ಜ.9ರಂದು ರಾಜ್ಯಮಟ್ಟದ ಅಂಧರ ಸಾಂಸ್ಕೃತಿಕ ಕಾರ್ಯಕ್ರಮ
ಬೆಂಗಳೂರು, ಜ. 5: ಸ್ನೇಹ ದೀಪ ಅಂಗವಿಕಲರ ಸಂಸ್ಥೆ ವತಿಯಿಂದ ಜ. 9ರಿಂದ ಎರಡು ದಿನಗಳ ಕಾಲ ರಾಜ್ಯಮಟ್ಟದ ಅಂಧರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಲ್ಲೇಶ್ವರಂನ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ರಜತ ಭವನದಲ್ಲಿ ಆಯೋಜಿಸಲಾಗಿದೆ.
ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಸಂಸ್ಥೆಯ ಸಂಸ್ಥಾಪಕ ಕೆ.ಪಾಲ್ ಮುದ್ದಾ ಮಾತನಾಡಿ, ಕಾರ್ಯಕ್ರಮದಲ್ಲಿ 85 ಪ್ರತಿಭಾವಂತ ಅಂಧರು ಭಾವಗೀತೆ, ಜಾನಪದ, ಚಿತ್ರಗೀತೆ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ಮಿಮಿಕ್ರಿ, ನೃತ್ಯಗಳನ್ನು ಮಾಡಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ನಟ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
Next Story





