ಬ್ಯಾರೀಸ್ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ
ಕುಂದಾಪುರ, ಜ.3: ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ 2015-16ನೆ ಸಾಲಿನ ವಾರ್ಷಿಕ ಕ್ರೀಡಾಕೂಟ ಶನಿವಾರ ಜರಗಿತು. ಕೋಡಿಯ ಕೌನ್ಸಿಲರ್ ಪ್ರಭಾಕರ್ ಶೇರೆಗಾರ್ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಮಾಸ್ಟರ್ ಮಹಮೂದ್ ಅಧ್ಯಕ್ಷತೆ ವಹಿಸಿದ್ದರು. ಹಾಜಿ ಕೆ.ಮೊಹಿದ್ದೀನ್ ಬ್ಯಾರಿ ಸ್ಮಾರಕ ಅನುದಾನಿತ ಪ್ರೌಢಶಾಲೆಯ ಕಾರ್ಯದರ್ಶಿ ಅಬ್ದುಲ್ಲಾ ಕ್ರೀಡಾಜ್ಯೋತಿ ಬೆಳಗಿಸಿದರು.
ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ತೌಸಿಫ್ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂಸ್ಥೆಗಳ ಆಡಳಿತ ನಿರ್ದೇಶಕ ಪ್ರೊ.ಚಂದ್ರಶೇಖರ್ ದೋಮ ಪ್ರಾಸ್ತಾವಿಕ ಮಾತನ್ನಾಡಿದರು. ಡಾ.ಕೃಷ್ಣರಾಜ ಕರಬ ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಇಲ್ಯಾಸ್ ವಂದಿಸಿದರು.
Next Story





