Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಅಗತ್ಯ:...

ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಅಗತ್ಯ: ಪ್ರಧಾನಿ ನರೇಂದ್ರ ಮೋದಿ

ವಾರ್ತಾಭಾರತಿವಾರ್ತಾಭಾರತಿ3 Jan 2016 11:46 PM IST
share
ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಅಗತ್ಯ: ಪ್ರಧಾನಿ ನರೇಂದ್ರ ಮೋದಿ

ತುಮಕೂರು: ಎಚ್‌ಎಎಲ್ ಘಟಕಕ್ಕೆ ಶಂಕುಸ್ಥಾಪನೆ

ತುಮಕೂರು, ಜ.3: ಆಹಾರ ಉತ್ಪಾದನೆಯಲ್ಲಿ ದೇಶ ಸ್ವಾವಲಂಬನೆ ಸಾಧಿಸಿದ ರೀತಿಯಲ್ಲಿಯೇ ರಕ್ಷಣಾ ವಲಯದಲ್ಲಿಯೂ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಇಂದು ಶಂಕುಸ್ಥಾಪನೆ ಮಾಡುತ್ತಿರುವ ಎಚ್.ಎ.ಎಲ್. ಲಘು ಯುದ್ಧ ವಿಮಾನ ನಿರ್ಮಾಣ ಘಟಕ ಮಹತ್ವದ ಹೆಜ್ಜೆಯಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಬಿದರಹಳ್ಳ ಕಾವಲ್ ಬಳಿ ನಿರ್ಮಾಣವಾಗುತ್ತಿರುವ ಎಚ್.ಎ.ಎಲ್. ಲಘು ಯುದ್ಧ ವಿಮಾನ ನಿರ್ಮಾಣ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.

ದೇಶದ ಎರಡನೆ ಪ್ರಧಾನಿ ಲಾಲ್ ಬಹದ್ದೂರ ಶಾಸ್ತ್ರಿ ಅವರ ಘೋಷಣೆ ‘ಜೈಜವಾನ್ ಜೈಕಿಸಾನ್’ನಂತೆ, ರೈತರ ಸತತ ಪರಿಶ್ರಮದ ಫಲವಾಗಿ ಇಂದು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲಾಗಿದೆ. ಆದರೆ, ಜೈ ಜವಾನ್ ಘೋಷಣೆ ಇನ್ನೂ ಸಂಪೂರ್ಣವಾಗಿ ಕಾರ್ಯಗತವಾಗಿಲ್ಲ.

ಈ ಹಿನ್ನೆಲೆಯಲ್ಲಿ ರಕ್ಷಣಾ ಇಲಾಖೆಯಲ್ಲಿಯೂ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಎಚ್.ಎ.ಎಲ್.ಕಾರ್ಖಾನೆ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದರು.

