Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಭ್ರಷ್ಟಾಚಾರದ ವಿರುದ್ಧ ಹೋರಾಟ...

ಭ್ರಷ್ಟಾಚಾರದ ವಿರುದ್ಧ ಹೋರಾಟ ನೈತಿಕವಾಗಿರಲಿ

ಡಾ. ರಝಾಕ್ ಉಸ್ತಾದಡಾ. ರಝಾಕ್ ಉಸ್ತಾದ13 Sept 2026 10:11 AM IST
share
ಭ್ರಷ್ಟಾಚಾರದ ವಿರುದ್ಧ ಹೋರಾಟ ನೈತಿಕವಾಗಿರಲಿ

ಇತ್ತೀಚೆಗೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಆ ಪಕ್ಷದ ನಾಯಕರು ವಿಶೇಷವಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಾಗೂ ರಾಜ್ಯದ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಆರೋಪದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಲಿಂಗಸುಗೂರುನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ದಿ ನಿಗಮದ ಹಣ ವರ್ಗಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ತನಿಖೆ ಎದುರಿಸಿ ಜೈಲಿಗೆ ಹೋಗಿ ಬಂದಿದ್ದಾರೆ, ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ.

ವಾಲ್ಮೀಕಿ ಅಭಿವೃದ್ದಿ ನಿಗಮದ ಹಣ ರಾಜ್ಯದ ಮತ್ತು ಬೇರೆ ರಾಜ್ಯಗಳಲ್ಲಿರುವ ಅಕೌಂಟ್‌ಗಳಿಗೆ ವರ್ಗಾವಣೆಯಾಗಿರುವುದು ಅಕ್ಷಮ್ಯ ಅಪರಾಧ. ಆ ಹಣ ರಾಜ್ಯದ ಜನರ ಹಣವಾಗಿದ್ದು, ಪ್ರತೀ ಪೈಸೆಯೂ ವಾಪಸ್ ಬರಲೇಬೇಕು ಮತ್ತು ಅದರಲ್ಲಿ ಶಾಮೀಲಾಗಿರುವ ಪ್ರತಿಯೊಬ್ಬ ಅಪರಾಧಿಗೂ ಶಿಕ್ಷೆಯಾಗಬೇಕು, ಇದರಲ್ಲಿ ಎರಡು ಮಾತಿಲ್ಲ. ಈ ನಿಗಮದ ಒಂದು ಬ್ಯಾಂಕ್ ಅಕೌಂಟ್‌ನಿಂದ ಇನ್ನೊಂದು ಬ್ಯಾಂಕ್ ಅಕೌಂಟ್‌ಗೆ ವರ್ಗಾವಣೆಯಾಗಿರುವ ೧೮೪ ಕೋಟಿ ರೂ.ಯಲ್ಲಿ ಈಗಾಗಲೇ ೧೭೯ ಕೋ.ರೂ ಸರಕಾರದ ಖಜಾನೆಗೆ ಜಮಾ ಆಗಿದೆ ಎನ್ನುವುದು ತನಿಖೆಯಲ್ಲಿ ತಿಳಿದು ಬಂದಿದೆ. ಇನ್ನುಳಿದ ಹಣವೂ ಜಮಾ ಮಾಡಿಸಲೇಬೇಕು, ಆ ಹಗರಣದಲ್ಲಿ ಭಾಗವಹಿಸಿದ ಎಲ್ಲಾ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು.

ಆದರೆ ಇದೇ ರೀತಿಯ ಪ್ರಕರಣ ಬಿಜೆಪಿ ಸರಕಾರದಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿಯೂ ನಡೆದಿತ್ತು, ಅದರಲ್ಲಿ ಸುಮಾರು ರೂ. ೯೭ ಕೋಟಿಯನ್ನು ೭೫೦ ನಕಲಿ ಫಲಾನುಭವಿ ಖಾತೆಗಳಿಗೆ ಹಾಕಿ ಭ್ರಷ್ಟಾಚಾರವೆಸಗಲಾಗಿತ್ತು, ಇದರಲ್ಲಿ ನಿಗಮ ವ್ಯವಸ್ಥಾಪಕರು ಮತ್ತು ಇತರ ಅಧಿಕಾರಿಗಳನ್ನು ಬಂಧಿಸಲಾಗಿತ್ತು, ಅವರಿಗೆ ಸೇರಿದ ೨೬ ಕೋ.ರೂ ಆಸ್ತಿಗಳನ್ನು ಜಫ್ತಿ ಮಾಡಲಾಗಿದೆ. ಈ ಪ್ರಕರಣದಲ್ಲಿ ಬಿಜೆಪಿ ಯಾವ ನಾಯಕರ ಮೇಲೆ ಕ್ರಮ ಜರುಗಿಸಿದೆ ಎನ್ನುವುದು ರಾಜ್ಯದ ಪ್ರಜ್ಞಾವಂತರ ಪ್ರಶ್ನೆಯಾಗಿದೆ.

