Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ವಿದ್ಯಾರ್ಥಿನಿಲಯಗಳ ಭೋಜನ ವೆಚ್ಚದ ಅನುದಾನ...

ವಿದ್ಯಾರ್ಥಿನಿಲಯಗಳ ಭೋಜನ ವೆಚ್ಚದ ಅನುದಾನ ಸ್ಥಗಿತ: ಉನ್ನತ ಶಿಕ್ಷಣದಲ್ಲಿ ಸಾಮಾಜಿಕ ನ್ಯಾಯಕ್ಕೆ ಸವಾಲು!

ಡಾ. ಸಿದ್ದರಾಜು ವಿ.ಜಿ., ಮೈಸೂರುಡಾ. ಸಿದ್ದರಾಜು ವಿ.ಜಿ., ಮೈಸೂರು19 Nov 2026 12:21 PM IST
share
ವಿದ್ಯಾರ್ಥಿನಿಲಯಗಳ ಭೋಜನ ವೆಚ್ಚದ ಅನುದಾನ ಸ್ಥಗಿತ: ಉನ್ನತ ಶಿಕ್ಷಣದಲ್ಲಿ ಸಾಮಾಜಿಕ ನ್ಯಾಯಕ್ಕೆ ಸವಾಲು!

ಕರ್ನಾಟಕದಲ್ಲಿ ಉನ್ನತ ಶಿಕ್ಷಣದ ಅವಕಾಶಗಳನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಸರಕಾರದ ಸಾರ್ವಜನಿಕ ವಿಶ್ವವಿದ್ಯಾನಿಲಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳು ಕೇವಲ ವಸತಿ ಸೌಲಭ್ಯಗಳಲ್ಲ; ಅವು ಸಾಮಾಜಿಕ ಪರಿವರ್ತನೆ, ಶೈಕ್ಷಣಿಕ ಸಮಾನತೆ ಮತ್ತು ಆರ್ಥಿಕ ಸಬಲೀಕರಣದ ಪ್ರಮುಖ ಕೇಂದ್ರಗಳಾಗಿವೆ. ಆದರೆ, ಇಂತಹ ವಿದ್ಯಾರ್ಥಿನಿಲಯಗಳ ಅಸ್ತಿತ್ವ ಮತ್ತು ನಿರ್ವಹಣೆಯೇ ಇಂದು ಗಂಭೀರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