ದೇಶದ ರಕ್ಷಣಾಗಾಗಿ ಹಗಲಿರುಳು ಹೋರಾಡುವ ನಮ್ಮ ಸೈನಿಕರಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ನೀಡಬೇಕಿದೆ. ಇದುವರೆಗೂ ನಮ್ಮ ಸೈನ್ಯಕ್ಕೆ ಬೇಕಾದ ಪರಿಕರಗಳನ್ನು ವಿದೇಶದಿಂದ ಕೊಳ್ಳಬೇಕಾಗಿದೆ. 2015ರ ಶಸ್ತ್ರಗಳು ಬೇಕೇಂದರೆ 2020ರವರೆಗೆ ಕಾಯಬೇಕಿದೆ. ಆದ್ದರಿಂದ ನಮ್ಮ ಸೇನೆಗೆ ಅಗತ್ಯವಿರುವ ಪರಿಕರಗಳನ್ನು ನಮ್ಮಲ್ಲಿಯೇ ಉತ್ಪಾದಿಸಿಕೊಳ್ಳುವಂತ ಸ್ಥಿತಿ ನಿರ್ಮಾಣವಾಗಬೇಕಿದೆ. ಈ ನಿಟ್ಟಿನಲ್ಲಿ ವಿದೇಶಿ ಒಪ್ಪಂದಗಳು ಏರ್ಪಡುವ ಸಂದರ್ಭದಲ್ಲಿ ನಮ್ಮ ದೇಶದಲ್ಲಿಯೇ ಶಸ್ತ್ರಾಸ್ತ್ರಗಳನ್ನು ಉತ್ಪಾದನೆ ಮಾಡುವಂತೆ ಷರತ್ತು ವಿಧಿಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ತುಮಕೂರು ಜಿಲ್ಲೆಯ ಪುಟ್ಟ ಹಳ್ಳಿ ನಿರ್ಮಾಣವಾಗುತ್ತಿರುವ ಎಚ್.ಎ.ಎಲ್. ಘಟಕದಿಂದ ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡಿದೆ. ಇಡೀ ವಿಶ್ವವೇ ಈ ಪುಟ್ಟ ಹಳ್ಳಿಯತ್ತ ಗಮನಹರಿಸುವಂತಾಗಿದೆ.ಇಲ್ಲಿ ಕೇವಲ ಹೆಲಿಕ್ಯಾಪ್ಟರ್ ಮಾತ್ರ ಉತ್ಪಾದಿಸುತ್ತಿಲ್ಲ. ದೇಶದ ಸೈನಿಕರಿಗೆ ಅಗತ್ಯವಿರುವ ಪರಿಕರಗಳನ್ನು ಉತ್ಪಾದಿಸುವ ಮಹತ್ವದ ಘಟಕ ಇದಾಗಲಿದೆ ಎಂದ ಅವರು, ಇಲ್ಲಿ ಉತ್ಪಾದಿಸುವ ಹೆಲಿಕ್ಯಾಪ್ಟರ್ ಅತ್ಯಂತ ದುರ್ಗಮ ಪ್ರದೇಶಗಳಲ್ಲಿ ಹೋರಾಡುವ ಸೈನಿಕರಿಗೆ ಅಗತ್ಯ ಪರಿಕರಗಳು, ಔಷದೋಪಚಾರಗಳನ್ನು ಸಾಗಾಟ ಮಾಡಲು ಹೆಚ್ಚು ಉಪಯೋಗವಾಗಲಿದೆ ಎಂದರು ಮೋದಿ ನುಡಿದರು.