ಅಲ್ಲದೆ ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪನವರು ಭ್ರಷ್ಟಾಚಾರದ ಆರೋಪದ ಮೇರೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಜೈಲಿಗೆ ಹೋಗಿದ್ದರು, ಆ ಪ್ರಕರಣ ಈಗಲೂ ಸುಪ್ರೀಂ ಕೋರ್ಟ್‌ನಲ್ಲಿ ತಡೆಯಾಜ್ಞೆ ಇದೆ. ಇದರಲ್ಲಿ ಯಡಿಯೂರಪ್ಪನವರ ಕುಟುಂಬದವರೂ ಆರೋಪಿಗಳಾಗಿದ್ದಾರೆ, ಈಗಿನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೂ ಆರೋಪಿಯಾಗಿದ್ದಾರೆ. ವಿಜಯೇಂದ್ರ ಅವರ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಮೇಲೆ ಪ್ರಕರಣ ಇದ್ದರೂ ಅವರನ್ನು ಬಿಜೆಪಿ ಪಕ್ಷದ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಯಡಿಯೂರಪ್ಪನವರ ವಿರುದ್ಧ ಭ್ರಷ್ಟಾಚಾರದ ಕೇಸ್ ಇಂದಿಗೂ ಇದೆ. ಆದರೆ ಅದೇ ಬಿಜೆಪಿಯಿಂದ ಯಡಿಯೂರಪ್ಪ ೨೦೧೮ ಮತ್ತು ೨೦೧೯ರಲ್ಲಿ ಎರಡು ಸಲ ಮುಖ್ಯಮಂತ್ರಿಯಾದರು. ಇನ್ನೊಬ್ಬ ಮಗ ಬಿ.ವೈ.ರಾಘವೇಂದ್ರ ಅವರ ಮೇಲೆ ೨೦೧೯ರ ಅಫಿಡವಿಟ್ ಪ್ರಕಾರ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಮತ್ತು ಮನಿ ಲಾಂಡರಿಂಗ್ ಕೇಸ್‌ಗಳಿವೆ. ಅವರಿಗೆ ಬಿಜೆಪಿ ಟಿಕೆಟ್ ನೀಡಿ ಲೋಕಸಭಾ ಸಂಸದರಾಗಿ ಆಯ್ಕೆಯಾಗುವಂತೆ ನೋಡಿಕೊಂಡಿದೆ.

