ನೂತನ ಮುಖ್ಯಕಾರ್ಯದರ್ಶಿಯಿಂದ ಅಧಿಕಾರಿಗಳ ಸಭೆ
ಬೆಂಗಳೂರು, ಜ.5: ರಾಜ್ಯ ಸರಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಅರವಿಂದ್ ಜಾಧವ್ ಸರಕಾರದ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದರು.
ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸರಕಾರದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಕಡತಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡುವುದು ಸೇರಿದಂತೆ ಇನ್ನಿತರ ಪ್ರಮುಖ ಸಲಹೆಗಳನ್ನು ಮುಖ್ಯಕಾರ್ಯದರ್ಶಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಕಾಲ ಯೋಜನೆಯಡಿ ಬರುವ ಸೇವೆಗಳು ಜನ ಸಾಮಾನ್ಯರಿಗೆ ತ್ವರಿತಗತಿಯಲ್ಲಿ ಲಭ್ಯವಾಗಬೇಕು. ನಗರ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ನಡುವೆ ಹೊಂದಾಣಿಕೆ ಏರ್ಪಟ್ಟು, ಕಾಮಗಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳ್ಳುವಂತೆ ಗಮನ ಹರಿಸಬೇಕು. ಇದರಿಂದ ಆರ್ಥಿಕ ಹಾಗೂ ಸಮಯದ ಉಳಿತಾಯವಾಗಲಿದೆ ಎಂದು ಅರವಿಂದ್ ಜಾಧವ್ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
Next Story





