Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಧಾರ್ಮಿಕ ಅಸಹಿಷ್ಣುತೆ ಬಗ್ಗೆ...

ಧಾರ್ಮಿಕ ಅಸಹಿಷ್ಣುತೆ ಬಗ್ಗೆ ಶಾರುಕ್,ಆಮಿರ್ ಹೇಳಿಕೆಗಳಲ್ಲಿ ತಪ್ಪಿಲ್ಲ: ಅಪರ್ಣಾ ಸೇನ್

ವಾರ್ತಾಭಾರತಿವಾರ್ತಾಭಾರತಿ4 Jan 2016 12:39 AM IST
share
ಧಾರ್ಮಿಕ ಅಸಹಿಷ್ಣುತೆ ಬಗ್ಗೆ ಶಾರುಕ್,ಆಮಿರ್ ಹೇಳಿಕೆಗಳಲ್ಲಿ ತಪ್ಪಿಲ್ಲ: ಅಪರ್ಣಾ ಸೇನ್

ಹೊಸದಿಲ್ಲಿ,ಜ.3: ಭಾರತದಲ್ಲಿ ಧಾರ್ಮಿಕ ಅಸಹಿಷ್ಣುತೆ ಕುರಿತು ಆಮಿರ್ ಖಾನ್ ಮತ್ತು ಶಾರುಕ್ ಖಾನ್ ಅವರ ಹೇಳಿಕೆಗಳಲ್ಲಿ ಯಾವುದೇ ತಪ್ಪಿಲ್ಲ ಎಂದು ಖ್ಯಾತ ಬಂಗಾಳಿ ನಿರ್ದೇಶಕಿ ಅಪರ್ಣಾ ಸೇನ್ ಹೇಳಿದ್ದಾರೆ.


ಸಾಧ್ವಿ ಪ್ರಾಚಿ ಪ್ರತಿಕ್ರಿಯೆಯು ಧಾರ್ಮಿಕ ಅಸಹಿಷ್ಣುತೆ ವಿರುದ್ಧದ ಪ್ರತಿಭಟನೆಗಿಂತ ಹೆಚ್ಚು ವಿಭಜನಕಾರಿಯಾಗಿದೆ ಎಂದು ಅವರು ನುಡಿದರು.

ರವಿವಾರ ಆಂಗ್ಲ ಸುದ್ದಿವಾಹಿನಿಯೊಂದಿಗೆ ಮಾತನಾಡುತ್ತಿದ್ದ ಅವರು, ಇದು ಹಾಸ್ಯಾಸ್ಪದವಾಗಿದೆ. ನಾನು ಆಗ ಸಾಮಾಜಿಕ ಜಾಲತಾಣದಲ್ಲಿ ನನ್ನ ಆಕ್ರೋಶವನ್ನೂ ವ್ಯಕ್ತಪಡಿಸಿದ್ದೆ. ಶಾರುಕ್ ಹೇಳಿದ್ದರಲ್ಲಿ ತಪ್ಪೇನಿದೆ? ವಾಸ್ತವದಲ್ಲಿ ಸಾಧ್ವಿ ಹೇಳಿದ್ದು ಹೆಚ್ಚು ಒಡಕು ಮಾಡುವಂಥದ್ದಾಗಿದೆ. ಆಮಿರ್ ಬಗ್ಗೆ ಹೇಳುವುದಾದರೆ ಅವರು ಟಿವಿಯಲ್ಲಿ ಬಿತ್ತರಗೊಂಡ ಅತ್ಯಂತ ಹೆಚ್ಚು ರಾಷ್ಟ್ರಪ್ರೇಮವನ್ನು ಮೆರೆದ ಕಾರ್ಯಕ್ರಮಗಳಲ್ಲೊಂದಾದ ಸತ್ಯಮೇವ ಜಯತೆಯನ್ನು ನಮಗೆ ನೀಡಿದ್ದಾರೆ. ಅವರು ಮುಸ್ಲಿಮ್ ಆಗಿದ್ದಾರೆ ಎಂಬ ಕಾರಣಕ್ಕೆ ಅವರು ತನ್ನ ಅಭಿಪ್ರಾಯವನ್ನು ಮುಕ್ತವಾಗಿ ವ್ಯಕ್ತಪಡಿಸಲು ಅವಕಾಶವಿಲ್ಲ ಅಷ್ಟೇ ಎಂದು ಹೇಳಿದರು.

ಇದು ಭಾರತದಲ್ಲಿ ಅಭದ್ರತೆಯ ಮಟ್ಟವನ್ನು ಸೂಚಿಸುತ್ತದೆ. ಆಮಿರ್‌ರಂತಹವರು ಭಾರತಕ್ಕಿಂತ ಹೆಚ್ಚು ಅಭದ್ರತೆಯನ್ನು ಅನುಭವಿಸುತ್ತಿರುವ ಹಲವಾರು ರಾಷ್ಟ್ರಗಳಿವೆ ಎನ್ನುವುದು ನನಗೆ ಗೊತ್ತು. ಆದರೆ ಭಾರತವೆಂದೂ ಹೀಗಿರಲಿಲ್ಲ ಎಂದು ಸೇನ್ ನುಡಿದರು.

ಭಾರತದಲ್ಲಿ ಧರ್ಮದ ಹೆಸರಿನಲ್ಲಿ ಅಪರಾಧಗಳನ್ನೆಸಗಿರುವವರು ಸಾಮಾನ್ಯವಾಗಿ ಅಭಯವನ್ನು ಹೊಂದಿಯೇ ಅಂತಹ ಕೃತ್ಯಗಳನ್ನೆಸಗಿದ್ದಾರೆ ಎಂದ ಅವರು, ಯಾರೇ ಆದರೂ ಒಬ್ಬ ವ್ಯಕ್ತಿ ಗೋಮಾಂಸ ತಿಂದಿದ್ದಕ್ಕಾಗಿ ಆತನನ್ನು ಕೊಲ್ಲುತ್ತೇವೆ ಎಂದು ಹೇಳಿ ಬಳಿಕ ಯಾವುದೇ ದಂಡನೆಯಿಲ್ಲದೆ ಪಾರಾಗುವುದು ಹೇಗೆ ಸಾಧ್ಯ? ಇದಕ್ಕಾಗಿ ಎರಡು ಗೌರವಾನ್ವಿತ ಧರ್ಮಗಳ ಸ್ವಘೋಷಿತ ರಕ್ಷಕರನ್ನು ದೂರಬೇಕು ಎನ್ನುವುದು ನನ್ನ ಅಭಿಪ್ರಾಯ.ಧರ್ಮಗಳು ಬೆಳೆಯಬೇಕು ಮತ್ತು ವಿಕಸನಗೊಳ್ಳಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X