Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೈಜ್ಞಾನಿಕ ಪ್ರಗತಿಗೆ ಹೆಚ್ಚಿನ ಹಣ...

ವೈಜ್ಞಾನಿಕ ಪ್ರಗತಿಗೆ ಹೆಚ್ಚಿನ ಹಣ ತೊಡಗಿಸಿ

ವಾರ್ತಾಭಾರತಿವಾರ್ತಾಭಾರತಿ4 Jan 2016 11:30 PM IST
share

ನೊಬೆಲ್ ಪುರಸ್ಕೃತ ವಿಜ್ಞಾನಿಗಳ ಅಭಿಮತ

ಮೈಸೂರು, ಜ.4: ಕಳೆದ ಹತ್ತು ವರ್ಷಗಳಲ್ಲಿ ಭಾರತದ ಜಿಡಿಪಿ ದ್ವಿಗುಣಗೊಂಡಿದೆ. ಆದರೆ, ವೈಜ್ಞಾನಿಕ ಕ್ಷೇತ್ರಕ್ಕೆ ತೊಡಗಿಸುತ್ತಿರುವ ಹಣದಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ದೇಶವು ವಿಜ್ಞಾನ ಕ್ಷೇತ್ರದಲ್ಲಿ ಬೆಳವಣಿಗೆ ಸಾಧಿಸಬೇಕಾದರೆ ಆರ್ಥಿಕ ಕ್ಷೇತ್ರದ ಬೆಳವಣಿಗೆಗೆ ಅನುಗುಣವಾಗಿ ವೈಜ್ಞಾನಿಕ ಕ್ಷೇತ್ರದಲ್ಲಿ ಹಣ ತೊಡಗಿಸಬೇಕು ಇದು ನೊಬೆಲ್ ಪುರಸ್ಕೃತ ವಿಜ್ಞಾನಿಗಳು ಅಭಿಪ್ರಯಿಸಿದ್ದಾರೆ.
ಭಾರತೀಯ ವಿಜ್ಞಾನ ಕಾಂಗ್ರೆಸ್ ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸಿರುವ ಐವರು ನೊಬೆಲ್ ಪುರಸ್ಕೃತ ವಿಜ್ಞಾನಿಗಳ ಜೊತೆ ಸೋಮವಾರ ಆಯೋಜಿಸಲಾಗಿದ್ದ ಮಾಧ್ಯಮ ಸಂವಾದದಲ್ಲಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಚೀನಾ ದೇಶದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಅನುಗುಣವಾಗಿ ವಿಜ್ಞಾನ ಕ್ಷೇತ್ರಕ್ಕೆ, ಸಂಶೋಧನಾ ಕ್ಷೇತ್ರಕ್ಕೆ ನೀಡುತ್ತಿರುವ ಹಣ ದುಪ್ಪಟ್ಟುಗೊಂಡಿದೆ. ಇಂತಹ ಬೆಳವಣಿಗೆ ಭಾರತಕ್ಕೂ ಅವಶ್ಯಕ. ಮೂಲ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ತೊಡಗಿಸಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

