Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಭಾರತದ ‘ಕುಲ ತಿಲಕ’ರ ಪರಾಮರ್ಶೆ -- 1

ಭಾರತದ ‘ಕುಲ ತಿಲಕ’ರ ಪರಾಮರ್ಶೆ -- 1

ದಲಿತ ಶೂದ್ರರ ಮಕ್ಕಳು ಸವರ್ಣೀಯ ಮಕ್ಕಳ ಜೊತೆ ಓದುವುದನ್ನೂ ಕೂಡ ತಿಲಕರು ಉಗ್ರವಾಗಿ ಟೀಕಿಸಿದ್ದರು. ಸ್ವತಃ ದಲಿತ ಶೂದ್ರರೇ ತಮ್ಮ ಮಕ್ಕಳನ್ನು ಸವರ್ಣೀಯರ ಜೊತೆ ವ್ಯಾಸಂಗ ಮಾಡಲು ಕಳುಹಿಸುತ್ತಿಲ್ಲ ಅಂಥದ್ದರಲ್ಲಿ ಕೆಲವು ಮೂರ್ಖ ಬ್ರಿಟಿಷ್ ಅಧಿಕಾರಿಗಳು ನಮ್ಮವರೇ ಆದ ಕೆಲ ನಿಷ್ಪ್ರಯೋಜಕ ಸಮಾಜ ಸುಧಾರಕರ ಮಾತು ಕಟ್ಟಿಕೊಂಡು ಈ ತರಹದ ‘ಅಪ್ರಯೋಜಕ ಮತ್ತು ಕಾರ್ಯಸಾಧುವಲ್ಲದ’ ಕ್ರಮಗಳನ್ನು ಜಾರಿ ಮಾಡುತ್ತಿದ್ದಾರೆ ಎಂದು ಬ್ರಿಟಿಷರ ಮೇಲಧಿಕಾರಿಗಳಿಗೆ ದೂರು ಸಹ ಸಲ್ಲಿಸಿದ್ದರು. ಬ್ರಿಟಿಷರ ವಿರುದ್ಧ ಹೋರಾಟ ಮಾಡುತ್ತಲೇ ಫುಲೆ ಮತ್ತವರ ಸಂಗಡಿಗರ ಮೇಲೆ ಚಾಡಿ ಚುಚ್ಚಲು ತಿಲಕರಿಗೆ ಯಾವ ದೇಶಪ್ರೇಮವೂ ಅಡ್ಡಿ ಬರಲಿಲ್ಲ.

ವಾರ್ತಾಭಾರತಿವಾರ್ತಾಭಾರತಿ17 Oct 2015 5:54 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಾಂಬೆ ಹೈ ಕೋರ್ಟ್‌ನ ಹೃದಯ ಭಾಗದಲ್ಲಿರುವ ನ್ಯಾಯಾಂಗಣ ಕೊಠಡಿಯ 46ರ ಹೊರ ಪಾರ್ಶ್ವದಲ್ಲಿರುವ ಒಂದು ಆಕರ್ಷಕ ಫಲಕದ ಮೇಲೆ ಈ ವಾಕ್ಯಗಳನ್ನು ಕೆತ್ತಲಾಗಿದೆ. ಒಂದು ನ್ಯಾಯಾಲಯದಲ್ಲಿ ಒಬ್ಬ ಆರೋಪಿ ನೀಡಿದ ಹೇಳಿಕೆಗಳನ್ನು ಅದೇ ನ್ಯಾಯಾಲಯದ ಆವರಣ ದಲ್ಲಿ ಕೆತ್ತಿದ ಉದಾಹರಣೆ ಪ್ರಾಯಶಃ ಇಡೀ ವಿಶ್ವದಲ್ಲೇ ಇರಲಿಕ್ಕಿಲ್ಲ.
