ಕುವೆಂಪು ಒಂದು ಸಮುದಾಯಕ್ಕೆ ಸೀಮಿತವಲ್ಲ: ಕೋಡಿಹಳ್ಳಿ

ಬೆಂಗಳೂರು, ಅ. 11: ಕುವೆಂಪು ಅವರನ್ನು ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸಲು ಸಾಧ್ಯವಿಲ್ಲ. ಅವರಂತೆ ನಾವೆಲ್ಲ ವಿಶ್ವಮಾನವರಾಗುವ ಕನಸವನ್ನು ಕಟ್ಟಿಕೊಳ್ಳಬೇಕು ಎಂದು ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.ರವಿವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯ ಒಕ್ಕಲಿಗರ ಟ್ರಸ್ಟ್ ಆಯೋಜಿಸಿದ್ದ ಜಾನಪದ ಉತ್ಸವ, ಪ್ರತಿಭಾ ಪುರಸ್ಕಾರ ಹಾಗೂ ಪಾಲಿಕೆ ಸದಸ್ಯರಿಗೆ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಯಾವುದೇ ಕ್ಷೇತ್ರವನ್ನು ದೂರ ನಿಂತು ನೋಡುವ ಕಾಲವಿದಲ್ಲ, ಯಾರು ಯಾವ ಕ್ಷೇತ್ರವನ್ನಾದರೂ ಪ್ರವೇಶ ಮಾಡುವ ಕಾಲ ಇದಾಗಿದೆ. ಹೀಗಾಗಿ ಎಲ್ಲರೂ ಎಲ್ಲ ಕ್ಷೇತ್ರಗಳಲ್ಲಿಯೂ ಗುರುತಿಸಿಕೊಂಡು ದಾಖಲೆಗಳನ್ನು ಬರೆಯಬೇಕು ಎಂದರು.ವಿದ್ಯಾರ್ಥಿಗಳಿಗಿಂದು ಬೇಕಾದ ಎಲ್ಲ ಮೂಲಸೌಕರ್ಯಗಳನ್ನು ತಂದೆ-ತಾಯಿ ಕಲ್ಪಿಸಿಕೊಡುತ್ತಾರೆ. ವಿದ್ಯಾರ್ಥಿಗಳು ಗುರಿ ಸಾಧನೆಗಾಗಿ ಪರಿಶ್ರಮಪಡಬೇಕು ಎಂದು ಕಿವಿಮಾತು ಹೇಳಿದರು.ವಿಮರ್ಶಕ ಬೈರಮಂಗಲ ರಾಮೇಗೌಡ ಮಾತನಾಡಿ, ಸಮಾಜದ ಇತರೆ ಸಮುದಾಯಗಳು ಸಂಘಟಿತವಾಗಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ತಮ್ಮ ಸಮುದಾಯಕ್ಕೆ ಬೇಕಾದ ಸೌಲಭ್ಯಗಳನ್ನು ಪಡೆಯುತ್ತಿವೆ. ಆದರೆ, ಒಕ್ಕಲಿಗ ಸಮುದಾಯ ಸಂಘಟಿತವಾಗಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಸಂಘಟನೆಗೆ ಒಗ್ಗದ ಏಕೈಕ ಸಮುದಾಯ ವೆಂದರೆ ಅದು ಒಕ್ಕಲಿಗರದ್ದು ಸಮುದಾಯ ಎಂಬ ಅಪವಾದ ನಮ್ಮ ಮೇಲಿದ್ದು, ಸರಕಾರದಿಂದ ನಮಗೆ ದೊರೆಯಬೇಕಾದ ಸೌಲಭ್ಯಗಳನ್ನು ಪಡೆಯಲು ನಾವೆಲ್ಲ ಸಂಘಟಿತರಾಗಬೇಕು ಎಂದು ಕರೆ ನೀಡಿದರು.ದೇವನೂರ ಮಹದೇವ ಅವರು ಎದೆಗೆ ಬಿದ್ದ ಅಕ್ಷರ ಹಾಗೂ ಭೂಮಿಗೆ ಬಿದ್ದ ಬೀಜ ವ್ಯರ್ಥವಾಗುವುದಿಲ್ಲ ಎಂದಿದ್ದು, ವಿದ್ಯಾರ್ಥಿಗಳು ವಿದ್ಯೆಯನ್ನು ಸಮಾಜದ ಒಳಿತಿಗಾಗಿ ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದರು.ಬಿಬಿಎಂಪಿ ಪಾಲಿಕೆ ಸದಸ್ಯೆ ಸವಿತಾ ಮಯಾಣ್ಣ ಮಾತನಾಡಿ, ಜನರಲ್ಲಿ ಒಕ್ಕಲಿಗರು ಎಂದರೆ ಆರ್ಥಿಕವಾಗಿ ಮುಂದುವರಿದವರು ಎಂಬ ತಪ್ಪು ಕಲ್ಪನೆಯಿದೆ. ಇದರಿಂದ ಬ್ಯಾಂಕುಗಳಲ್ಲಿನ ನಮ್ಮ ಸಾಲ ಮನ್ನಾ ಆಗುತ್ತಿಲ್ಲ ಎಂದರು. ನಗರ ಪ್ರದೇಶಗಳ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ಎಲ್ಲ ಸೌಲಭ್ಯಗಳು ಗ್ರಾಮೀಣ ವಿದ್ಯಾರ್ಥಿಗಳಿಗೂ ದೊರೆಯುವಂತೆ ಮಾಡಬೇಕು ಎಂದು ಹೇಳಿದರು.
ಈ ವೇಳೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಬಿಬಿಎಂಪಿ ಚುನಾವಣೆಯಲ್ಲಿ ವಿಜೇತ ಸಮುದಾಯದ ಅಭ್ಯರ್ಥಿಗಳಿಗೆ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸ್ಫಟಿಕಪುರಿ ಮಠದ ನಂಜಾವಧೂತ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ, ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್‌ನ ರಾಜ್ಯಾಧ್ಯಕ್ಷ ಸಿ.ವಿ.ದೇವರಾಜ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಮಾಗಡಿಯ ಕೆಂಪಾಪುರದಲ್ಲಿ ಪತ್ತೆಯಾಗಿರುವ ನಾಡಪ್ರಭು ಕೆಂಪೇಗೌಡರ ಸಮಾಧಿ ಸ್ಥಳವನ್ನು ದಿಲ್ಲಿಯ ರಾಜ್‌ಘಾಟ್ ಮಾದರಿಯಲ್ಲಿ ಅಭಿವೃದ್ಧ್ಧಿಪಡಿಸಲು ನಿರ್ಧರಿಸಲಾಗಿದ್ದು, ಈ ಕಾರ್ಯಕ್ಕೆ ಎಲ್ಲರ ಸಹಕಾರ ಅಗತ್ಯವಿದೆ.
-ತಲಕಾಡು ಚಿಕ್ಕರಂಗೇಗೌಡ, ಇತಿಹಾಸ ತಜ್ಞ

Next Story