ಹೊಸ ವರ್ಷದ 2016ರಲ್ಲಿ ಶಂಕುಸ್ಥಾಪನೆಗೊಂಡಿರುವ ಈ ಕಾರ್ಖಾನೆ ರಕ್ಷಣಾ ದೃಷ್ಟಿಯಿಂದ ಹೆಚ್ಚು ಸಹಕಾರಿಯಾಗಲಿದೆ. ಈ ಕಾರ್ಖಾನೆಗೆ ಭಾರತ ಸರಕಾರ ಎಲ್ಲಾ ರೀತಿಯ ಅರ್ಥಿಕ ನೆರವು ನೀಡಲಿದ್ದು, ಐದು ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಭಾರತೀಯ ತಂತ್ರಜ್ಞಾನದಿಂದ ತಯಾರಾಗುವ ಹೆಲಿಕ್ಯಾಪ್ಟರ್ 2018ರಲ್ಲಿ ಭೂಮಿಯಿಂದ ಹಾರಬೇಕು. ಮುಂದಿನ 15 ವರ್ಷಗಳಲ್ಲಿ 600 ಹೆಲಿಕ್ಯಾಪ್ಟರ್ ದೇಶದ ರಕ್ಷಣಾ ವಲಯದಲ್ಲಿ ಕೆಲಸ ಮಾಡುವ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೇವೆ. ಈ ನಿರೀಕ್ಷೆಯನ್ನು ಎಚ್.ಎ.ಎಲ್.ನ ನುರಿತ ತಂತ್ರಜ್ಞರು, ಎಂಜಿನಿಯರಗಳು, ದಕ್ಷ ನೌಕರರು ಸಕಾರಗೊಳಿಸಲಿದ್ದಾರೆ ಎಂಬ ನಂಬಿಕೆ ನಮಗಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ಎಚ್‌ಎಎಲ್ ಘಟಕದ ಸ್ಥಾಪನೆಯಿಂದ ಪ್ರತ್ಯೇಕ್ಷ ಹಾಗೂ ಪರೋಕ್ಷವಾಗಿ 4,000 ಜಿಲ್ಲೆಯ ಕುಟುಂಬಗಳಿಗೆ ಉದ್ಯೋಗ ದೊರೆಯಲಿದೆ. ಅಲ್ಲದೆ, ಈ ಭಾಗದ ಅರ್ಥಿಕ, ಸಾಮಾಜಿಕ ಸ್ಥಿತಿಗತಿಗಳು ಬದಲಾಗಲಿವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ ಅವರು, ಒಂದು ರೈತ ಕುಟುಂಬದಲ್ಲಿ ಸಮರ್ಥವಾದ ಗಂಡ ಮಕ್ಕಳಿದ್ದರೂ ಕೂಡ ಕೃಷಿಗೆ ತೊಡಗಿಕೊಳ್ಳುವವರ ಸಂಖ್ಯೆ ಕಡಿಮೆಯಿದೆ. ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಇಂತಹ ಕಾರ್ಖಾನೆಗಳು ಗ್ರಾಮೀಣ ಭಾಗದಲ್ಲಿ ನಿರ್ಮಾಣವಾದರೆ ಆ ಭಾಗದ ನಿರುದ್ಯೋಗಿಗಳಿಗೆ ಉದ್ಯೋಗ ಲಭ್ಯವಾಗಲಿದೆ ಎಂದರು.

ಸಂವಿಧಾನ ಶಿಲ್ಪಿಡಾ.ಬಿ.ಆರ್.ಅಂಬೇಡ್ಕರ್, ದೇಶದಲ್ಲಿರುವ ಭೂಮಿಯೂ ಇಲ್ಲ, ಉದ್ಯೋಗವೂ ಇಲ್ಲ. ದೇಶದಲ್ಲಿ ಸಮಾನತೆ ಬರಬೇಕಾದರೆ ಎಲ್ಲರಿಗೂ ಉದ್ಯೋಗ ದೊರೆಯುಬೇಕು. ಅದಕ್ಕಾಗಿ ಕೈಗಾರಿಕಾ ಕ್ರಾಂತಿ ಆಗಬೇಕು ಎಂದು ಪ್ರತಿಪಾದಿಸಿದ್ದರು. ಎಚ್‌ಎಎಲ್‌ನಿಂದ ದೇಶದ ರಕ್ಷಣಾ ವಲಯ ಬಲಗೊಳ್ಳುವ ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್ ಆಶಯವೂ ಈಡೇರಿದಂತಾಗುತ್ತದೆ ಎಂದು ಮೋದಿ ನುಡಿದರು.

ಭಾರತ ಸರಕಾರ ಈ ಯೋಜನೆ ಅನುಷ್ಠಾನಕ್ಕೆ ನೆರವು ನೀಡಿದೆ, ಕರ್ನಾಟಕ ಸರಕಾರ ಕೂಡ ಹೆಚ್ಚಿನ ರೀತಿ ಸಹಕಾರ ನೀಡಿ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಮುಂದಾಗಿದೆ. ಕಾರ್ಖಾನೆಗೆ ಅಗತ್ಯವಿರುವ ಭೂಮಿ, ನೀರು ನೀಡಿ ಯೋಜನೆ ತ್ವರಿತವಾಗಿ ಆರಂಭಗೊಳ್ಳಲು ನೆರವು ನೀಡಿದ್ದು, ಎಚ್‌ಎಎಲ್ ಕಾರ್ಖಾನೆಯಿಂದ ಕರ್ನಾಟಕ ಸಹ ಹೆಚ್ಚು ಲಾಭ ಪಡೆಯಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