ಈ ವಾಕ್ಯಗಳನ್ನು ಹೇಳಿದ ರಾಷ್ಟ್ರೀಯ ಅಸಂತುಷ್ಟಿಯ ಜನಕ (Father of the Indian unrest), ಭಾರತದ ರಾಷ್ಟ್ರೀಯ ಚಳವಳಿಯ ಪಿತಾಮಹ, ‘ಸ್ವರಾಜ್ಯವೇ ತನ್ನ ಜನ್ಮ ಸಿದ್ಧ ಹಕ್ಕು’ ಎಂದು ಸಾರಿದ ಲೋಕಮಾನ್ಯ ಬಾಲ ಗಂಗಾಧರ ತಿಲಕರು ಸರ್ವತ್ರ ಮನ್ನಣೆ ಮತ್ತು ಗೌರವಕ್ಕೆ ಪಾತ್ರರಾದವರು. ಅವರು ಪ್ರಾರಂಭಿಸಿದ ಸಾರ್ವಜನಿಕ ಗಣೇಶೋತ್ಸವ ಇಂದು ಭಾರತಾದ್ಯಂತ ಆಚರಿಸಲಾಗುತ್ತಿದೆ.
ಬಹುಷಃ ಕಾಂಗ್ರೆಸ್, ಕಮ್ಯುನಿಸ್ಟರು ಮತ್ತು ಬಹು ಮುಖ್ಯವಾಗಿ ಸಂಘ ಪರಿವಾರದವರು ಮನಃಪೂರ್ವಕವಾಗಿ ಮತ್ತು ಸಮಾನವಾಗಿ ಗೌರವಿಸುವ ಕೆಲವೇ ರಾಷ್ಟ್ರೀಯ ನಾಯಕರಲ್ಲಿ ತಿಲಕರೊಬ್ಬರು. ಕಾಂಗ್ರೆಸ್ ಮತ್ತು ಸಂಘ ಪರಿವಾರ ಅವರನ್ನು ಒಬ್ಬ ಅಪ್ಪಟ ರಾಷ್ಟ್ರವಾದಿಯಾಗಿ ಗೌರವಿಸಿದರೆ, ಕ್ರಾಂತಿಕಾರಿ ಮಾರ್ಗವನ್ನು ಬೆಂಬಲಿಸಿ, 1917ರ ಸೊವಿಯಟ್ ಕ್ರಾಂತಿಯನ್ನು ಮತ್ತು ಅದರ ರೂವಾರಿ ಲೆನಿನ್‌ರನ್ನು ಹಾರ್ದಿಕವಾಗಿ ಹಾಡಿ ಹೊಗಳಿದ ತಿಲಕರ ಬಗ್ಗೆ ಕಮ್ಯುನಿಸ್ಟರಿಗೆ ಅತೀವ ಅಭಿಮಾನವಿದೆ. ಸ್ವತಹ ಲೆನಿನ್ ಒಂದು ಕಡೆ ತಿಲಕರ ಬಗ್ಗೆ ‘ಅತ್ಯಂತ ಸುಸ್ಥಿರ ಮತ್ತು ಪುರೋಗಾಮಿ ನಾಯಕ...ಱ (ಱ್‌ಠಿಛಿ ಞಟಠಿ ್ಚಟ್ಞಜಿಠಿಛ್ಞಿಠಿ ಚ್ಞ ್ಛಟ್ಟಡಿಚ್ಟಛ್ಝಟಟಜ್ಞಿಜ ್ಝಛಿಛ್ಟಿಱ) ಎಂದಿದ್ದಾರೆ. ತಿಲಕರ ಮೇಲೆ ದೇಶದ್ರೋಹದ ಮೊಕದ್ದಮೆ ನಡೆದಾಗ ತಿಲಕರ ಪರ ವಕಾಲತ್ತು ನಡೆಸಿದ್ದು ಸ್ವತಹ ಮುಹಮ್ಮದ್ ಅಲಿ ಜಿನ್ನಾ. ಜಿನ್ನಾ ಮತ್ತು ತಿಲಕರ ಸ್ನೇಹ ಮತ್ತು ಸಾಂಗತ್ಯದ ಬಗ್ಗೆ ಪ್ರಸಿದ್ಧ ಲೇಖಕ ಎ. ಜಿ. ನೂರಾನಿ ‘‘ ಜ್ಝಿ ಚ್ಞ ಒಜ್ಞ್ಞಿ ಇಟಞ್ಟಛಿ ಜ್ಞಿ ಊ್ಟಛಿಛಿಟಞ ಖಠ್ಟ್ಠಿಜಜ್ಝಛಿಱ ಎಂಬ ಬಹು ಚರ್ಚಿತ ಪುಸ್ತಕವನ್ನೇ ಬರೆದಿದ್ದಾರೆ. ಮುಸ್ಲಿಂ ಸಮುದಾಯವೂ ತಿಲಕರನ್ನು ತೀಕ್ಷ್ಣವಾಗಿ ವಿರೋಧಿಸಿದ ನಿದರ್ಶನಗಳಿಲ್ಲ. ಹೀಗೆ ಸಾರ್ವತ್ರಿಕ ಮನ್ನಣೆಯಿರುವ ತಿಲಕರನ್ನು ವಿಮರ್ಶೆಗೊಳಪಡಿಸುವುದು ಹಿಂದೆಯೂ ಮತ್ತು ಇಂದಿಗೂ ಸಾಕಷ್ಟು ‘ರಾಷ್ಟ್ರೀಯ ಅಸಂತುಷ್ಟಿ’ಗೆ ಕಾರಣವಾಗುವುದರಲ್ಲಿ ಸಂಶಯವೇ ಇಲ್ಲ.
ಪ್ರಾಯಶಃ ತಿಲಕರನ್ನು ಮೊಟ್ಟ ಮೊದಲ ಬಾರಿ ವಿಮರ್ಶೆ ಮಾಡಿದ್ದು ಮಹಾತ್ಮಾ ಫುಲೆ. ತಮ್ಮ ಕೇಸರಿ ಪತ್ರಿಕೆ ಪ್ರಾರಂಭಿಸಲು ನಿಧಿ ಸಂಗ್ರಹ ಮಾಡಲೋಸುಗ ಸಾರ್ವಜನಿಕ ಸಭೆಗಳನ್ನು ಆಯೋಜಿಸಿದಾಗ ಮೊಟ್ಟ ಮೊದಲ ಬಾರಿಗೆ ಫುಲೆ ತಿಲಕರ ಐತಿಹಾಸಿಕ ಆಕರಗಳನ್ನು ಸಾರ್ವಜನಿಕವಾಗಿ ಪ್ರಶ್ನಿಸಿದ್ದರು.
ಹಂಟರ್ ಆಯೋಗದ ಮುಂದೆ ಫುಲೆ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಬಗ್ಗೆ ಮನವಿ ಸಲ್ಲಿಸಿದರು. ಇದು ತಿಲಕರೂ ಸೇರಿದಂತೆ ಅನೇಕ ಸಂಪ್ರದಾಯವಾದಿಗಳ ಕೆಂಗಣ್ಣಿಗೆ ಗುರಿಯಾಯಿತು.
ತಿಲಕರು ‘ಮರಾಠ’ ಎಂಬ ತಮ್ಮ ಇಂಗ್ಲಿಷ್ ಪತ್ರಿಕೆಯಲ್ಲಿ ಸರಣಿ ಲೇಖನಗಳನ್ನು ಮತ್ತು ಸಂಪಾದಕೀಯಗಳನ್ನು ಬರೆದು ಶೂದ್ರ ಮತ್ತು ದಲಿತ ವಿದ್ಯಾರ್ಥಿಗಳು ಆಧುನಿಕ ಶಿಕ್ಷಣ ಪಡೆಯುವುದನ್ನು ಉಗ್ರವಾಗಿ ವಿರೋಧಿಸಿ ಲೇಖನ ಬರೆದರು. ಇದರ ಸಾರಾಂಶವೆಂದರೆ: ಕುಂಬಾರ, ಕುಣಬಿ, ಚಮ್ಮಾರ ಇತ್ಯಾದಿ ಜನಾಂಗಗಳು ತಮ್ಮ ವೃತ್ತಿಗಳನ್ನೇ ಮುಂದುವರಿಸಿಕೊಂಡು ಹೋಗಬೇಕು. ಶೂದ್ರರ ಮಕ್ಕಳು ಆಧುನಿಕ ಶಿಕ್ಷಣ ಪಡೆದರೆ ಅವರು ತಮ್ಮ ತಂದೆ ತಾಯಿಯರನ್ನೇ ತುಚ್ಛವಾಗಿ ಕಂಡು ಆಧುನಿಕತೆಯನ್ನೇ ಆರಾಧಿಸ ತೊಡಗುತ್ತಾರೆ. ಇತಿಹಾಸ, ಗಣಿತ, ಭೂಗೋಳ ಇತ್ಯಾದಿ ವಿಷಯಗಳನ್ನು ಓದಿದರೆ ಈ ಕೆಳಜಾತಿಯ ಜನಕ್ಕೆ ಪ್ರಯೋಜನವಾದರೂ ಏನು? ಇನ್ನು ಇಂಥವರ ಮಕ್ಕಳೆಲ್ಲ ಓದಿ ವಿದ್ಯಾವಂತರಾದರೆ ಹೊಲಗಳಲ್ಲಿ ದುಡಿಯುವವರು ಯಾರು? ತೆರಿಗೆದಾರರ ಸಾವಿರಗಟ್ಟಲೆ ಹಣವನ್ನು ಈ ರೀತಿ ಅಪಾತ್ರರ ಮೇಲೆ ಖರ್ಚು ಮಾಡಲು ಸರಕಾರಕ್ಕೆ ನಾಚಿಗೆಯಾಗಬೇಕು. ತಮ್ಮ ತಮ್ಮ ಕುಲ ಕಸುಬಿನಲ್ಲೇ ಶೂದ್ರ ಮತ್ತು ದಲಿತರ ಮುಕ್ತಿ ಇರುವುದು.
ಹಾಗೆಯೇ, ತಿಲಕರು ಇಂತಹುದೇ ಕಾರಣಗಳಿಗಾಗಿ ಮಹಿಳೆಯರು ವಿದ್ಯಾವಂತರಾಗುವುದನ್ನು ಕೂಡ ವಿರೋಧಿಸಿದ್ದರು. ಮಹಿಳೆ ಆಧುನಿಕ ಶಿಕ್ಷಣ ಪಡೆದರೆ ತನ್ನ ತಂದೆ ತಾಯಿ ಮತ್ತು ಗಂಡಂದಿರಿಗೆ ವಿಧೇಯಳಾಗಿರಲು ಸಾಧ್ಯವೇ ಎಂದು ಪ್ರಶ್ನಿಸಿದರು.
ದಲಿತ ಶೂದ್ರರ ಮಕ್ಕಳು ಸವರ್ಣೀಯ ಮಕ್ಕಳ ಜೊತೆ ಓದುವುದನ್ನೂ ಕೂಡ ತಿಲಕರು ಉಗ್ರವಾಗಿ ಟೀಕಿಸಿದ್ದರು. ಸ್ವತಹ ದಲಿತ ಶೂದ್ರರೇ ತಮ್ಮ ಮಕ್ಕಳನ್ನು ಸವರ್ಣೀಯರ ಜೊತೆ ವ್ಯಾಸಂಗ ಮಾಡಲು ಕಳುಹಿಸುತ್ತಿಲ್ಲ ಅಂಥದ್ದರಲ್ಲಿ ಕೆಲವು ಮೂರ್ಖ ಬ್ರಿಟಿಷ್ ಅಧಿಕಾರಿಗಳು ನಮ್ಮವರೇ ಆದ ಕೆಲ ನಿಷ್ಪ್ರಯೋಜಕ ಸಮಾಜ ಸುಧಾರಕರ ಮಾತು ಕಟ್ಟಿಕೊಂಡು ಈ ತರಹದ ‘ಅಪ್ರಯೋಜಕ ಮತ್ತು ಕಾರ್ಯಸಾಧುವಲ್ಲದ’ ಕ್ರಮಗಳನ್ನು ಜಾರಿ ಮಾಡುತ್ತಿದ್ದಾರೆ ಎಂದು ಬ್ರಿಟಿಷರ ಮೇಲಧಿಕಾರಿಗಳಿಗೆ ದೂರು ಸಹ ಸಲ್ಲಿಸಿದರು. ಬ್ರಿಟಿಷರ ವಿರುದ್ಧ ಹೋರಾಟ ಮಾಡುತ್ತಲೇ ಫುಲೆ ಮತ್ತವರ ಸಂಗಡಿಗರ ಮೇಲೆ ಚಾಡಿ ಚುಚ್ಚಲು ತಿಲಕರಿಗೆ ಯಾವ ದೇಶಪ್ರೇಮವೂ ಅಡ್ಡಿ ಬರಲಿಲ್ಲ.