2024-25ನೇ ಸಾಲಿನಿಂದ ರಾಜ್ಯದ ವಿವಿಧ ಸರಕಾರಿ ಸಾರ್ವಜನಿಕ ವಿಶ್ವವಿದ್ಯಾನಿಲಯಗಳಿಗೆ ವಿದ್ಯಾರ್ಥಿನಿಲಯಗಳ ನಿರ್ವಹಣೆಗಾಗಿ ಈ ಹಿಂದೆ ಸರಕಾರದಿಂದ ಬಿಡುಗಡೆ ಮಾಡಲಾಗುತ್ತಿದ್ದ ಹೆಚ್ಚುವರಿ ಭೋಜನ ವೆಚ್ಚದ ಅನುದಾನ ಸ್ಥಗಿತಗೊಂಡಿದೆ. ಈ ಹಿಂದೆ ನಿರ್ದಿಷ್ಟ ಬಜೆಟ್ ಶೀರ್ಷಿಕೆಯಡಿ ಬಿಡುಗಡೆ ಮಾಡಲಾಗುತ್ತಿದ್ದ ಅನುದಾನಕ್ಕೆ 2024-25ರ ಬಜೆಟ್‌ನಲ್ಲಿ ಸೂಕ್ತ ಅನುದಾನ ಶೀರ್ಷಿಕೆ ಇಲ್ಲದಿರುವುದರಿಂದ ಅನುದಾನ ಬಿಡುಗಡೆ ಪ್ರಕ್ರಿಯೆ ಸ್ಥಗಿತಗೊಂಡಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸುತ್ತಾ, ಈ ಸಂಬಂಧ ಸರಕಾರಕ್ಕೆ ಮನವಿ ಸಲ್ಲಿಸಿ ಅನುದಾನ ಬಿಡುಗಡೆಗೆ ಕ್ರಮವಹಿಸುವಂತೆ ವಿಶ್ವವಿದ್ಯಾನಿಲಯಗಳಿಗೆ ಪತ್ರ ಬರೆದಿರುತ್ತಾರೆ. ಈ ಕುರಿತು ಸರಕಾರದ ಸಾರ್ವಜನಿಕ ವಿಶ್ವವಿದ್ಯಾನಿಲಯಗಳು ಸಮಾಜ ಕಲ್ಯಾಣ ಇಲಾಖೆಗೆ ಅನೇಕ ಬಾರಿ ಪತ್ರ ಬರೆಯಲಾಗಿದ್ದು ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿದುಬಂದಿದೆ. ಇದರಿಂದ ವಿಶ್ವವಿದ್ಯಾನಿಲಯಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳು ತೀವ್ರ ಆರ್ಥಿಕ ಒತ್ತಡಕ್ಕೆ ಸಿಲುಕಿವೆ. ಇದು ಕೇವಲ ಹಣಕಾಸಿನ ಕೊರತೆಯ ಸಮಸ್ಯೆಯಲ್ಲ; ವಿದ್ಯಾರ್ಥಿಗಳ ಮೂಲಭೂತ ಅಗತ್ಯಗಳನ್ನು ಪೂರೈಸುವಲ್ಲಿ ಸರಕಾರದ ಕಲ್ಯಾಣ ನೀತಿಗಳ ನಿರಂತರತೆಯ ಕುರಿತಾದ ಗಂಭೀರ ಪ್ರಶ್ನೆಯೂ ಆಗಿದೆ.

ಸಾಮಾನ್ಯವಾಗಿ ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿನಿಲಯಗಳಲ್ಲಿ ಅಧ್ಯಯನ ಮಾಡುವ ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳು, ಆರ್ಥಿಕವಾಗಿ ದುರ್ಬಲ ಕುಟುಂಬಗಳು ಹಾಗೂ ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಂದ ಬಂದವರಾಗಿರುತ್ತಾರೆ. ಇವರಲ್ಲಿ ಅನೇಕ ವಿದ್ಯಾರ್ಥಿಗಳು ತಮ್ಮ ಕುಟುಂಬದ ಸೀಮಿತ ಆದಾಯದ ನಡುವೆಯೂ ಉನ್ನತ ಶಿಕ್ಷಣ ಪಡೆಯುವ ಕನಸಿನೊಂದಿಗೆ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಪಡೆಯುತ್ತಾರೆ. ವಿದ್ಯಾರ್ಥಿನಿಲಯಗಳಲ್ಲಿ ದೊರೆಯುವ ವಸತಿ ಮತ್ತು ಭೋಜನ ಸೌಲಭ್ಯಗಳು ಅವರ ಶಿಕ್ಷಣ ಮುಂದುವರಿಸಲು ಪ್ರಮುಖ ಆಧಾರವಾಗಿವೆ. ಇಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯದ ಸೌಲಭ್ಯಗಳು ಕೇವಲ ಅನುಕೂಲಗಳಲ್ಲ; ಉನ್ನತ ಶಿಕ್ಷಣವನ್ನು ಪಡೆಯಲು ಅಗತ್ಯವಾದ ಆರ್ಥಿಕ ಮತ್ತು ಸಾಮಾಜಿಕ ಬೆಂಬಲ ವ್ಯವಸ್ಥೆಯಾಗಿವೆ.

