡೆಂಗ್ಯೂ ರೋಗವು ಒಂದು ಸಾಂಕ್ರಮಿಕ ರೋಗವಾಗಿದ್ದು, ಇದು ಒಂದು ಮಾರಣಾಂತಿಕ ಖಾಯಿಲೆ. ಈ ರೋಗವು “ಈಡೀಸ್ ಈಜಿಪ್ಟೆ” ಎಂಬ ರೋಗ ವಾಹಕ ಸೊಳ್ಳೆ ಕಚ್ಚುವಿಕೆಯಿಂದ ಹರಡುತ್ತದೆ. ಈ ರೋಗದ ಪ್ರಾಥಮಿಕ ಲಕ್ಷಣಗಳಾದ ತೀವ್ರ ಜ್ವರ, ವಿಪರಿತ ತಲೆ ನೋವು ಕಣ್ಣುಗಳ ಹಿಂಬಾಗದಲ್ಲಿ ನೋವು ಮಾಂಸಖಂಡ ಕೀಲುಗಳಲ್ಲಿ ನೋವು ನಂತರ 3-5 ದಿನಗಳಲ್ಲಿ ಬಾಯಿ, ಮೂಗು, ವಸಡುಗಳ್ಲಿ ರಕ್ತ ಸ್ರಾವ ಉಂಟಾಗಿ ಸಾವು ಕೂಡ ಸಂಭವಿಸಬಹುದೆಂದು ತಿಳಿಸಿದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಲ್ಲಪ್ಪ ಗೋಗಿ ಮಾತನಾಡಿದರು. ತಾಲೂಕು ಹಿರಿಯ ಆರೋಗ್ಯ ಸಹಾಯಕರಾದ ಜಯರಾಮ ಪವಾರ, ರಾಜಶೇಖರ, ಹಾಗೂ ರಾಷ್ಟ್ರೀಯ ಆನೆಕಾಲು ರೋಗ ನಿಯಂತ್ರಣ ಘಟಕ ಸುರಪುರ ತಾಲೂಕಾ ಹಿರಿಯ ಆರೋಗ್ಯ ಸಹಾಯಕರಾದ ಸಂಗಪ್ಪ ಚೆಟ್ಟಿ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ರಾಷ್ಟ್ರೀಯ ಆನೆಕಾಲು ರೋಗ ನಿಯಂತ್ರಣ ಘಟಕದ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ನರಸಿಂಹ ನಾಯಕ ವಿ.ಬಿ.ಡಿ.ಮೇಲ್ವಿಚಾರಕರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.