ತಿಲಕರು ಇಷ್ಟೆಲ್ಲಾ ದ್ವೇಷ ಸಾಧಿಸಿದರೂ ಮಹಾತ್ಮಾ ಫುಲೆ ತಿಲಕರನ್ನು ಹೇಗೆ ನಡೆಸಿಕೊಂಡರು ಎಂಬುದು ಬಹು ಮುಖ್ಯ.
1882ರಲ್ಲಿ, ಶಿವಾಜಿ ಮಹಾರಾಜರ ವಂಶದವರಿಗೆ ಬ್ರಿಟಿಷ್ ಸರಕಾರ ಅನ್ಯಾಯವೆಸಗಿದೆ ಎಂದು (ತಿಲಕರು ಶಾಹು ಮಹಾರಾಜರಿಗೆ ಅಪಮಾನ ಮಾಡಿದ್ದಷ್ಟೇನೂ ಬ್ರಿಟಿಷರು ಮಾಡಿರಲಿಕ್ಕಿಲ್ಲ), ತಿಲಕರು ಮತ್ತು ಅಗರ್ಕರ್ ಎಂಬ ಇನ್ನೊಬ್ಬ ಮುಖಂಡರ ಜೊತೆ ಸೇರಿಕೊಂಡು ಒಂದು ಚಳವಳಿ ಸಂಘಟಿಸಿದರು. ಇದರಿಂದ ಕಾನೂನು ಭಂಗವಾಯಿತೆಂಬ ಆರೋಪ ಹೊರಿಸಿ ಬ್ರಿಟಿಷರು ಇವರಿಬ್ಬರನ್ನೂ ಮುಂಬೈನಲ್ಲಿನ ಡೊಂಗ್ರಿಯಲ್ಲಿ ಬಂಧಿಸಿದರು. ಆಗ ನ್ಯಾಯಾಲಯದಲ್ಲಿ 10,000 ರೂ. ಜಾಮೀನು ಕೊಡಬೇಕೆಂಬ ಶರತ್ತನ್ನು ವಿಧಿಸಲಾಯಿತು. ಅಷ್ಟು ಆಗುವಾಗ ತಿಲಕರ ಹಿಂದೆ ಓಡಾಡಿಕೊಂಡಿದ್ದ ಸುಧಾರಕರೆಲ್ಲ ದಿಕ್ಕಾ ಪಾಲಾಗಿ ಓಡಿದ್ದರು. ಮಹಾತ್ಮಾ ಫುಲೆ ತಾವೇ ಸ್ವಯಂ ಪ್ರೇರಣೆಯಿಂದ ಸತ್ಯಶೋಧಕ ಸಮಾಜದ ವತಿಯಿಂದ ಹಳ್ಳಿ ಹಳ್ಳಿಗೆ ತಿರುಗಿ ವಂತಿಗೆ ಸಂಗ್ರಹ ಮಾಡಿ ತಿಲಕ ಮತ್ತು ಅವರ ಸಂಗಡಿಗರನ್ನು ಬೇಲ್ ಹಣ ಕೊಟ್ಟು ಬಿಡಿಸಿದರು. ನಂತರ ನಡೆದ ತಿಲಕರ ಮೇಲೆ ಹೂಡಲಾದ ಮೊಕದ್ದಮೆಯಲ್ಲಿ ತಿಲಕರಿಗೆ ಮೂರು ತಿಂಗಳ ಕಾರಾವಾಸ ಶಿಕ್ಷೆಯಾಯಿತು. ತಿಲಕರ ಬಿಡುಗಡೆಗೆ ಒತ್ತಾಯಿಸಿ ನಂತರದಲ್ಲಿ ತಿಲಕರ ಬಂಧನವನ್ನು ಖಂಡಿಸಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದ ಮಹಾತ್ಮಾ ಫುಲೆ ಒಂದು ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಿದರು. ಈ ಕಾರ್ಯಕ್ರಮದಿಂದಾಗಿಯೇ ಮುಂಬೈ ಪ್ರಾಂತದಲ್ಲೆಲ್ಲ ತಿಲಕರು ಪ್ರಸಿದ್ಧ್ದಿಗೆ ಬಂದರು.
