ಸಬ್ ಇನ್ಸ್‌ಪೆಕ್ಟರ್, ಪಿಡಿಒ ಪರೀಕ್ಷೆಗೆ ತರಬೇತಿ
ಉಡುಪಿ, ಜ.5: ಕರ್ನಾಟಕ ರಾಜ್ಯ ಮುಕ್ತ ವಿವಿಯ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರಕಾರವು ಎಪ್ರಿಲ್‌ನಲ್ಲಿ ನಡೆಸಲು ಉದ್ದೇಶಿಸಿರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಪಿಡಿಒ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ.
ತರಬೇತಿಯನ್ನು ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿವಿ ಆವರಣ ದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ನೀಡಲಾಗುವುದು. ಆಸಕ್ತರು ಜ.9ರೊಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯ ಮುಕ್ತ ಗಂಗೋತ್ರಿ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿ ಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0821-2515944ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆೆ ತಿಳಿಸಿದೆ.
Next Story





