ನ್ಯಾಯಾಲಯದ ಭಾಷೆ ಇಂಗ್ಲಿಷ್: ಸುಪ್ರೀಂ ಕೋರ್ಟ್ ಸ್ಪಷ್ಟನೆ
ಹಿಂದಿ ಹಾಗೂ ಪ್ರಾದೇಶಿಕ ಭಾಷೆಗಳಲ್ಲಿ ನ್ಯಾಯಾಲಯಗಳ ತೀರ್ಪಿನ ಪ್ರತಿಗಳು ಲಭ್ಯವಾಗುವಂತೆ ಮಾಡಲು ಆದೇಶ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದೆ ಹಾಗೂ ಇಂಗ್ಲಿಷ್ ನ್ಯಾಯಾಲಯದ ಅಧಿಕೃತ ಭಾಷೆಯಾಗಿದೆಯೆಂದು ಅದು ಸ್ಪಷ್ಟಪಡಿಸಿದೆ.
ನ್ಯಾಯಾಲಯದ ಭಾಷೆಯು ಇಂಗ್ಲಿಷ್ ಆಗಿದ್ದು, ಇಂತಹ ಆದೇಶವನ್ನು ನೀಡಲು ಸಾಧ್ಯವಿಲ್ಲವೆಂದು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಟಿ.ಎಸ್.ಠಾಕೂರ್, ಎ.ಕೆ.ಸಿಕ್ರಿ ಹಾಗೂ ಆರ್.ಭಾನುಮತಿ ಅವರನ್ನೊಳಗೊಂಡ ನ್ಯಾಯಪೀಠ ತಿಳಿಸಿದೆ.
ಹಿಂದಿಯನ್ನು ಸುಪ್ರೀಂಕೋರ್ಟ್‌ನ ಅಧಿಕೃತ ಭಾಷೆಯಾಗಿ ಮಾಡಲು, ಸಂವಿಧಾನದಲ್ಲಿ ತಿದ್ದುಪಡಿ ಮಾಡಬೇಕೆಂದು ಕೋರಿ ಅರ್ಜಿಯನ್ನು ಸಲ್ಲಿಸಲಾಗಿತ್ತು.