×
Ad

Yadgiri | ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗುರಮಠಕಲ್ ಪಿಐ

Update: 2026-05-09 17:30 IST

ವೀರಣ್ಣ ದೊಡ್ಡಮನಿ

ಗುರಮಠಕಲ್ : ಪ್ರಕರಣವೊಂದನ್ನು ಇತ್ಯರ್ಥಪಡಿಸುವ ಹೆಸರಿನಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಗುರಮಠಕಲ್ ಪೊಲೀಸ್ ಠಾಣೆಯ ಪಿಐ ವೀರಣ್ಣ ದೊಡ್ಡಮನಿ ಶನಿವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಆನಂದ ಭಜಂತ್ರಿ ಎಂಬವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ರಕ್ಷಣೆ ಮಾಡುವುದಾಗಿ ಹೇಳಿ ಪಿಐ ವೀರಣ್ಣ ದೊಡ್ಡಮನಿ ಅವರು 2 ಲಕ್ಷ ರೂ. ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅದರಂತೆ ಗುರಮಠಕಲ್ ಪೊಲೀಸ್ ವಸತಿ ಗೃಹದಲ್ಲಿ ದೂರುದಾರರಿಂದ 1 ಲಕ್ಷ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್. ಇನಾಂದಾರ್ ಹಾಗೂ ಪಿಐ ಸಿದ್ದರಾಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News