ಇದಾದ ನಂತರ, ತಿಲಕರು ಫುಲೆ ಮಹಾತ್ಮರಿಗೆ ‘‘ನಿಮ್ಮ ಈ ಮಹದುಪಕಾರ ಹೇಗೆ ತೀರಿಸಲಿ’’ ಎಂದು ಕೇಳಿದಾಗ ಮಹಾತ್ಮರು ಒಂದೇ ಒಂದು ಮಾತು ಹೇಳಿದರು ‘‘ತಿಲಕ್, ನೀವು ಒಬ್ಬ ಮಹಾನ್ ನಾಯಕನಾಗಿ ಬೆಳೆದು ನಿಲ್ಲುವ ಸರ್ವ ಸಾಧ್ಯತೆಗಳನ್ನೂ ನಾನು ನೋಡಬಲ್ಲೆ. ನಿಮ್ಮಲ್ಲಿ ಒಂದೇ ಒಂದು ದೋಷವಿದೆ; ಕೇವಲ ಬ್ರಾಹ್ಮಣರನ್ನು ಸಂಘಟಿಸುವುದನ್ನು ಬಿಟ್ಟುಬಿಡಿ. ಸಮಾಜದ ಎಲ್ಲ ವರ್ಗಗಳಿಗೂ ನೇತೃತ್ವ ಕೊಡಿ. ಇಷ್ಟೇ ನಿಮ್ಮಲ್ಲಿ ನಾನು ಕೇಳಿಕೊಳ್ಳುವುದು’’.
ದುರ್ದೈವವೆಂದರೆ, ಹೀಗೆ ತಮ್ಮನ್ನು ಸಲಹಿದ ಮಹಾತ್ಮಾ ಫುಲೆ ಹುತಾತ್ಮರಾದಾಗ ತಮ್ಮ ದೈನಿಕದಲ್ಲಿ ಮಹಾತ್ಮರ ನಿಧನದ ಕುರಿತು ಒಂದೇ ಒಂದು ಚಿಕ್ಕ ಸಾಲನ್ನು ಸುದ್ದಿಯ ರೂಪದಲ್ಲಿ ಕೂಡ ಬರೆಯಲಿಲ್ಲ! ಇನ್ನು ತಿಲಕರ ಸಂಗಡಿಗ ಅಗರ್ಕರ್ ಕೂಡ ಈ ವಿಷಯದಲ್ಲಿ ಹಿಂದೆ ಬೀಳಲಿಲ್ಲ. ತಮ್ಮ ಪತ್ರಿಕೆ ‘ಸುಧಾರಕ’ (!?)ದಲ್ಲಿ ಮಹಾತ್ಮರ ನಿಧನದ ಬಗ್ಗೆ ಒಂದು ಅಕ್ಷರವನ್ನೂ ಬರೆಯಲಿಲ್ಲ. ಇದೇ ತಿಲಕರು ಮಹಾತ್ಮರಿಗೆ ಸಲ್ಲಿಸಿದ ಕಾಣಿಕೆ!
ಇನ್ನು ತಿಲಕರು ಶಾಹು ಮಹಾರಾಜ್ ಮತ್ತು ಬಾಬಾ ಸಾಹೇಬರನ್ನು ನಡೆಸಿಕೊಂಡ ರೀತಿ ಇನ್ನೂ ಆಸಕ್ತಿಕರವಾಗಿದೆ.
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X