ವಿದ್ಯಾರ್ಥಿನಿಲಯಗಳ ನಿರ್ವಹಣೆಯಲ್ಲಿ ಆಹಾರ ಪದಾರ್ಥಗಳ ಖರೀದಿ, ಅಡುಗೆ ಸಿಬ್ಬಂದಿಯ ವೆಚ್ಚ, ಅಡುಗೆ ಅನಿಲ, ವಿದ್ಯುತ್, ನೀರು ಹಾಗೂ ಇತರ ಮೂಲಭೂತ ಸೌಲಭ್ಯಗಳಿಗೆ ನಿರಂತರವಾಗಿ ಹಣದ ಅವಶ್ಯಕತೆ ಇರುತ್ತದೆ. ಈ ವೆಚ್ಚಗಳು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿವೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಆಹಾರ ಪದಾರ್ಥಗಳ ಮಾರುಕಟ್ಟೆ ದರಗಳ ಹೆಚ್ಚಳ ಮತ್ತು ವಿದ್ಯಾರ್ಥಿಗಳ ಸಂಖ್ಯೆಯಲ್ಲಿನ ಏರಿಕೆಯಿಂದಾಗಿ ವಿದ್ಯಾರ್ಥಿನಿಲಯಗಳ ನಿರ್ವಹಣಾ ವೆಚ್ಚವೂ ಗಣನೀಯವಾಗಿ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಹೆಚ್ಚುವರಿ ಭೋಜನ ವೆಚ್ಚದ ಅನುದಾನ ಸ್ಥಗಿತಗೊಳಿಸಿರುವುದು ವಿಶ್ವವಿದ್ಯಾನಿಲಯಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಉಂಟುಮಾಡಿದೆ. ಈಗಾಗಲೇ ಅನೇಕ ಆಡಳಿತಾತ್ಮಕ ಮತ್ತು ಶೈಕ್ಷಣಿಕ ವೆಚ್ಚಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ವಿಶ್ವವಿದ್ಯಾನಿಲಯಗಳಿಗೆ ತಮ್ಮ ಸೀಮಿತ ಆಂತರಿಕ ಸಂಪನ್ಮೂಲಗಳಿಂದಲೇ ವಿದ್ಯಾರ್ಥಿನಿಲಯಗಳ ಹೆಚ್ಚುವರಿ ಭೋಜನ ವೆಚ್ಚವನ್ನು ಭರಿಸುವುದು ಸುಲಭದ ಕೆಲಸವಲ್ಲ. ಪರಿಣಾಮವಾಗಿ, ವಿದ್ಯಾರ್ಥಿನಿಲಯಗಳ ದೈನಂದಿನ ನಿರ್ವಹಣೆಗೆ ಅಗತ್ಯವಾದ ಹಣಕಾಸಿನ ವ್ಯವಸ್ಥೆ ಮಾಡುವಲ್ಲಿ ವಿಶ್ವವಿದ್ಯಾನಿಲಯಗಳ ಆಡಳಿತ ಮಂಡಳಿಗಳು ಸಂಕಷ್ಟ ಎದುರಿಸುವಂತಾಗಿದೆ.