ಭಾರತದ ರಾಜಕೀಯ ನೇತಾರರು ಅಲ್ಪಾವಧಿಯಲ್ಲಿ ಫಲಿತಾಂಶ ಕಾಣುವ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ವೈಜ್ಞಾನಿಕ ಸಂಶೋಧನೆ ಎಂಬುದು ದೀರ್ಘಕಾಲೀನ ಶ್ರಮ. ದೀರ್ಘಾವಧಿಯಲ್ಲಿ ಫಲಿತಾಂಶ ನೀಡುವ ಕ್ಷೇತ್ರ. ಆದ್ದರಿಂದಲೇ ಈ ಕ್ಷೇತ್ರದಲ್ಲಿ ಬಂಡವಾಳ ತೊಡಗಿಸುವಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ. ಇಂತಹ ಮನೋಭಾವ ಬದಲಾಗಬೇಕಿದೆ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಅವಕಾಶ ಸೃಷ್ಟಿಯಾಗಲಿ: ಪ್ರತಿಭಾ ಫಲಾಯನ ಕುರಿತ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು ಭಾರತದ ಪ್ರತಿಭಾವಂತ ವಿಜ್ಞಾನಿಗಳು, ತಂತ್ರಜ್ಞರು ವಿದೇಶಗಳಲ್ಲಿ ಅವಕಾಶ ಕಂಡುಕೊಳ್ಳುತ್ತಿ ರುವುದನ್ನು ಪ್ರಸ್ತಾಪಿಸಿದರು. ಯಾವುದೇ ದೇಶವು ಪ್ರತಿಭಾವಂತರಿಗೆ ಅವಕಾಶದ ಬಾಗಿಲನ್ನು ಮುಚ್ಚಿ ತಮ್ಮಲ್ಲಿಯೇ ಕೂಡಿಹಾಕಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದು ನಿರೀಕ್ಷಿತ ಫಲಿತಾಂಶವನ್ನೂ ನೀಡುವುದಿಲ್ಲ. ಅವಕಾಶಗಳನ್ನು ಸೃಷ್ಟಿಸುವ ಮೂಲಕ ಪ್ರತಿಭಾ ಪಲಾಯನ ತಡೆಗಟ್ಟಬೇಕು ಎಂದರು.
ಮೂಲವಿಜ್ಞಾನಕ್ಕೆ ಪ್ರೋತ್ಸಾಹ ದೊರಕಲಿ: ವೈಜ್ಞಾನಿಕ ಕ್ಷೇತ್ರದ ಪ್ರಗತಿಗೆ, ವಿಜ್ಞಾನದ ಕಡೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಉತ್ತಮ ಶಿಕ್ಷಣ ಅಗತ್ಯವಿದೆ. ಶಿಕ್ಷಕರಿಂದ ಉತ್ತಮ ಶಿಕ್ಷಕರು ರೂಪುಗೊಳ್ಳಬೇಕು. ಈ ಉತ್ತಮ ಶಿಕ್ಷಕರು ಅತ್ಯುತ್ತಮ ಶಿಕ್ಷಕರನ್ನು ರೂಪಿಸಬೇಕು. ಇದಕ್ಕಾಗಿ ಶಿಕ್ಷಕರಿಗೆ ಉತ್ತಮ ವೇತನ ದೊರೆಯಬೇಕು. ಎಂಜಿನಿಯರ್‌ಗಳಿಗೆ, ವೈದ್ಯರಿಗೆ ದೊರೆಯುವುದಕ್ಕಿಂತ ಹೆಚ್ಚಿನ ಸವಲತ್ತು ಮೂಲವಿಜ್ಞಾನ ಕ್ಷೇತ್ರದಲ್ಲಿ ದುಡಿಯುವವರಿಗೆ, ಶಿಕ್ಷಕರಿಗೆ, ಸಂಶೋಧನೆಯಲ್ಲಿ ತೊಡಗಿರುವವರಿಗೆ ದೊರೆಯಬೇಕಾಗಿದೆ ಎಂದು ಅಭಿಪ್ರಾಯ ಪಟ್ಟರು.
ವೈಜ್ಞಾನಿಕ ಸಂಶೋಧನೆಗಳ ಫಲ ಮನುಕುಲದ ಅಭಿವೃದ್ಧಿಗೆ ಪೂರಕವಾಗಿರ ಬೇಕೇ ವಿನ: ಮಾರಕವಾಗಬಾರದು. ಶಾಲಾ ಹಂತದಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ಹೆಚ್ಚಿನ ಆದ್ಯತೆ ದೊರೆಯಬೇಕು. ಹೆಚ್ಚಿನ ಹಣ ತೊಡಗಿಸಬೇಕು ಇದರಿಂದ ಮಧ್ಯದಲ್ಲಿಯೇ ಶಾಲೆ ಬಿಡುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಅವರು ಹೇಳಿದರು.
ವೈಜ್ಞಾನಿಕ ಸಂಶೋಧನೆಗಳ ಗುಣಮಟ್ಟ ಕುಸಿತವಾಗುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ವಿಜ್ಞಾನಿಗಳು, ಭಾರತದಲ್ಲಿ ಸಂಶೋಧನೆಗಳ ಗುಣಮಟ್ಟ ಕುಸಿತವಾಗುತ್ತಿರುವುದು ನಿಜ. ಇದಕ್ಕೆ ಕಾರಣ ಆ ಕ್ಷೇತ್ರದತ್ತ ವಹಿಸಿರುವ ನಿರ್ಲಕ್ಷ್ಯ. ಸಂಶೋಧನೆಗೆ ಹೆಚ್ಚಿನ ಹಣ ತೊಡಗಿಸುವುದೇ ಅಲ್ಲದೆ, ಉತ್ತಮ ಗುಣಮಟ್ಟದ ಶಿಕ್ಷಕರನ್ನು ರೂಪಿಸುವ ಪ್ರಯತ್ನವಾಗಬೇಕು. ಮೂಲವಿಜ್ಞಾನದತ್ತ ವಿದ್ಯಾರ್ಥಿಗಳನ್ನು ಆಕರ್ಷಿಸುವ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದರು.
  ಡಿಸ್ಕವರ್ ಇನ್ ಇಂಡಿಯಾ ಘೋಷಣೆಯಾಗಲಿ: ಉತ್ತಮ ವಾದುದನ್ನು ಸಾಧಿಸುವ ಯುವ ವಿಜ್ಞಾನಿಗಳನ್ನು ರೂಪಿಸಬೇಕು. ಮುಂದಿನ 20-30 ವರ್ಷಗಳಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ಉತ್ತಮ ಭವಿಷ್ಯವಿದೆ. ಹೊಸ ತಂತ್ರಜ್ಞಾನ, ಹೊಸ ಆವಿಷ್ಕಾರಗಳು, ಹೊಸ ಉತ್ಪನ್ನಗಳು, ವಿಶ್ವಮಟ್ಟದಲ್ಲಿ ಭಾರತವನ್ನು ಮುಂಚೂಣಿಗೆ ತಂದು ನಿಲ್ಲಿಸಲಿವೆ. ಮೇಕ್ ಇನ್ ಇಂಡಿಯಾ ಘೋಷಣೆ ಜತೆಗೆ ಡಿಸ್ಕವರ್ ಇನ್ ಇಂಡಿಯಾ ಘೋಷಣೆ ಸಹ ಚಾಲ್ತಿಗೆ ಬರಬೇಕು ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟರು.
ಭಾರತೀಯ ಮೂಲದ ನೊಬೆಲ್ ಪುರಸ್ಕೃತ ವಿಜ್ಞಾನಿ ಪ್ರೊ.ಮಂಜುಲ್ ಭಾರ್ಗನ್ ಮಾತನಾಡಿ, ಭಾರತದಲ್ಲಿ ಮೂಲ ವಿಜ್ಞಾನಕ್ಕೆ ಹೆಚ್ಚಿನ ಅವಕಾಶಗಳಿವೆ. ಆದರೆ, ಹೆಚ್ಚಿನ ವಿದ್ಯಾರ್ಥಿಗಳು ಎಂಜಿನಿಯರ್‌ಗಳಾಗಲು ಬಯಸುತ್ತಿದ್ದಾರೆ. ಅತ್ಯುತ್ತಮ ಎಂಜಿನಿಯರ್‌ಗಳು ಭಾರತದಲ್ಲಿ ರೂಪುಗೊಳ್ಳುತ್ತಿದ್ದಾರೆ. ಆದರೆ, ಮೂಲವಿಜ್ಞಾನದಲ್ಲಿ ಪರಿಣಿತರು ರೂಪುಗೊಳ್ಳುತ್ತಿಲ್ಲ.

