ವಾಹನ ಢಿಕ್ಕಿ: ವೃದ್ಧೆ ಮೃತ್ಯು
ವಿಟ್ಲ, ಜ.4: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಗೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವೃದ್ಧೆ ಸ್ಥಳದಲ್ಲೇ ಮೃತಪಟ್ಟ ಘಟನೆ ಪೂಂಜಾಲಕಟ್ಟೆ ಠಾಣಾ ವ್ಯಾಪ್ತಿಯ ವಾಮದಪದವು ಸಮೀಪದ ಇರ್ವತ್ತೂರುಪದವು ಎಂಬಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಗಿರಿಜಾ ಶೆಡ್ತಿ (70) ಎಂದು ಗುರುತಿಸಲಾಗಿದೆ. ಾಹನ ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಗಿರಿಜಾರನ್ನು ಸ್ಥಳೀಯರು ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಮೃತರ ಸಂಬಂಧಿ ಹರೀಶ್ ಶೆಟ್ಟಿ ಪೊಲೀಸರಿಗೆ ದೂರು ನೀಡಿದ್ದಾರೆ.
Next Story





