ಅಪಘಾತ: ಗಾಯಾಳು ಮೃತ್ಯು
ಹೆಬ್ರಿ, ಜ.3: ಹೆಬ್ರಿ ಗ್ರಾಮದ ಬಂಗಾರುಗುಡ್ಡೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಳಿ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡ ಕೊಡ್ಚೆಬೆಟ್ಟುವಿನ ಸುರೇಂದ್ರ ಹೆಗ್ಡೆ(44) ಎಂಬವರು ಶನಿವಾರ ಸಂಜೆ ಮೃತಪಟ್ಟಿದ್ದಾರೆ.
ಇವರು ಡಿ.30ರಂದು ಬೈಕ್‌ನಲ್ಲಿ ಹೆಬ್ರಿಯಿಂದ ಮನೆಗೆ ತೆರಳುತ್ತಿದ್ದ ವೇಳೆ ದನವೊಂದು ಅಡ್ಡ ಬಂದ ಪರಿಣಾಮ ಬೈಕ್ ಹತೋಟಿ ತಪ್ಪಿರಸ್ತೆಗೆ ಬಿದ್ದು ಗಾಯಗೊಂಡಿದ್ದರು. ಬಳಿಕ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆಸಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