 ಮೇಕ್ ಇನ್ ಇಂಡಿಯಾ ಘೋಷಣೆಯಾದರೆ ಮಾತ್ರ ಸಾಲದು, ಭಾರತದಲ್ಲಿಯೇ ಸಂಶೋಧಿಸಿ ಎಂಬ ಘೋಷಣೆಯನ್ನು ಸಾಕಾರಗೊಳಿಸಬೇಕು. ಭಾರತದಲ್ಲಿಯೇ ತಂತ್ರಜ್ಞಾನವನ್ನು ಅಭಿವೃದ್ಧಿಗೊಳಿಸಿ, ಭಾರತದಲ್ಲಿಯೇ ತಯಾರಾಗುವಂತಹ ದಿನಗಳು ಬರಬೇಕು ಇದಕ್ಕಾಗಿ ತಜ್ಞ ವಿಜ್ಞಾನಿಗಳು ಭಾರತದಲ್ಲಿ ರೂಪುಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಭರತ ಲಾಲ್ ಮೀನಾ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಮೊದಲಾದವರು ಉಪಸ್ಥಿತರಿದ್ದರು.

2014ರ ಫೀಲ್ಡ್ ಮೆಡಲ್ ಪ್ರಶಸ್ತಿ ಪುರಸ್ಕೃತ ಪ್ರೊ.ಮಂಜುಲ್ ಭಾರ್ಗವ್, ಭೌತಶಾಸ್ತ್ರದಲ್ಲಿ 2004ರಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಪ್ರೊ.ದೇವಿಡ್ ಗ್ರಾಸ್, ವೈದ್ಯಶಾಸ್ತ್ರದಲ್ಲಿ 2012ರಲ್ಲಿ ನೊಬೆಲ್ ಪ್ರಶಸ್ತಿ ಪಡೆದಿರುವ ಜಾನ್ ವಿ.ಗುರ್ದಾನ್, ಭೌತಶಾಸ್ತ್ರದಲ್ಲಿ 2012ರಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಪ್ರೊ.ಸೆರ್ಜೆ ಹೆಡೋಚ್ ಹಾಗೂ 2011ರಲ್ಲಿ ರಸಾಯನಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಡಾನ್ ದಚ್‌ಮನ್ ಸಂವಾದದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X