ಈ ಸಮಸ್ಯೆಯನ್ನು ಸಾಮಾಜಿಕ ನ್ಯಾಯದ ದೃಷ್ಟಿಕೋನದಿಂದ ವಿಶ್ಲೇಷಿಸುವುದು ಅತ್ಯಂತ ಅಗತ್ಯ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಕಾಶಗಳನ್ನು ಕಲ್ಪಿಸುವುದು ಕೇವಲ ಕಲ್ಯಾಣ ಕಾರ್ಯಕ್ರಮವಲ್ಲ; ಅದು ಸಂವಿಧಾನಾತ್ಮಕ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆಶಯಗಳನ್ನು ಸಾಕಾರಗೊಳಿಸುವ ಜವಾಬ್ದಾರಿಯಾಗಿದೆ. ಶತಮಾನಗಳಿಂದ ಶಿಕ್ಷಣದ ಅವಕಾಶಗಳಿಂದ ವಂಚಿತರಾದ ಸಮುದಾಯಗಳಿಗೆ ಉನ್ನತ ಶಿಕ್ಷಣದ ಬಾಗಿಲು ತೆರೆಯುವಲ್ಲಿ ಸರಕಾರ ಸಾರ್ವಜನಿಕ ವಿಶ್ವವಿದ್ಯಾನಿಲಯಗಳು ಮತ್ತು ಅವುಗಳ ವಿದ್ಯಾರ್ಥಿನಿಲಯಗಳು ಮಹತ್ವದ ಪಾತ್ರ ವಹಿಸಿವೆ. ವಿದ್ಯಾರ್ಥಿನಿಲಯಗಳಲ್ಲಿ ಉಚಿತ ಅಥವಾ ಸಹಾಯಧನದ ಆಧಾರದ ಮೇಲೆ ದೊರೆಯುವ ವಸತಿ ಮತ್ತು ಆಹಾರ ಸೌಲಭ್ಯಗಳಿಂದಾಗಿ ಅನೇಕ ಬಡ ವಿದ್ಯಾರ್ಥಿಗಳು ತಮ್ಮ ಊರುಗಳಿಂದ ದೂರವಿದ್ದು ಪದವಿ, ಸ್ನಾತಕೋತ್ತರ ಪದವಿ ಮತ್ತು ಸಂಶೋಧನಾ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗಿದೆ. ಹೀಗಾಗಿ, ಈ ಸೌಲಭ್ಯಗಳ ನಿರಂತರತೆಯನ್ನು ಖಚಿತಪಡಿಸುವುದು ಸಾಮಾಜಿಕ ಸಮಾನತೆಯನ್ನು ಬಲಪಡಿಸುವ ಪ್ರಮುಖ ಕ್ರಮವಾಗಿದೆ.

ಆದರೆ, ಭೋಜನ ವೆಚ್ಚದ ಅನುದಾನ ನಿರಂತರವಾಗಿ ಬಿಡುಗಡೆಯಾಗದಿದ್ದರೆ ವಿದ್ಯಾರ್ಥಿನಿಲಯಗಳ ಆಹಾರ ವ್ಯವಸ್ಥೆಯ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಯಿದೆ. ಆಹಾರದ ಗುಣಮಟ್ಟ ಮತ್ತು ಪ್ರಮಾಣದಲ್ಲಿ ಕಡಿತ, ಊಟದ ವ್ಯವಸ್ಥೆಯಲ್ಲಿ ವ್ಯತ್ಯಯ ಹಾಗೂ ವಿದ್ಯಾರ್ಥಿಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಆತಂಕವಿದೆ. ವಿಶೇಷವಾಗಿ ಕುಟುಂಬದ ಆರ್ಥಿಕ ಪರಿಸ್ಥಿತಿ ದುರ್ಬಲವಾಗಿರುವ ವಿದ್ಯಾರ್ಥಿಗಳು ಹೊರಗಡೆ ಊಟದ ವ್ಯವಸ್ಥೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದರಿಂದ ಅವರ ಆರೋಗ್ಯ, ಪೌಷ್ಟಿಕತೆ, ತರಗತಿಗಳ ಹಾಜರಾತಿ ಮತ್ತು ಶೈಕ್ಷಣಿಕ ಸಾಧನೆಯ ಮೇಲೂ ಪ್ರತಿಕೂಲ ಪರಿಣಾಮ ಉಂಟಾಗಬಹುದು. ಆಹಾರ ಮತ್ತು ವಸತಿಯಂತಹ ಮೂಲಭೂತ ಅಗತ್ಯಗಳೇ ಅನಿಶ್ಚಿತವಾಗಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಗಮನವನ್ನು ಅಧ್ಯಯನದ ಕಡೆಗೆ ಕೇಂದ್ರೀಕರಿಸುವುದು ಕಷ್ಟವಾಗುತ್ತದೆ. ಇಂತಹ ಪರಿಸ್ಥಿತಿ ದೀರ್ಘಕಾಲ ಮುಂದುವರಿದರೆ ಕೆಲವರು ಅನಿವಾರ್ಯವಾಗಿ ಶಿಕ್ಷಣವನ್ನು ಅರ್ಧದಲ್ಲಿಯೇ ಮೊಟಕುಗೊಳಿಸುವ ಅಪಾಯವೂ ಎದುರಾಗಬಹುದು.

ಇದರ ಜೊತೆಗೆ, ವಿದ್ಯಾರ್ಥಿನಿಲಯಗಳ ನಿರ್ವಹಣೆಯ ಆರ್ಥಿಕ ಸಂಕಷ್ಟ ಮುಂದುವರಿದರೆ ಕೆಲವು ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿನಿಲಯಗಳನ್ನು ಮುಂದುವರಿಸುವುದೇ ಕಷ್ಟವಾಗಬಹುದು. ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆಯನ್ನು ಕಡಿಮೆ ಮಾಡುವುದು ಅಥವಾ ವಿದ್ಯಾರ್ಥಿನಿಲಯಗಳ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸುವಂತಹ ಅನಿವಾರ್ಯ ನಿರ್ಧಾರಗಳನ್ನು ಕೈಗೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುವ ಆತಂಕವಿದೆ. ವಿಶೇಷವಾಗಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಲಯಗಳು ಇಂತಹ ಸಂಕಷ್ಟಕ್ಕೆ ಸಿಲುಕಿದರೆ ಅದರ ನೇರ ಪರಿಣಾಮ ಸಾಮಾಜಿಕವಾಗಿ ದುರ್ಬಲ ವರ್ಗಗಳ ವಿದ್ಯಾರ್ಥಿಗಳ ಮೇಲೆ ಬೀಳಲಿದೆ. ವಿದ್ಯಾರ್ಥಿನಿಲಯಗಳನ್ನು ಮುಚ್ಚುವುದು ಕೇವಲ ಆಡಳಿತಾತ್ಮಕ ನಿರ್ಧಾರವಾಗಿರುವುದಿಲ್ಲ; ಅದು ಉನ್ನತ ಶಿಕ್ಷಣದ ಅವಕಾಶಗಳನ್ನು ಸೀಮಿತಗೊಳಿಸುವುದರ ಜೊತೆಗೆ ಸಾಮಾಜಿಕ ಚಲನಶೀಲತೆಯನ್ನು ಕುಂಠಿತಗೊಳಿಸಿ, ತಲೆಮಾರುಗಳಿಂದ ಮುಂದುವರಿಯುತ್ತಿರುವ ಆರ್ಥಿಕ ಮತ್ತು ಶೈಕ್ಷಣಿಕ ಅಸಮಾನತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ.

ಇಲ್ಲಿ ಸರಕಾರದ ನೀತಿಗಳಲ್ಲಿನ ಒಂದು ಗಂಭೀರ ವಿರೋಧಾಭಾಸವೂ ಎದ್ದು ಕಾಣುತ್ತದೆ. ಒಂದು ಕಡೆ ಶಿಕ್ಷಣದ ಸಾರ್ವತ್ರೀಕರಣ, ಸಾಮಾಜಿಕ ಒಳಗೊಳ್ಳುವಿಕೆ, ಉನ್ನತ ಶಿಕ್ಷಣದಲ್ಲಿ ಸಮಾನ ಅವಕಾಶಗಳು ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಬಲೀಕರಣದ ಕುರಿತು ಅನೇಕ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಮತ್ತೊಂದೆಡೆ, ಈ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯವಾದ ಮೂಲಭೂತ ಸೌಲಭ್ಯಗಳ ನಿರ್ವಹಣೆಗೆ ಬೇಕಾದ ಅನುದಾನ ಸ್ಥಗಿತಗೊಳ್ಳುತ್ತಿರುವುದು ಸರಕಾರದ ಘೋಷಿತ ಆಶಯಗಳಿಗೆ ವಿರುದ್ಧವಾಗಿದೆ. ಶಿಕ್ಷಣಕ್ಕೆ ಪ್ರವೇಶ ಕಲ್ಪಿಸುವುದಷ್ಟೇ ಸಾಮಾಜಿಕ ನ್ಯಾಯದ ಗುರಿಯಾಗಬಾರದು; ವಿದ್ಯಾರ್ಥಿಗಳು ಯಾವುದೇ ಆರ್ಥಿಕ ಅಡೆತಡೆಯಿಲ್ಲದೆ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವುದೂ ಸರಕಾರದ ಆದ್ಯತೆಯಾಗಬೇಕು. ಇಲ್ಲದಿದ್ದರೆ, ಉನ್ನತ ಶಿಕ್ಷಣದಲ್ಲಿ ಸಮಾನ ಅವಕಾಶಗಳನ್ನು ಕಲ್ಪಿಸುವ ಪ್ರಯತ್ನಗಳು ನಿರೀಕ್ಷಿತ ಫಲಿತಾಂಶ ನೀಡಲು ಸಾಧ್ಯವಾಗುವುದಿಲ್ಲ.

ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ. ಮೊದಲನೆಯದಾಗಿ, 2024-25ನೇ ಸಾಲಿನಿಂದ ಸ್ಥಗಿತಗೊಂಡಿರುವ ಹೆಚ್ಚುವರಿ ಭೋಜನ ವೆಚ್ಚದ ಅನುದಾನವನ್ನು ಪುನಃ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹಿಂದಿನ ಬಜೆಟ್ ಶೀರ್ಷಿಕೆಯನ್ನು ಮುಂದುವರಿಸಲು ಸಾಧ್ಯವಾಗದಿದ್ದರೆ, ಅದಕ್ಕೆ ಪರ್ಯಾಯವಾಗಿ ಹೊಸ ಬಜೆಟ್ ಶೀರ್ಷಿಕೆಯನ್ನು ಸೃಷ್ಟಿಸಿ ಅನುದಾನ ಒದಗಿಸಬೇಕು. ಎರಡನೆಯದಾಗಿ, ರಾಜ್ಯದ ಎಲ್ಲ ಸರಕಾರಿ ಸಾರ್ವಜನಿಕ ವಿಶ್ವವಿದ್ಯಾನಿಲಯಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ಸಂಖ್ಯೆ, ವಿದ್ಯಾರ್ಥಿಗಳ ಪ್ರವೇಶ ಪ್ರಮಾಣ ಮತ್ತು ವಾರ್ಷಿಕ ಭೋಜನ ವೆಚ್ಚವನ್ನು ಆಧರಿಸಿ ವಾಸ್ತವಿಕ ಅನುದಾನದ ಅಗತ್ಯವನ್ನು ನಿರ್ಧರಿಸಬೇಕು. ಆಹಾರ ಪದಾರ್ಥಗಳ ಬೆಲೆ ಏರಿಕೆಯನ್ನು ಪರಿಗಣಿಸಿ ವಿದ್ಯಾರ್ಥಿಗಳಿಗೆ ನೀಡುವ ಭೋಜನ ವೆಚ್ಚದ ಮೊತ್ತವನ್ನು ಕಾಲಕಾಲಕ್ಕೆ ಪರಿಷ್ಕರಿಸಬೇಕು.

