ಐಎಸ್‌ಐ ಏಜೆಂಟ್‌ಗೆ ನ್ಯಾಯಾಂಗ ಬಂಧನ
ಹೊಸದಿಲ್ಲಿ, ಜ. 5: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ಆರೋಪದಲ್ಲಿ ಬಂಧಿತನಾಗಿರುವ ಭಾರತೀಯ ವಾಯು ಪಡೆಯ ಮಾಜಿ ಅಧಿಕಾರಿ ಕೆ.ಕೆ. ರಂಜಿತ್‌ನಿಗೆ ದಿಲ್ಲಿಯ ನ್ಯಾಯಾಲಯವೊಂದು ಸೋಮವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಆತನ ವಿಚಾರಣೆಯಿಂದ ಪಠಾಣ್‌ಕೋಟ್ ವಾಯುಪಡೆ ನೆಲೆ ಮೇಲೆ ಪ್ರಸಕ್ತ ನಡೆದಿರುವ ಭಯೋತ್ಪಾದಕ ದಾಳಿ ಬಗ್ಗೆ ಯಾವ ಮಾಹಿತಿಯೂ ಸಿಕ್ಕಿಲ್ಲ ಎಂಬುದಾಗಿ ದಿಲ್ಲಿ ಪೊಲೀಸರು ಹೇಳಿದ ಬಳಿಕ ನ್ಯಾಯಾಲಯ ಈ ನಿರ್ಧಾರ ತೆಗೆದುಕೊಂಡಿತು.
ಭಯೋತ್ಪಾದಕ ದಾಳಿಯ ಬಗ್ಗೆ ಆತ ಮಾಹಿತಿ ಹೊಂದಿರಬಹುದು ಎಂಬ ಆಧಾರದಲ್ಲಿ ಆತನನ್ನು ವಿಚಾರಣೆಗೊಳಪಡಿಸಲು ಆತನ ಪೊಲೀಸ್ ಕಸ್ಟಡಿಯನ್ನು ಜನವರಿ 2ರಂದು ನ್ಯಾಯಾಲಯವು ವಿಸ್ತರಿಸಿತ್ತು.
ಸೋಮವಾರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ದಿಲ್ಲಿ ಕ್ರೈಮ್ ಬ್ರಾಂಚ್ ಪೊಲೀಸರು, ಆತನಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದರು.
Next Story





