ಪ್ರತಾಪ್‌ಚಂದ್ರ ಶೆಟ್ಟಿಗೆ ಅಭಿನಂದನೆ ಕಾರ್ಯಕ್ರಮ

ಕೊಣಾಜೆ, ಡಿ.31: ವಿಧಾನ ಪರಿಷತ್ ಚುನಾವಣೆ ಯಲ್ಲಿ ಪ್ರತಾಪ್‌ಚಂದ್ರ ಶೆಟ್ಟಿ ಅವರ ಗೆಲುವು ತಳ ಮಟ್ಟದ ಕಾರ್ಯಕರ್ತರು ಮುಖಂಡರ ಮೇಲಿಟ್ಟ ನಂಬಿಕೆ ಉಳಿಸಿದೆ ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.
ಅವರು ಮಂಗಳೂರು ವಿಧಾನಸಭಾ ಕ್ಷೇತ್ರದ ಉಳ್ಳಾಲ ಹಾಗೂ ಮುಡಿಪು ಬ್ಲಾಕ್ ಕಾಂಗ್ರೆಸ್ ವತಿ ಯಿಂದ ದೇರಳಕಟ್ಟೆಯ ಖಾಸಗಿ ಸಭಾಂಗಣದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್‌ಚಂದ್ರ ಶೆಟ್ಟಿ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೋಡಿಜಾಲ್ ಇಬ್ರಾಹೀಂ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಅಲ್ಪಸಂಖ್ಯಾತ ವಿಭಾಗದ ರಾಜ್ಯ ಉಪಾಧ್ಯಕ್ಷ ಯು.ಕೆ. ಮೋನು ಹಾಗೂ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಮಾತನಾಡಿದರು.
ಕಾಂಗ್ರೆಸ್ ಮಹಿಳಾ ವಿಭಾಗದ ಜಿಲ್ಲಾ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ದರ್ಶಿ ಸದಾಶಿವ ಉಳ್ಳಾಲ್, ಎಸ್ಸಿ-ಎಸ್ಟಿ ವಿಭಾಗ ಜಿಲ್ಲಾಧ್ಯಕ್ಷ ಎನ್. ಪದ್ಮನಾಭ ನರಿಂಗಾನ, ಜಿಪಂ ಸದಸ್ಯ ಎನ್.ಎಸ್. ಕರೀಂ ಹಾಗೂ ಮೆಲ್ವಿನ್ ಡಿಸೋಜ, ಬ್ಲಾಕ್ ಕಾಂಗ್ರೆಸ್ ಮಹಿಳಾ ವಿಭಾಗ ಅಧ್ಯಕ್ಷೆ ಸುರೇಖಾ ಚಂದ್ರಹಾಸ್, ಬೆಳ್ಮ ಗ್ರಾಪಂ ಅಧ್ಯಕ್ಷೆ ವಿಜಯ ಕೃಷ್ಣಪ್ಪ, ಮುಖಂಡರಾದ ಸುರೇಶ್ ಭಟ್ನಗರ, ಚಾಯರವಳಚ್ಚಿಲ್ ಹುಸೈನ್ ಉಪಸ್ಥಿತರಿದ್ದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಉಳ್ಳಾಲ್ ಸ್ವಾಗತಿಸಿದರು.
ತಾಪಂ ಸದಸ್ಯ ಮುಹಮ್ಮದ್ ಮುಸ್ತಫಾ ಹರೇಕಳ ಕಾರ್ಯಕ್ರಮ ನಿರೂಪಿಸಿದರು.