ಅಷ್ಟೇ ಅಲ್ಲದೆ, ಅನುದಾನ ಬಿಡುಗಡೆಗೆ ವಿಳಂಬವಾಗದಂತೆ ಪ್ರತೀ ಆರ್ಥಿಕ ವರ್ಷದ ಆರಂಭದಲ್ಲಿಯೇ ಅಗತ್ಯ ಹಣಕಾಸನ್ನು ಮಂಜೂರು ಮಾಡುವ ವ್ಯವಸ್ಥೆ ರೂಪಿಸಬೇಕು. ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿನಿಲಯಗಳ ನಿರ್ವಹಣೆಗೆ ಪ್ರತ್ಯೇಕ ಮತ್ತು ನಿರಂತರ ಅನುದಾನ ವ್ಯವಸ್ಥೆಯನ್ನು ಜಾರಿಗೊಳಿಸುವುದು ಅತ್ಯಗತ್ಯ. ಇದರಿಂದ ವಿಶ್ವವಿದ್ಯಾನಿಲಯಗಳು ತಮ್ಮ ಆಂತರಿಕ ಸಂಪನ್ಮೂಲಗಳ ಮೇಲೆ ಅನಗತ್ಯ ಒತ್ತಡವಿಲ್ಲದೆ ವಿದ್ಯಾರ್ಥಿನಿಲಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಜೊತೆಗೆ, ಈವರೆಗೆ ಬಾಕಿ ಉಳಿದಿರುವ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ವಿಶ್ವವಿದ್ಯಾನಿಲಯಗಳು ಎದುರಿಸುತ್ತಿರುವ ತಕ್ಷಣದ ಆರ್ಥಿಕ ಸಂಕಷ್ಟವನ್ನು ನಿವಾರಿಸಬೇಕು. ಸರಕಾರ, ಉನ್ನತ ಶಿಕ್ಷಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಈ ಸಮಸ್ಯೆಗೆ ಕಾರ್ಯಸಾಧ್ಯವಾದ ಹಣಕಾಸು ಪರಿಹಾರವನ್ನು ರೂಪಿಸಬೇಕಾಗಿದೆ.

ವಾಸ್ತವವಾಗಿ, ಒಂದು ಸಮಾಜದ ಅಭಿವೃದ್ಧಿಯನ್ನು ಕೇವಲ ವಿಶ್ವವಿದ್ಯಾನಿಲಯಗಳ ಸಂಖ್ಯೆ, ಪದವೀಧರರ ಪ್ರಮಾಣ ಅಥವಾ ಶಿಕ್ಷಣಕ್ಕೆ ಮಾಡಲಾಗುವ ಬಜೆಟ್ ಹಂಚಿಕೆಯಿಂದ ಅಳೆಯಲು ಸಾಧ್ಯವಿಲ್ಲ. ಬದಲಾಗಿ, ಆರ್ಥಿಕವಾಗಿ ದುರ್ಬಲ ವರ್ಗಗಳ ವಿದ್ಯಾರ್ಥಿಗಳು ಯಾವುದೇ ಅಡೆತಡೆಯಿಲ್ಲದೆ ಗುಣಮಟ್ಟದ ಶಿಕ್ಷಣ ಪಡೆಯಲು ಮತ್ತು ಅದನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗಿದೆಯೇ ಎಂಬುದರ ಆಧಾರದ ಮೇಲೆ ಅಭಿವೃದ್ಧಿಯನ್ನು ಅಳೆಯಬೇಕು. ವಿದ್ಯಾರ್ಥಿಗೆ ಶಿಕ್ಷಣ ಪಡೆಯಲು ಪ್ರವೇಶಾವಕಾಶ ಕಲ್ಪಿಸುವುದಷ್ಟೇ ಸರಕಾರದ ಜವಾಬ್ದಾರಿಯಲ್ಲ; ಆ ಶಿಕ್ಷಣವನ್ನು ಪೂರ್ಣಗೊಳಿಸಲು ಅಗತ್ಯವಾದ ವಸತಿ, ಆಹಾರ ಮತ್ತು ಇತರ ಮೂಲಭೂತ ಸೌಲಭ್ಯಗಳನ್ನು ಖಚಿತಪಡಿಸುವುದೂ ಅಷ್ಟೇ ಮುಖ್ಯ. ಈ ದೃಷ್ಟಿಯಿಂದ ವಿದ್ಯಾರ್ಥಿನಿಲಯಗಳ ಭೋಜನ ವೆಚ್ಚಕ್ಕೆ ಅನುದಾನ ನೀಡುವುದು ಸರಕಾರದ ಮೇಲಿನ ಅನಗತ್ಯ ಆರ್ಥಿಕ ಹೊರೆ ಎಂದು ಭಾವಿಸಬಾರದು. ಅದು ಮಾನವ ಸಂಪನ್ಮೂಲ ಅಭಿವೃದ್ಧಿ, ಸಾಮಾಜಿಕ ಬಂಡವಾಳ ನಿರ್ಮಾಣ ಮತ್ತು ಸಮಾನತೆಯ ಸಮಾಜದ ನಿರ್ಮಾಣಕ್ಕಾಗಿ ಮಾಡುವ ದೀರ್ಘಕಾಲೀನ ಹೂಡಿಕೆಯಾಗಿದೆ.