ಇತ್ತೀಚೆಗೆ ಗಾಲಿ ಜನಾರ್ದನ ರೆಡ್ಡಿಯವರಿಗೆ ಒಂದು ಪ್ರಕರಣದಲ್ಲಿ ೭ ವರ್ಷ ಜೈಲು ಶಿಕ್ಷೆಯಾಗಿ ಶಾಸಕ ಸ್ಥಾನ ಕಳೆದುಕೊಂಡಿದ್ದರು, ಶಿಕ್ಷೆಯನ್ನು ಕೋರ್ಟ್ ಮೂಲಕ ತಡೆಯಾಜ್ಞೆ ಪಡೆದು ಶಾಸಕರಾಗಿ ಮುಂದುವರಿದಿದ್ದಾರೆ. ಶಾಸಕ ಜನಾರ್ದನ ರೆಡ್ಡಿಯವರು ೨೦೧೨ರಲ್ಲಿ ಹೈದರಾಬಾದ್‌ನ ಚಂಚಲಗುಡ ಜೈಲಿನಲ್ಲಿ ಇದ್ದಾಗ ಅಂದಿನ ಬಿಜೆಪಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಶಾಸಕ ಸುರೇಶ್ ಬಾಬು ಮತ್ತು ಇತರರು ಗಾಲಿ ಜನಾರ್ದನ ರೆಡ್ಡಿಯವರಿಗೆ ಬೇಲ್ ಪಡೆಯಲು ನಿವೃತ್ತ ನ್ಯಾಯಾಧೀಶರೊಂದಿಗೆ ಸೇರಿ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶರಿಗೆ ಲಂಚ ನೀಡಿರುವ ಆರೋಪದ ಮೇರೆಗೆ ನಿವೃತ್ತ ನ್ಯಾಯಾಧೀಶರು, ವಿಶೇಷ ಕೋರ್ಟ್ ನ್ಯಾಯಾದೀಶರು ಹಾಗೂ ಅಂದಿನ ಬಿಜೆಪಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಶಾಸಕ ಸುರೇಶ್ ಬಾಬು ಮತ್ತು ಇತರರನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿತ್ತು. ಆ ಪ್ರಕರಣ ಇನ್ನೂ ನಡೆಯುತ್ತಲೇ ಇದೆ. ಅದರ ನಂತರವೂ ಬಿಜೆಪಿ ಗಾಲಿ ಸೋಮಶೇಖರ ರೆಡ್ಡಿಯವರಿಗೆ ಮತ್ತು ಸುರೇಶ ಬಾಬು ಅವರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡುತ್ತಲೇ ಬಂದಿದೆ. ಜನಾರ್ದನ ರೆಡ್ಡಿ ಮೇಲೆ ೨೦ ಕ್ರಿಮಿನಲ್ ಕೇಸ್‌ಗಳಿವೆ, ಗಂಭೀರ ಸ್ವರೂಪದ ಪ್ರಕರಣಗಳಿವೆ, ಒಂದರಲ್ಲಿ ಶಿಕ್ಷೆಯಾಗಿದೆ, ಇಷ್ಟಿದ್ದರೂ ಬಿಜೆಪಿ ಗಾಲಿ ಜನಾರ್ದನ ರೆಡ್ಡಿಯವರನ್ನು ಪಕ್ಷಕ್ಕೆ ಮರು ಸೇರ್ಪಡೆಗೊಳಿಸಲಾಗಿದೆ. ಹಾಗಿರುವಾಗ ಬಿಜೆಪಿಯವರು ಯಾವ ನೈತಿಕತೆಯ ಮೇರೆಗೆ ಬಿ.ನಾಗೇಂದ್ರ ಅವರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎನ್ನುವುದೇ ಪ್ರಶ್ನೆ. ಗಾಲಿ ಜನಾರ್ದನ ರೆಡ್ಡಿಯವರು ೨೦೦೬-೦೭ರಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಯ ಗಣಿ ಮಾಲಕರ ಹತ್ತಿರ ೧೫೦ ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಇದರ ಬಗ್ಗೆ ಸಿ.ಡಿ. ಇದೆ ಎಂದೂ ಸಹ ಹೇಳಿದ್ದರು, ಆ ಪ್ರಕರಣದ ಬಗ್ಗೆಯೂ ಬಿಜೆಪಿ ಹೋರಾಟ ಮಾಡುತ್ತದೆಯೇ?

ಕೋವಿಡ್ ೧೯ನಿಂದಾಗಿ ದೇಶದ ಜನ ಸಂಕಷ್ಟದಲ್ಲಿದ್ದಾಗ ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ವೈದ್ಯಕೀಯ ಸಲಕರಣೆಗಳು, ಔಷಧಿ ಖರೀದಿ ಪ್ರಕರಣದಲ್ಲಿ ಅವ್ಯವಹಾರವಾಗಿರುವುದು ಕಂಡುಬಂದಿದೆ, ಆನಂತರ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲಾಯಿತು, ತನಿಖೆಯಲ್ಲಿ ೭,೨೦೦ ಕೋಟಿ ರೂ. ಅವ್ಯವಹಾರವಾಗಿದೆ ಎಂದು ವರದಿ ನೀಡಿದ್ದಾರೆ, ಆ ಪ್ರಕರಣದಲ್ಲಿ ೨೦೨೪ರಲ್ಲಿ ಸಚಿವ ಸಂಪುಟವು ೫೦೦ ಕೋಟಿ ರೂ.ನ್ನು ವೈದ್ಯಕೀಯ ಸಲಕರಣೆ ಸರಬರಾಜು ಮಾಡಿದ ಏಜೆನ್ಸಿಯ ಹತ್ತಿರ ವಸೂಲಿ ಮಾಡಲು ಶಿಫಾರಸು ಮಾಡಿದೆ. ಕೋವಿಡ್ ೧೯ನಲ್ಲಿ ನಡೆದ ಇನ್ನೊಂದು ಪ್ರಕರಣದಲ್ಲಿ ವೈದ್ಯಕೀಯ ಸಲಕರಣೆ ಸರಬರಾಜಿನಲ್ಲಿ ೧೬೭ ಕೋಟಿ ರೂ. ಅವ್ಯವಹಾರವಾಗಿರುವುದು ದೃಢಪಟ್ಟಿದೆ ಎಂದು ಸಿಐಡಿ ತನಿಖೆಗೆ ಸರಕಾರ ಆದೇಶಿಸಿದೆ.

