ದಿನಗೂಲಿ ನೌಕರರ ಸಂಘದಿಂದ ಧರಣಿ

ಮಂಗಳೂರು: ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ದಿನಗೂಲಿ ನೌಕರರ ಸಂಘದ ನೇತೃತ್ವದಲ್ಲಿ ಅರಣ್ಯ ಇಲಾಖೆಯಲ್ಲಿ ಪಿಸಿಪಿ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರು ಇಂದು ಅಳಪೆಯ ಅರಣ್ಯ ಭವನದಲ್ಲಿರುವ ಮಂಗಳೂರು ವೃತ್ತದ ಮುಖ್ಯ ಅರಣ್ಯಸಂರಕ್ಷಣಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.
ಈ ಸಂದರ್ಭ ರಾಜ್ಯಾಧ್ಯಕ್ಷ ಎ ಎಂ ನಾಗರಾಜು, ಜಿಲ್ಲಾಧ್ಯಕ್ಷ ಎಸ್ ಹರೀಶ್, ಉಪಾಧ್ಯಕ್ಷ ಮೋಹನ್ ಡಿ,ಸತೀಶ್, ಸದಾನಂದ, ಚಿದಾನಂದ, ಚಂದ್ರಶೇಖರ, ಸಾಧುಕುಲಾಲ್, ಶೇಖರ್, ಸತೀಶ್ ಕೆ ಎಸ್, ಸರಿನ, ಶೈಲಜಾ ಮುಂತಾದವರು ಉಪಸ್ಥಿತರಿದ್ದರು.
Next Story