ಇಂದು ವಿದ್ಯಾರ್ಥಿಗಳ ಆಹಾರ ಮತ್ತು ವಸತಿ ಸೌಲಭ್ಯಗಳಿಗೆ ಅನುದಾನ ಕಡಿತಗೊಳಿಸುವುದರಿಂದ ಉಂಟಾಗುವ ಪರಿಣಾಮಗಳು ನಾಳೆ ಶಿಕ್ಷಣದ ಅಸಮಾನತೆ ಮತ್ತು ಸಾಮಾಜಿಕ ಹಿಂದುಳಿಯುವಿಕೆಯ ರೂಪದಲ್ಲಿ ಕಾಣಿಸಿಕೊಳ್ಳಬಹುದು. ಆದ್ದರಿಂದ ರಾಜ್ಯ ಸರಕಾರವು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ರಾಜ್ಯದ ಎಲ್ಲ ಸರಕಾರಿ ಸಾರ್ವಜನಿಕ ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿನಿಲಯಗಳಿಗೆ ಹೆಚ್ಚುವರಿ ಭೋಜನ ವೆಚ್ಚದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಯಾವುದೇ ಕಾರಣಕ್ಕೂ ಆರ್ಥಿಕ ಸಂಕಷ್ಟದ ನೆಪದಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಶಿಕ್ಷಣ ಮತ್ತು ವಸತಿ ಸೌಲಭ್ಯಗಳಿಗೆ ಧಕ್ಕೆಯಾಗಬಾರದು. ವಿದ್ಯಾರ್ಥಿನಿಲಯಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗುವ ಮೊದಲೇ ಸರಕಾರ ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಸಾಮಾಜಿಕ ನ್ಯಾಯ, ಸಮಾನ ಶಿಕ್ಷಣ ಮತ್ತು ಸಾಮಾಜಿಕ ಒಳಗೊಳ್ಳುವಿಕೆಯ ಕುರಿತು ಸರಕಾರ ಘೋಷಿಸುವ ಆಶಯಗಳು ಕೇವಲ ಘೋಷಣೆಗಳಾಗಿ ಉಳಿಯುವ ಅಪಾಯವಿದೆ.

ವಿದ್ಯಾರ್ಥಿಗಳ ಹೊಟ್ಟೆ ತುಂಬಿದಾಗಲೇ ಅವರ ಶಿಕ್ಷಣದ ಕನಸು ಸಾಕಾರಗೊಳ್ಳುತ್ತದೆ. ವಿದ್ಯಾರ್ಥಿನಿಲಯಗಳನ್ನು ಉಳಿಸುವುದು ಎಂದರೆ ಕೇವಲ ಕಟ್ಟಡಗಳನ್ನು ಉಳಿಸುವುದಲ್ಲ; ಬದಲಾಗಿ ಸಾವಿರಾರು ಬಡ ವಿದ್ಯಾರ್ಥಿಗಳ ಭವಿಷ್ಯವನ್ನು, ಅವರ ಉನ್ನತ ಶಿಕ್ಷಣದ ಅವಕಾಶಗಳನ್ನು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿದ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಶೈಕ್ಷಣಿಕ ಸಬಲೀಕರಣದ ಸಂವಿಧಾನಾತ್ಮಕ ಆಶಯಗಳನ್ನು ಉಳಿಸುವುದಾಗಿದೆ.

Tags

Social justiceHigher education
share
ಡಾ. ಸಿದ್ದರಾಜು ವಿ.ಜಿ., ಮೈಸೂರು
ಡಾ. ಸಿದ್ದರಾಜು ವಿ.ಜಿ., ಮೈಸೂರು
Next Story
X