ಬಿಜೆಪಿ ಸರಕಾರದ ಅವಧಿಯಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಇವರ ಮಗ ಕೆಎಎಸ್ ಅಧಿಕಾರಿ ಪ್ರಶಾಂತ ಮಂಡಳ ಅವರು ಕಚೇರಿಯಲ್ಲಿಯೇ ೪೦ ಲಕ್ಷ ರೂ. ಲಂಚ ಪಡೆಯುವಾಗ ಕರ್ನಾಟಕ ಲೋಕಾಯುಕ್ತ ಬಂಧಿಸಿತ್ತು. ಮಾಡಾಳ್ ವಿರೂಪಾಕ್ಷಪ್ಪ ಕೋರ್ಟ್ ಮೂಲಕ ಬಚಾವಾಗಿದ್ದಾರೆ, ಆದರೆ ಅವರ ಮಗನ ಮೇಲೆ ತನಿಖೆ ಇನ್ನೂ ನಡೆಯುತ್ತಿದೆ. ಇತ್ತೀಚೆಗೆ ಶಾಸಕ ಚಂದ್ರ ಲಮಾಣಿಯವರನ್ನು ೫ ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತದವರು ಬಂಧಿಸಿದ್ದರು. ಹಿಂದಿನ ಬಿಜೆಪಿ ಶಾಸಕ ನೆಹರೂ ಒಲೇಕಾರ ಅವರ ಮಗನಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕೋರ್ಟ್ ಶಿಕ್ಷೆ ಸಹ ನೀಡಿದೆ. ಹಿಂದಿನ ಬಿಜೆಪಿ ಸರಕಾರದಲ್ಲಿ ಅಂದಿನ ಶಾಸಕ ವೈ. ಸಂಪಂಗಿ ೫.೦೦ ಲಕ್ಷ ರೂ. ನಗದು ಹಾಗೂ ೪.೫ ಲಕ್ಷ ರೂ. ಚೆಕ್ ಮೂಲಕ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದು ಬಂಧಿಸಲಾಗಿತ್ತು.

ಭಾರತೀಯ ಜನತಾ ಪಕ್ಷದ ರಾಜ್ಯ ನಾಯಕರ ಸ್ಥಿತಿ ಹೀಗಿದ್ದಾಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವುದು ನೈತಿಕವಾಗಿ ಯಾರೂ ಒಪ್ಪುವಂತದ್ದಲ್ಲ, ಇದರ ಅರ್ಥ ಬೇರೆಯವರು ಭ್ರಷ್ಟಾಚಾರ ಮಾಡಲಿ ಎಂದಲ್ಲ, ಭ್ರಷ್ಟಾಚಾರ ರಹಿತ ವ್ಯವಸ್ಥೆ ಇರಬೇಕು ಎನ್ನುವುದು ಎಲ್ಲರ ಅಭಿಲಾಷೆ, ಆದರೆ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವವರು ಸ್ವಚ್ಛವಾಗಿರಬೇಕಲ್ಲವೇ?

(ಲೇಖಕರು: ಹಿರಿಯ ಬರಹಗಾರರು, ಚಿಂತಕರು)

Tags

Corruption
share
ಡಾ. ರಝಾಕ್ ಉಸ್ತಾದ
ಡಾ. ರಝಾಕ್ ಉಸ್ತಾದ
Next Story
X