 ವೇದಿಕೆಯಲ್ಲಿ ಕೇಂದ್ರ ರಕ್ಷಣಾ ಸಚಿವ ಮನೋಹರ ಪಾರಿಕ್ಕರ್, ರಾಜ್ಯಪಾಲ ವಾಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಸದಾನಂದಗೌಡ, ಅನಂತಕುಮಾರ್, ಸಿದ್ದೇಶ್ವರ್, ಸಚಿವರಾದ ಡಾ.ಜಿ.ಪರಮೇಶ್ವರ್, ಆರ್.ವಿ.ದೇಶಪಾಂಡೆ, ಟಿ.ಬಿ.ಜಯಚಂದ್ರ, ಎಚ್‌ಎಎಲ್ ಅಧ್ಯಕ್ಷ ಸುವರ್ಣರಾಜು, ಕೇಂದ್ರ ರಕ್ಷಣಾ ಇಲಾಖೆಯ ಉತ್ಪಾದನಾ ವಿಭಾಗದ ಕಾರ್ಯದರ್ಶಿ ಅಶೋಕಕುಮಾರ್ ಗುಪ್ತ, ಸಂಸದ ಎಸ್.ಪಿ.ಮುದ್ದಹನುಮೇಗೌಡ ಮೊದಲಾದವರು ಉಪಸ್ಥಿತರಿದ್ದರು.

ತುಮಕೂರು ಹೆಲಿಕಾಪ್ಟರ್ ಕಾರ್ಖಾನೆ ವಿಶೇಷತೆ

ತುಮಕೂರು, ಜ.3: ಜಿಲ್ಲೆಯಲ್ಲಿ ಅತಿದೊಡ್ಡ ಕಾರ್ಖಾನೆ ಎನ್ನುವ ಹೆಗ್ಗಳಿಕೆಯೊಂದಿಗೆ ಗುಬ್ಬಿ ತಾಲೂಕಿನ ಬಿದರೆಹಳ್ಳಿ ಕಾವಲ್ 610 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ಸೇನಾ ಯುಟಿಲಿಟಿ ಹೆಲಿಕಾಪ್ಟರ್ ತಯಾರಿಕಾ ಘಟಕದಿಂದ 3,000 ಕೆ.ಜಿ. ತೂಕದ ಲೈಟ್ ಯುಟಿಲಿಟಿ ಹೆಲಿಕಾಪ್ಟರ್ ತಯಾರಿಸುವ ಉದ್ದೇಶವನ್ನು ಹೆಚ್‌ಎಎಲ್ ಹೊಂದಿದೆ. ಭೂಸೇನೆ, ವಾಯುಸೇನೆಗೆ ಈ ಹೆಲಿಕಾಪ್ಟರ್ ಹೆಚ್ಚು ಬಳಕೆಯಾಗಲಿದೆ. 6 ಆಸನ ವ್ಯವಸ್ಥೆಯುಳ್ಳ ಈ ಹೆಲಿಕಾಪ್ಟರ್ ಉತ್ಪಾದನೆಗೆ ಹಂತಹಂತವಾಗಿ 5,000 ಕೋಟಿ ರೂ. ಬಂಡವಾಳವನ್ನು ಕೇಂದ್ರ ಸರಕಾರ ಹೂಡಲಿದ್ದು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ 4,000 ಜನರಿಗೆ ಉದ್ಯೋಗವಕಾಶ ದೊರೆಯಲಿದೆ. ಭವಿಷ್ಯದಲ್ಲಿ ಇಲ್ಲಿಯೇ ಹತ್ತು ಸಾವಿರ ಟನ್ ಸಾಮರ್ಥ್ಯದ ದೊಡ್ಡ ಹೆಲಿಕಾಪ್ಟರ್ ತಯಾರಿ ಗುರಿಯನ್ನು ಎಚ್‌ಎಎಲ್ ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X