ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ
ಕೊಣಾಜೆ: ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ಸಂಘಟನಾತ್ಮಕ ಕೆಲಸ, ಕಾಲಬದ್ಧ ಸಂಶೋಧನೆ, ಪ್ರಸರಣ ಇತ್ಯಾದಿ ಕಾರ್ಯಗಳನ್ನು ನಿರ್ವಹಿಸಲು ಅಂಬಿಗರ ಚೌಡಯ್ಯ ಅಧ್ಯಯನ ಪೀಠ ಸಂಶೋಧನಾ ಸಹಾಯಕರ (ತಾತ್ಕಾಲಿಕ) ಹುದ್ದೆಗೆ ಆರ್ಜಿಗಳನ್ನು ಆಹ್ವಾನಿಸಿದೆ. ಸಂಶೋಧನಾ ಸಹಾಯಕರ ಹುದ್ದೆಗೆ ಮಾಸಿಕ ಸಂಭಾವನೆ ರೂ. 14,000/- ಆಗಿದ್ದು, ಪಿಹೆಚ್.ಡಿ ಸಂಶೋಧನೆ ಮಾಡಲು ಅವಕಾಶವಿರುತ್ತದೆ.
ಅರ್ಹತೆಗಳು: ಕನ್ನಡ, ಇಂಗ್ಲಿಷ್, ಇತಿಹಾಸ, ರಾಜಕೀಯ ಶಾಸ್ತ್ರ, ಸಮಾಜಶಾಸ್ತ್ರ, ಅರ್ಥಶಾಸ್ತ್ರ, ಸಮಾಜಕಾರ್ಯ ಅಥವಾ ಪತ್ರಿಕೋದ್ಯಮ ಮತ್ತು ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಟ ಶೇಕಡಾ 55 ಅಂಕಗಳನ್ನು ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಅಪೇಕ್ಷಣೀಯ. ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪುನಃ ಅರ್ಜಿಸಲ್ಲಿಸುವ ಅಗತ್ಯವಿರುವುದಿಲ್ಲ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ ಮತ್ತು ಅನುಭವವನ್ನು ಒಳಗೊಂಡಿರುವ ಸ್ವವಿವರದೊಂದಿಗೆ ಅರ್ಜಿಯನ್ನು ದಿನಾಂಕ 11-01-2016ರ ಒಳಗಾಗಿ ಸಂಯೋಜಕರು, ಅಂಬಿಗರ ಚೌಡಯ್ಯ ಅಧ್ಯಯನ ಪೀಠ, ರಾಜ್ಯಶಾಸ್ತ್ರ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ಮಂಗಳೂರು-574199,
ಇ- politicalscience@mangaloreuniversity.ac.in





